ಬೆಳಗಾವಿ- ಬೆಳಗಾವಿ ಜಿಲ್ಲೆಯ ಪ್ರತಿಷ್ಟಿತ ರಾಣಿ ಚೆನ್ನಮ್ಮ ವಿಶ್ವ ವಿದ್ಯಾಲಯ ಭೂತರಾಮಟ್ಟಿಯಿಂದ ಹಿರೇಬಾಗೇಡಿಗೆ ಶಿಪ್ಟ್ ಮಾಡಲು ರಾಜ್ಯ ಸರ್ಕಾರ ಹಸಿರು ನಿಶಾನೆ ತೋರಿಸಿದೆ.
ರಾಜ್ಯದ ಕಂದಾಯ ಸಚಿವ ಆರ್ ಅಶೋಕ ಅವರು ರಾಣಿ ಚನ್ನಮ್ಮ ವಿಶ್ವ ವಿದ್ಯಾಲಯದ ಕಟ್ಟಡ ನಿರ್ಮಿಸಲು ಹಿರೇಬಾಗೇವಾಡಿ ಗ್ರಾಮ ಪಂಚಾಯತಿ ಹದ್ದಿಯಲ್ಲಿರುವ 70 ಎಕರೆ ಸರ್ಕಾರಿ ಜಮೀನು ನೀಡಲು ಕಂದಾಯ ಸಚಿವ ಆರ್ ಅಶೋಕ ಅನುಮೋದನೆ ನೀಡಿದ್ದು,ಕ್ಯಾಬಿನೇಟ್ ಅನುಮೋದನೆ ಅಷ್ಟೇ ಬಾಕಿ ಉಳಿದಿದೆ
ಬೆಳಗಾವಿಯ ರಾಣಿ ಚನ್ನಮ್ಮ ವಿಶ್ವವಿದ್ಯಾಲಯ ಹಿರೇಬಾಗೇವಾಡಿಗೆ ಶಿಪ್ಟ್ ಆಗೋದು ಖಚಿತವಾಗಿದೆ.
ರಾಣಿ ಚನ್ನಮ್ಮ ವಿಶ್ವವಿದ್ಯಾಲಯ ಭೂತರಾಮಟ್ಟಿಯಲ್ಲಿ ಇತ್ತು ಆದ್ತೆ ಕಟ್ಟಡ ಅರಣ್ಯ ಇಲಾಖೆಗೆ ಸೇರಿರುವದರಿಂದ ವಿಶ್ವ ವಿದ್ಯಾಲಯದ ಕಟ್ಟಡ ಕಾಮಗಾರಿ ವಿಸ್ತರಣೆಗೆ ಅರಣ್ಯ ಇಲಾಖೆ ಅಡ್ಡಿ ಪಡಿಸಿದ ಹಿನ್ನಲೆಯಲ್ಲಿ ಬೆಳಗಾವಿಯ ಯುನಿವರ್ಸಿಟಿ ಈಗ ಹಿರೇಬಾಗೇವಾಡಿ ಗ್ರಾಮಕ್ಕೆ ಸ್ಥಳಾಂತರ ಆಗುತ್ತಿದೆ.