ಬೆಳಗಾವಿಬೆಳಗಾವಿಯಲ್ಲಿಇಬ್ಬರು ಅಧಿಕಾರಿಗಳ ಮನೆ ಮೇಲೆ ಗುರುವಾರ ಬೆಳ್ಳಂಬೆಳಗ್ಗೆ ಲೋಕಾಯುಕ್ತ ದಾಳಿ ನಡೆಸಿದ್ದಾರೆ.ಖಾನಾಪುರ ಪಂಚಾಯತ್ ರಾಜ್ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ದುರದುಂಡೇಶ್ವರ ಬನ್ನೂರ ಅವರ ಯಳ್ಳೂರು ಮತ್ತು ವಿಜಯನಗರದಲ್ಲಿ ರುವ ಮನೆ ಮೇಲೆ ದಾಳಿಬೆಳಗಾವಿ ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕ ಶೇಖರಗೌಡ ಕುಂದರಗಿ ಅವರ ವಿದ್ಯಾಗಿರಿಯಲ್ಲಿರುವ ಮನೆ ಹಾಗೂ ಗಣೇಶಪುರದಲ್ಲಿರುವ ಕಚೇರಿ ಮೇಲೆ ಲೋಕಾಯುಕ್ತ. ಅಧಿಕಾರಿಗಳು ದಾಳಿ ಮಾಡಿದ್ದಾರೆ
ಬೆಳಗಾವಿಯಲ್ಲಿ ಜಿಪಂ ಎಇಇ ಮೇಲೆ ಲೋಕಾಯುಕ್ತ ದಾಳಿ!
ಬೆಳಗಾವಿ ಜಿಲ್ಲಾ ಪಂಚಾಯತ್ ಎಇಇ ಮಹಾದೇವ ಬನ್ನೂರ ಮನೆ ಮೇಲೆ ಲೋಕಾ ದಾಳಿ ನಡೆದಿದೆ.ಬೆಳಗಾವಿ ತಾಲೂಕಿನ ಯಳ್ಳೂರ ಹೊರವಲಯದಲ್ಲಿರುವ ಬನ್ನೂರ ಮನೆಯ ಮೇಲೆ ದಾಳಿ ನಡೆದಿದೆ.ಈ ಹಿಂದೆ ಮಹಾದೇವ ಬನ್ನೂರ ಮೇಲೆ ದಾಳಿ ಮಾಡಿದ್ದ ಲೋಕಾ ಅಧಿಕಾರಿಗಳು,ಆಗ ದಾಳಿಯಲ್ಲಿ ಮನೆಯಲ್ಲಿ ಅಕ್ರಮವಾಗಿ 27ಲಕ್ಷ ಪತ್ತೆ ಆಗಿದ್ದವು. ಅದರ ಮುಂದುವರೆದ ಭಾಗವಾಗಿ ಮತ್ತೊಮ್ಮೆ ದಾಳಿ ಮಾಡಿರುವ ಲೋಕಾಯುಕ್ತ ಅಧಿಕಾರ,ದಾಖಲೆಗಳ ಪರಿಶೀಲನೆ ಮಾಡುತ್ತಿದ್ದಾರೆ
ಲೋಕಾಯುಕ್ತ ಡಿವೈಎಸ್ಪಿ ಭರತ್ ರೆಡ್ಡಿ ನೇತೃತ್ವದ ತಂಡದಿಂದ ದಾಳಿ ನಡೆದಿದೆ.