ಬೆಂಗಳೂರು- ಇವತ್ತು ಬೆಳಿಗ್ಗೆಯಿಂದ ಮಾಜಿ ಸಚಿವ ರೋಷನ್ ಬೇಗ್ ಅವರನ್ನು ಸಿಬಿಐ ಅಧಿಕಾರಿಗಳು ವಿಚಾರಣೆ ನಡೆಸಿದ್ದು ಈಗ ಅರೆಸ್ಟ್ ಮಾಡಿ ರೋಷನ್ ಬೇಗ್ ಅವರನ್ನು ಅರೆಸ್ಟ್ ಮಾಡಿದ್ದಾರೆ.
ಕಳೆದ ವರ್ಷ ಬೆಂಗಳೂರಿನಲ್ಲಿ ನಡೆದ ಐಎಂಎ ಬಹುಕೋಟಿ ವಂಚನೆ ಪ್ರಕರಣಕ್ಕೆ ಸಮಂಧಿಸಿದಂತೆ ಇಂದು ಬೆಳಿಗ್ಗೆ ರೋಷನ್ ಬೇಗ್ ಅವರನ್ನು ವಶಕ್ಕೆ ಪಡೆದ ಸಿಬಿಐ ಅಧಿಕಾರಿಗಳು ದಿನವಿಡೀ ವಿಚಾರಣೆ ನಡೆಸಿ ಈಗ ಅವರನ್ನು ಬಂಧಿಸಿ ನ್ಯಾಯಾಂಗ ವಶಕ್ಕೆ ಒಪ್ಪಿಸಿದ್ದಾರೆ.
ಬೆಂಗಳೂರಿನ ಶಿವಾಜಿ ನಗರದ ಮಾಜಿ ಶಾಸಕ ರೋಷನ್ ಬೇಗ್ ಇದೇ ಕಾರಣಕ್ಕಾಗಿ ಕಾಂಗ್ರೆಸ್ ಪಕ್ಷದಿಂದ ಉಚ್ಛಾಟೆಗೊಂಡಿದ್ದರು,ಐಎಂಎ ವಂಚನೆ ಪ್ರಕರಣಕ್ಕೆ ಸಮಂಧಿಸಿದಂತೆ ರೋಷನ್ ಬೇಗ್ ಐಎಂಎ ಸಂಸ್ಥಾಪಕ ಮನ್ಸೂರ್ ಅವರಿಂದ ನೂರಾರು ಕೋಟಿ ರೂ ಹಣ ಪಡೆದಿದ್ದರು ಎಂದು ಆರೋಪಿಸಲಾಗಿತ್ತು,ಈ ವಿಚಾರದ ಕುರಿತು ಬೆಳಿಗ್ಗೆಯಿಂದ ರೋಷನ್ ಬೇಗ್ ಅವರನ್ನು ಡ್ರೀಲ್ ಮಾಡಿದ ಸಿಬಿಐ ಅಧಿಕಾರಿಗಳು ರೋಷನ್ ಬೇಗ್ ಅವರನ್ನು ಅರೆಸ್ಟ್ ಮಾಡಿ ಜೈಲಿಗೆ ಕಳಿಸಿದ್ದಾರೆ
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ