ಬೆಳಗಾವಿ- ಬೆಳಗಾವಿ ಜಿಲ್ಲೆಯಲ್ಲಿ ಅತ್ಯಂತ ಕುತೂಹಲ ಕೆರಳಿಸಿ ಜಿಲ್ಲೆಯಾದ್ಯಂತ ಚರ್ಚೆಗೆ ಗ್ರಾಸವಾಗಿರುವ ಬೆಳಗಾವಿ ಉತ್ತರ ಮತ ಕ್ಷೇತ್ರದ ಬಿಜೆಪಿ ಟಿಕೆಟ್ ಯಾರಿಗೆ ? ಅನ್ನೋದನ್ನು ನಿರ್ಧರಿಸಲು ರಾಜ್ಯದ ಬಿಜೆಪಿ ನಾಯಕರು ಎಪ್ರೀಲ್ 5 ರಂದು ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಮಹತ್ವದ ಸಭೆ ಕರೆದಿದ್ದಾರೆ ಎಂದು ಬಿಜೆಪಿಯ ಉನ್ನತ ಮೂಲಗಳು ತಿಳಿಸಿವೆ
ಎಪ್ರಿಲ್ 5 ರಂದು ಮಧ್ಯಾಹ್ನ 1 ಘಂಟೆಗೆ ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಈ ಸಭೆ ನಡೆಯಲಿದ್ದು ಜಿಲ್ಲೆಯ ಬಿಜೆಪಿ ಶಾಸಕರು ,ಬೆಳಗಾವಿ ಜಿಲ್ಲೆಯ ಬಿಜೆಪಿ ಆಕಾಂಕ್ಷಿಗಳು, ಜಿಲ್ಲೆಯ ಬಿಜೆಪಿ ಮುಖಂಡರು ಸಭೆಗೆ ಹಾಜರಿರುವಂತೆ ರಾಜ್ಯ ಬಿಜೆಪಿ ಹೈಕಮಾಂಡ್ ಜಿಲ್ಲೆಯ ನಾಯಕರಿಗೆ ಸೂಚನೆ ನೀಡಿದೆ ಎಂದು ತಿಳಿದು ಬಂದಿದೆ
ಬೆಳಗಾವಿ ಉತ್ತರ ಮತಕ್ಷೇತ್ರದ ಟಿಕೆಟ್ ಕುರಿತು ಮಹತ್ವದ ಚರ್ಚೆ ನಡೆಯಲಿದ್ದು ಉಳಿದ ಕ್ಷೇತ್ರದ ಅಭ್ಯರ್ಥಿಗಳನ್ನು ಅಂತಿಮಗೊಳಿಸುವ ನಿಟ್ಟಿನಲ್ಲಿ ರಾಜ್ಯದ ಬಿಜೆಪಿ ನಾಯಕರು ಬೆಳಗಾವಿ ಜಿಲ್ಲೆಯ ನಾಯಕರ ಮತ್ತು ಆಕಾಂಕ್ಷಿಗಳ ಅಭಿಪ್ರಾಯ ಸಂಗ್ರಹ ಮಾಡಲಿದ್ದು ಉತ್ತರದ ಆಕಾಂಕ್ಷಿಗಳು ಬೆಂಗಳೂರಿಗೆ ಪಯಣಿಸಲು ಬ್ಯಾಗ್ ರೆಡಿ ಮಾಡಿಕೊಳ್ಳುತ್ತಿದ್ದು ನಾಳೆ ಕೆಲವರು ವಿಮಾನ ಹತ್ತಲು ರೆಡಿಯಾಗಿದ್ದಾರೆ
ಮೂರು ದಿನಗಳ ಹಿಂದೆ ರಮೇಶ್ ಕತ್ತಿ ಕೂಡಾ ಬೆಳಗಾವಿ ಉತ್ತರದಿಂದ ತಮಗೆ ಬಿಜೆಪಿ ಟಿಕೆಟ್ ನೀಡುವಂತೆ ಬೆಳಗಾವಿ ಮಹಾನಗರ ಜಿಲ್ಲಾ ಬಿಜೆಪಿ ಅಧ್ಯಕ್ಷ ರಾಜೇಂದ್ರ ಹರಕುಣಿ ಅವರಿಗೆ ಅರ್ಜಿ ಸಲ್ಲಿಸಿದ್ದಾರೆ ಎಂದು ತಿಳಿದು ಬಂದಿದ್ದು ಈ ವಿಷಯ ಉಳಿದ ಆಕಾಂಕ್ಷಿಗಳ ನಿದ್ದೆಗೆಡಿಸಿದೆ
ಹಲವಾರು ದಿನಗಳಿಂದ ಬೆಳಗಾವಿ ಉತ್ತರದ ಜಟಿಲ ಪ್ರಶ್ನೆಗೆ ರಾಜ್ಯದ ಬಿಜೆಪಿ ನಾಯಕರು ಎಪ್ರೀಲ್ 5 ರಂದು ಸ್ಪಷ್ಠ ಉತ್ತರ ನೀಡಲಿದ್ದಾರೆ
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ