ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಮೊದಲ ಸ್ಥಾನ ಪಡೆದ ವಿದ್ಯಾರ್ಥಿನಿಗೆ ಬೈಲಹೊಂಗಲ ವಿಧಾನ ಸಭಾ ಕ್ಷೇತ್ರದ ಶಾಸಕರಿಂದ ಸನ್ಮಾನ
ಬೆಳಗಾವಿ (ಮೇ.03)* : ನಗರದ ಜಿಲ್ಲಾ ಪಂಚಾಯತ ಸಭಾ ಭವನದಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದು, ಜಿಲ್ಲೆಗೆ ಹೆಮ್ಮೆ ತಂದಿರುವ ವಿದ್ಯಾರ್ಥಿನಿಗೆ ಸನ್ಮಾನ ಮಾಡುವ ಕಾರ್ಯಕ್ರಮ ಜರುಗಿತು.
ಸರ್ಕಾರಿ ಶಾಲೆಯಲ್ಲಿ ಓದಿ, ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ 625/625 ಅಂಕ ಪಡೆದು ರಾಜ್ಯಕ್ಕೆ ಮೊದಲ ಸ್ಥಾನ ಪಡೆದ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ದೇವಲಾಪುರ ಗ್ರಾಮ ಪಂಚಾಯತ ವ್ಯಾಪ್ತಿಯ ಸರ್ಕಾರಿ ಪ್ರೌಡ ಶಾಲೆಯ ವಿದ್ಯಾರ್ಥಿನಿಯಾದ ರೂಪಾ ಪಾಟೀಲ್ ಅವರಿಗೆ ಬೈಲಹೊಂಗಲ ವಿಧಾನಸಭಾ ಕ್ಷೇತ್ರದ ಶಾಸಕರಾದ ಮಹಾಂತೇಶ ಕೌಜಲಗಿ ರವರು ಹಾಗೂ ಜಿಲ್ಲಾ ಪಂಚಾಯತ ಸಿಇಒ ರಾಹುಲ್ ಶಿಂಧೆ ರವರು ಸನ್ಮಾನ ಮಾಡಿ ಅಭಿನಂದಿಸಿದರು .
ಈ ವೇಳೆ ಉಪಕಾರ್ಯದರ್ಶಿ(ಅಭಿವೃದ್ಧಿ) ಬಸವರಾಜ್ ಅಡವಿಮಠ, ಉಪ ನಿರ್ದೇಶಕರು ಶಾಲಾ ಶಿಕ್ಷಣ ಇಲಾಖೆ ಶ್ರೀಮತಿ ಲೀಲಾವತಿ ಹಿರೇಮಠ, ಬಿಇಒ ಎ ಎನ್ ಪ್ಯಾಟಿ ಬೈಲಹೊಂಗಲ್, ದೇವಲಾಪುರ ಸರ್ಕಾರಿ ಪ್ರೌಡ ಶಾಲೆಯ ಎಸ್.ಡಿ.ಎಮ್,ಸಿ ಸದಸ್ಯರು ಹಾಗೂ ಶಾಲಾ ಶಿಕ್ಷಕರು/ಶಿಕ್ಷಕಿಯರು ಹಾಗೂ ಜಿಲ್ಲಾ ಪಂಚಾಯತಿ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.