Breaking News

ಅನ್ನೋತ್ಸವದ ಮಾದರಿಯಲ್ಲಿ ಬೆಳಗಾವಿಯಲ್ಲಿ ಕೃಷಿ ಉತ್ಸವ…

ಬೆಳಗಾವಿ-ಮಾ.7 ರಿಂದ 11ರ ವರೆಗೆ ಜಿಲ್ಲಾಡಳಿತದ ಸಹಕಾರದೊಂದಿಗೆ ನಗರದ ಸಿಪಿಎಡ್ ಮೈದಾನದಲ್ಲಿ ಅನ್ನೋತ್ಸವದ ಮಾದರಿಯಲ್ಲಿ ಕೃಷಿ ಉತ್ಸವ ನಡೆಯಲಿದೆ ಎಂದು ಬೆಳಗಾವಿ ರೋಟರಿ ಕ್ಲಬ್ ಅಧ್ಯಕ್ಷ ಮಂಜುನಾಥ ಅಲವಣಿ ಹೇಳಿದರು.

ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಬೆಳಗಾವಿಯಲ್ಲಿ ಇದೇ ಪ್ರಥಮ ಬಾರಿಗೆ ರೈತರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಕೃಷಿ ಉತ್ಸವ ಆಯೋಜಿಸಲಾಗಿದೆ. ಸುಮಾರು‌ 150 ಮಳಿಗೆಗಳ ಸ್ಥಾಪಿಸಿ ರೈತರ ಬೆಳೆಗಳ ಬಗ್ಗೆ ಮಾಹಿತಿ ನೀಡಲು ಜಿಲ್ಲಾಡಳಿತ, ಜಿಪಂ ಹಾಗೂ ಕೃಷಿ ಇಲಾಖೆ ಸಹಯೋಗದಲ್ಲಿ ರೋಟರಿ ಕ್ಲಬ್ ಈ ಉತ್ಸವ ಆಯೋಜಿಸಲಾಗಿದೆ ಎಂದರು.

ರೈತರು ತಮ್ಮ ಜಮೀನಿನಲ್ಲಿ ಫಲವತ್ತಾದ ಬೆಳೆಯನ್ನು ಬೆಳೆಯಲು ನುರಿತ ತಜ್ಞರಿಂದ ಮಾಹಿತಿ ನೀಡಲಾಗುವುದು. ಬೆಳಗಾವಿ ಜಿಲ್ಲೆ ಕೃಷಿಗೆ ಹೆಸರುವಾಸಿಯಾದೆ. ರೈತರು ಇದರ ಲಾಭವನ್ನು ಪಡೆದುಕೊಳ್ಳಬೇಕು ಎಂದರು.

ಕೃಷಿ ಉತ್ಸವದ ಪ್ರವೇಶ ಸಂಪೂರ್ಣ ಉಚಿತವಾಗಿದೆ. ರೈತರಿಗಾಗಿ ಒಂದು ತರಬೇತಿ ಕೇಂದ್ರ ಸ್ಥಾಪಿಸಿ ಒಳ್ಳೆಯ ರೈತರನ್ನು ಗುರುತಿಸಿ ಅವರಿಂದಲೇ ಬೇರೆ ರೈತರಿಗೆ ಮಾಹಿತಿ ಕೊಡಲಾಗುವುದ ಇದರ ಸದುಪಯೋಗವನ್ನು ಜನರು ಪಡೆದುಕೊಳ್ಳಬೇಕೆಂದರು.

ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಶಿವನಗೌಡ ಪಾಟೀಲ ಮಾತನಾಡಿ, ಕೊರೊನಾ ಬಂದ ಮೇಲೆ ಯುವಕರಲ್ಲಿ ಕೃಷಿ ಮಾಡುವಲ್ಲಿ ಉತ್ಸಾಗ ಕುಗ್ಗಿ ಹೋಗಿದೆ‌. ಯುವಕರಿಗೆ ಕೃಷಿಯ ಬಗ್ಗೆ ಮನವರಿಕೆ ಮಾಡಿಕೊಡಲು ರೋಟರಿ ಕ್ಲಬ್ ಸಹಯೋಗದಲ್ಲಿ ಕೃಷಿ ಉತ್ಸವ ಆಯೋಜಿಸಲಾಗಿದೆ ಎಂದರು.

ಯುವಕರು ಕೊರೊನಾ ಬಂದ ಬಳಿಕ ಕೃಷಿ ಮಾಡುವುದನ್ನು ಕಡಿಮೆ ಮಾಡಿದ್ದಾರೆ. ಪ್ರಮುಖವಾಗಿ ಯುವ ರೈತರಿಗೆ ಜಾಗೃತಿ ಮೂಡಿಸಲಾಗುವುದು ಎಂದರು.
ಈಗಾಗಲೇ ನಮ್ಮ ಜಿಲ್ಲೆಯಲ್ಲಿ ಸಿರಿ ಧಾನ್ಯ ಮೇಳ ಆಯೋಜಿಸಿ ಯಶಸ್ವಿಯಾಗಿದ್ದೇವೆ. ಈ ನಿಟ್ಟಿನಲ್ಲಿ ರೋಟರಿ ಕ್ಲಬ್ ಸಹಯೋಗದಲ್ಲಿ ಕೃಷಿ ಉತ್ಸವ ಆಯೋಜಿಸಲಾಗಿದೆ ಎಂದರು.

ಅಭಯ ಜೋಶಿ, ಶೇಖ ಅಲಿ, ದಿನೇಶ ಕಾಳೆ, ಅಜಯ ಹೆಡ್ಡಾ, ರಾಜೇಂದ್ರ ದೇಸಾಯಿ ಉಪಸ್ಥಿತರಿದ್ದರು.

Check Also

ಸಂಘ ದೋಷ, ಗೆಳೆಯನ ಜೊತೆ ಸೇರಿ ಗಂಡನ ಮರ್ಡರ್ ಮಾಡಲು ಸುಫಾರಿ ಕೊಟ್ಟ ಹೆಂಡತಿ…..!!!

ಬೆಳಗಾವಿ-ಅದೊಂದು ಸುಖ ಸಂಸಾರವಾಗಿತ್ತು ಸಾಲಕ್ಕಾಗಿ ಆ ಸಂಘ ಈ ಸಂಘವೆಂದು ಅಲೆದಾಡಿದ ಮನೆಯ ಯಜಮಾನಿ ಯುವಕನ ಜೊತೆ ಗೆಳೆತನ ಮಾಡಿ …

Leave a Reply

Your email address will not be published. Required fields are marked *