ಬೆಳಗಾವಿ-ಎಸಿಬಿ ರದ್ದಾಗಿ ಮತ್ತೆ ಲೋಕಾಯುಕ್ತ ಸಂಸ್ಥೆ ಅಸ್ತಿತ್ವಕ್ಕೆ ಬಂದ ಮೇಲೆ,ಬೆಳಗಾವಿ ಜಿಲ್ಲೆಯಲ್ಲೂ ಆರ್ಟಿಒ ಚೆಕ್ ಪೋಸ್ಟ್ ಮೇಲೆ ಲೋಕಾಯುಕ್ತ ದಾಳಿ ನಡೆದಿದೆ.
ಬೆಳಗಾವಿ ಜಿಲ್ಲೆಯ ನಿಪ್ಪಾಣಿ ತಾಲೂಕಿನ ಕೊಗನೊಳ್ಳಿ ಚೆಕ್ ಪೋಸ್ಟ್ ಹಾಗು RTO ಚೆಕ್ ಪೋಸ್ಟ್ ಮೇಲೆ ದಾಳಿ ನಡೆದಿದೆ.
ರಾಷ್ಟ್ರೀಯ ಹೆದ್ದಾರಿ ನಾಲ್ಕು ಬೆಂಗಳೂರು-ಮುಂಬೈ ರಸ್ತೆ ಮೇಲಿರುವ ಚೆಕ್ ಪೋಸ್ಟ್ ದಾಳಿ ನಡೆದಿದ್ದು,ವಾಹನ ಸವಾರರಿಂದ ಹಣ ವಸೂಲಿ ಆರೋಪ ಹಿನ್ನೆಲೆ ದಾಳಿ ನಡೆದಿದೆ ಎಂದು ತಿಳಿದು ಬಂದಿದೆ.ದಾಳಿ ವೇಳೆ ನಗದು ಹಣ ಸಿಕ್ಕಿದ್ದು, ಪರಿಶೀಲನೆ ಮುಂದುವರೆದಿದೆ.