Breaking News

ಪಾಲಿಕೆ ವ್ಯಾಪ್ತಿಯ ಗ್ರಾಮೀಣ ಪ್ರದೇಶಗಳಿಗೆ ಸಚಿವ ರೋಷನ್ ಬೇಗ್ ಭೇಟಿ

ಬೆಳಗಾವಿ- ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿರುವ ಗ್ರಾಮೀಣ ಕ್ಷೇತ್ರದ ಭಾಗಗಳು ಶೀಘ್ರವೇ ಅಭಿವೃದ್ಧಿಯಾಗಲಿವೆ ಎಂದು ನಗರಾಭಿವೃದ್ಧಿ ಸಚಿವ ಆರ್ ರೋಷನ್ ಬೇಗ್ ಹೇಳಿದ್ದಾರೆ.

ದಿನಗಳೆಂತೆ ಕುಂದಾನಗರಿ ಬೆಳಗಾವಿ ಬೃಹದಾಕಾರವಾಗಿ ಬೆಳೆಯುತ್ತಿದೆ. ಬೆಳಗಾವಿ ನಗರ ವ್ಯಾಪ್ತಿಯಲ್ಲಿ ವಸತಿ ಪ್ರದೇಶಗಳು ಸಹಿತ ಹೆಚ್ಚಾಗುತ್ತಿವೆ.  ಆದರೆ ಕೆಲವು ಪ್ರದೇಶಗಳಲ್ಲಿ ಕುಡಿಯುವ ನೀರು ಹಾಗೂ ಇನ್ನಿತರ ಮೂಲ ಸೌಕರ್ಯಗಳು ಸರಿಯಾಗಿ ಸಿಗುತ್ತಿಲ್ಲ. ಇದಕ್ಕಾಗಿ ಸಾರ್ವಜನಿಕರು ಹಲವಾರು ಬಾರಿ ಪ್ರತಿಭಟನೆ ನಡೆಸಿದ್ದರೂ ಮೂಲ ಸೌಕರ್ಯ ದೊರೆತಿರಲಿಲ್ಲ. ಅನೇಕ ವರ್ಷಗಳಿಂದ ಮೂಲ ಸೌಕರ್ಯಗಳಿಂದ ವಂಚಿತರಾಗಿರುವ ಜನ ತಮ್ಮ  ಸಮಸ್ಯೆಗಳನ್ನು ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಲಕ್ಷ್ಮೀ ಹೆಬ್ಬಾಳಕರ್ ಅವರ ಗಮನಕ್ಕೆ ತಂದಿದ್ದರು. ಹಾಗೂ ಈ ಬಗ್ಗೆ ನಗರಾಭಿವೃದ್ಧಿ ಸಚಿವರ ಗಮನಕ್ಕೆ ತರೋದಾಗಿ ಭರವಸೆ ನೀಡಿದ್ದರು. ಈ ಭರವಸೆ ಈಗ ಈಡೇರಿದಂತಾಗಿದೆ.

ಬುಧವಾರ ಮುಂಜಾನೆ ಲಕ್ಷ್ಮೀ ಹೆಬ್ಬಾಳಕರ್ ಸಚಿವ ರೋಷನ್ ಬೇಗ್ ಹಾಗೂ ಅಧಿಕಾರಗಿಳೊಂದಿಗೆ ಕೆ.ಎಚ್ ಕಂಗ್ರಾಳಿಯ ರಾಮನಗರ, ವೈಭವನಗರ, ಕಲ್ಮೇಶ್ವರ ನಗರ, ಕುಮಾರಸ್ವಾನಿ ಲೇಔಟ್, ಸಹ್ಯಾದ್ರಿನಗರ ಸೇರಿದಂತೆ ಸುತ್ತಲಿನ ಪ್ರದೇಶಗಳಿಗೆ ಭೇಟಿ ನೀಡಿ ಜನರ ಸಮಸ್ಯೆ ಕೇಳಿದರು. ನಾವು ಪಾಲಿಕೆಗೆ ಸಕಾಲಕ್ಕೆ ತೆರಿಗೆ ತುಂಬುತ್ತಿದ್ದೇವೆ. ಆದರೆ ಪಾಲಿಕೆ ಅಧಿಕಾರಿಗಳು ನಮಗೆ ಸೌಲಭ್ಯ ನೀಡುತ್ತಿಲ್ಲ ಎಂದು ಸ್ಥಳೀಯರು ಸಚಿವರಿಗೆ ದೂರಿದರು

ಮೂಲ ಸೌಕರ್ಯ ವಂಚಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ವಿಜಯನಗರದಲ್ಲಿರುವ ಜನತೆ ಅಲ್ಲಿರುವ ಖಾಲಿ ನಿವೇಶನದಲ್ಲಿ ಉದ್ಯಾನ ನಿರ್ಮಿಸಬೇಕೆಂದು ಒತ್ತಾಯಿಸಿದರು. ಅದರಂತೆ ನಗರದ ಬಾಕ್ಷೈಟ್ ರಸ್ತೆಯ ರಝಾ ನಗರಕ್ಕೆ ಭೇಟಿ ನೀಡಿ ಅಲ್ಲಿನ ಕುಂದು ಕೊರತೆಗಳ ಬಗ್ಗೆ ಜನರ ಅಹವಾಲು ಕೇಳಿದರು. ರಝಾನಗರಕ್ಕೆ ಒಳಚರಂಡಿ ಹಾಗೂ ಕುಡಿಯುವ ನೀರಿನ ಸೌಲಭ್ಯ ದಗಿಸಬೇಕೆಂದು ಸ್ಥಳೀಯರು ಸಚಿವರಿಗೆ ಮನವಿ ಮಾಡಿದರು. ಅದೇ ರೀತಿ ಎಪಿಎಂಸಿ ಹಿಂಭಾಗದ ಜ್ಯೋತಿ ನಗರಕ್ಕೆ ಸಚಿವರು ಭೇಟಿ ನೀಡಿದಾಗ ಅಲ್ಲಿನ ಜನತೆ ರಸ್ತೆ ಹಾಗೂ ಕುಡಿಯುವ ನೀರಿನ ಕೊರತೆ ಬಗ್ಗೆ ಸಮಸ್ಯೆ ಹೇಳಿಕೊಂಡರು.

ಕೆಪಿಸಿಸಿ ಮಹಿಳಾ ಘಟಕದ ರಾಜ್ಯಾಧ್ಯಕ್ಷೆ ಲಕ್ಷ್ಮೀ ಹೆಬ್ಬಾಳಕರ್  ಮಾತನಾಡಿ, ಬಹುದಿನಗಳಿಂದ ಈ ಬಾಗದ ಜನರು ಮೂಲಭೂತ ಸೌಕರ್ಯಗಳಿಗಾಗಿ ನನ್ನ ಬಳಿ ಸಮಸ್ಯೆ ಹೇಳಿಕೊಂಡಿದ್ದರು. ಹೆಚ್ಚಾಗಿ ಕುಡಿಯುವ ನೀರಿನ ಕೊರತೆ ಬಗ್ಗೆ ಸಮಸ್ಯೆ ಹೇಳಿಕೊಂಡಿದ್ದರು. ಈ ಸಮಸ್ಯೆಯನ್ನು ಸ್ವತಃ ಸಚಿವರೇ ಪರಿಶೀಲಿಸಿದ್ದಾರೆ. ಎಲ್ಲ ಕೆಲಸಗಳನ್ನು ಸರ್ಕಾರದ ಮೇಲೆ ಒತ್ತಡ ಹೇರಿ ಸಾಕಾರಗೊಳಿಸಲಾಗುವುದು ಎಂದರು.

ಸಚಿವ ಆರ್ ರೋಷನ್ ಬೇಗ್ ಮಾತನಾಡಿ ಮೂಲ ಸೌಕರ್ಯಗಳ ಕೊರತೆ ಬಗ್ಗೆ ಲಕ್ಷ್ಮೀ ಹೆಬ್ಬಾಳಕರ್ ಮನವಿ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಸ್ವತಃ ಭೇಟಿ ನೀಡಿ ಜನರ ಅಹವಾಲು ಸ್ವೀಕರಿಸಿದ್ದೇನೆ. ಜನರ ಆಶೋತ್ತರಗಳಿಗೆ ಸ್ಪಂದಿಸಲು ಮಹಾನಗರ ಪಾಲಿಕೆ ಆಯುಕ್ತರಿಗೆ ಕುಡಿಯುವ ನೀರು ಸೇರಿದಂತೆ ಕುಂದು ಕೊರತೆಗಳ ನಿವಾರಣೆಗೆ ಕ್ರಮ ಕೈಗೊಳ್ಳುವಂತೆ  ಆದೇಶ ನೀಡಲಾಗಿದ ಎಂದರು

Check Also

ಜಿಲ್ಲೆಯಲ್ಲಿ ಸುರಿದ ಮೊದಲ ಮಳೆಗೆ ಮೊದಲ ಬಲಿ…

ಬೆಳಗಾವಿ- ಸವದತ್ತಿಯಲ್ಲಿ ಧಾರಾಕಾರ ಮಳೆ ಸುರಿದಿದ್ದು ಸಿಡಿಲು ಬಡಿದು ಬೈಕ್ ಸವಾರನೊಬ್ಬ ಸ್ಥಳದಲ್ಲಿಯೇ ಮೃತ ಪಟ್ಟಿದ್ದು ಮಹಿಳೆಯೊಬ್ಬಳು ಗಂಭೀರವಾಗಿ ಗಾಯಗೊಂಡ …

Leave a Reply

Your email address will not be published. Required fields are marked *

Sahifa Theme License is not validated, Go to the theme options page to validate the license, You need a single license for each domain name.