ಬೆಳಗಾವಿ- ಬಡ್ತಿ ಮೀಸಲಾತಿಯಲ್ಲಿ ಪರಶಿಷ್ಟ ಜಾತಿ ಮತ್ತು ಪಂಗಡಗಳಿಗೆ ಅನ್ಯಾಯವಾಗಿರುವದಕ್ಕೆ ಮುಖ್ಯಮಂತ್ರಿಗಳ ನಿರ್ಲಕ್ಷ್ಯವೇ ಕಾರಣ ಎಂದು ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ ಸಂಘಟನೆಯ ರಾಜ್ಯಾಧ್ಯಕ್ಷ ಡಾ ಎಂ ವೆಂಕಟಸ್ವಾಮಿ ಆರೋಪಿಸಿದ್ದಾರೆ
ಬೆಳಗಾವಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಅವರು ಬಡ್ತಿಯಲ್ಲಿ ಮೀಸಲಾತಿಗೆ ಸಮಂಧಿಸಿದಂತೆ ಸುಪ್ರೀಂ ಕೋರ್ಟನಲ್ಲಿ ರಾಜ್ಯ ಸರ್ಕಾರ ಸರಿಯಾದ ದಾಖಲೆಗಳನ್ನು ಒದಗಿಸಿಲ್ಲ ಸಮರ್ಥವಾಗಿ ವಾದ ಮಂಡಿಸದೇ ಇರುವದರಿಂದ ಬಡ್ತಿ ವಿಚಾರದಲ್ಲಿ ದಲಿತರಿಗೆ ಅನ್ಯಾಯವಾಗಿದೆ ಇದಕ್ಕೆ ಮುಖ್ಯಮಂತ್ರಿ ಗಳೇ ಹೊಣೆಗಾರ ಎಂದು ವೆಂಕಟಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ
ಬಡ್ತಿ ಮೀಸಲಾತಿ ವಿಚಾರದಲ್ಲಿ ದಲಿತ ಸಮುದಾಯಕ್ಕೆ ನ್ಯಾಯ ದೊರಕಿಸಿಕೊಡಲು ಬಡ್ತಿ ಮೀಸಲಾತಿ ಹೋರಾಟ ಸಮೀತಿ ರಚಿಸಲಾಗಿದೆ ಈ ಸಮೀತಿ ಗುಂಡ್ಲುಪೇಟೆ ಮತ್ತು ನಂಜನಗೂಡು ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳನ್ನು ಸೋಲಿಸಲು ಪಣ ತೊಟ್ಟಿದ್ದೇವೆ ಎಂದು ವೆಂಕಟಸ್ವಾಮಿ ಹೇಳಿದರು
ಮುಖ್ಯಮಂತ್ರಿ ಸಿದ್ಧರಾಮಯ್ಯ ದಲಿತ ವಿರೋಧಿ ಮುಖ್ಯಮಂತ್ರಿಯಾಗಿದ್ದು ಸುಪ್ರೀಂ ಕೋರ್ಟನಲ್ಲಿ ಬಡ್ತಿ ವಿಚಾರದಲ್ಲಿ ದಲಿತರಿಗೆ ಅನ್ಯಾಯವಾಗಿದ್ದು ರಾಜ್ಯ ಸರ್ಕಾರ ಇನ್ನುವರೆಗೆ ಮೇಲ್ಮನವಿ ಸಲ್ಲಿಸಿಲ್ಲ ಎಂದು ವೆಂಕಟಸ್ವಾಮಿ ಆಕ್ರೋಶ ವ್ಯೆಕ್ತಪಡಿಸಿದರು
ಕೆಲವು ದಲಿತ ಸಂಘಟನಗಳ ವತಿಯಿಂದ ಬೆಂಗಳೂರಿನ ಪ್ಯಾಲೇಸ್ ಗ್ರೌಂಡ್ ನಲ್ಲಿ ಮುಖ್ಯಮಂತ್ರಿಗಳ ಸನ್ಮಾನ ನಡೆಯಲಿದ್ದು ಇದಕ್ಕೆ ರಿಪಬ್ಲಿಕನ್ ಪಾರ್ಟಿ ಬಹಿಷ್ಕಾರ ಹಾಕುತ್ತೇವೆ ಎಂದರು
ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಬೆಳಗಾವಿ ಜಿಲ್ಲೆಯ ಹದಿನೆಂಟು ವಿಧಾಸಭೆ ಕ್ಷೇತ್ರಗಳಿಂದ ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ ಅಭ್ಯರ್ಥಿಗಳು ಸ್ಪರ್ದಿಸುತ್ತಾರೆ ಜೊತೆಗೆ ಸೆಪ್ಟೆಂಬರ್ ಕೊನೆಯ ವಾರದಲ್ಲಿ ಬೆಳಗಾವಿಯಲ್ಲಿಯೇ ರಿಪಬ್ಲಿಕನ್ ಪಾರ್ಟಿಯ ರಾಜ್ಯಮಟ್ಟದ ಸಮಾವೇಶ ನಡೆಯಲಿದೆ ಎಂದು ವೆಂಕಟಸ್ವಾಮಿ ತಿಳಿಸಿದರು