ಬೆಳಗಾವಿ- ಬೆಳಗಾವಿ ಮಹಾನಗರ ಪಾಲಿಕೆಗೆ ಕೊನೆಗೂ ಸರ್ಕಾರ ಹೊಸ ಆಯುಕ್ತರನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ.
ಚಿಕ್ಕೋಡಿ ಉಪ ವಿಭಾಗಾಧಿಕಾರಿಗಳಾಗಿ ಈ ಹಿಂದೆ ಬೆಳಗಾವಿ ಜಿಲ್ಲೆಯಲ್ಲಿ ಸೇವೆ ಸಲ್ಲಿಸಿದ್ದ ರುದ್ರೇಶ್ ಘಾಳಿ ಅವರನ್ನು ಬೆಳಗಾವಿ ಮಹಾನಗರ ಪಾಲಿಕೆ ಆಯುಕ್ತರನ್ನಾಗಿ ನೇಮಿಸಲಾಗಿದೆ.
ಮೂಲತಃ ಬಾಗಲಕೋಟೆ ಜಿಲ್ಲೆಯವರಾದ ರುದ್ರೇಶ್ ಘಾಳಿ ಅವರು ಪಶು ವೈದ್ಯಕೀಯ ಪದವಿ ಪಡೆದು ನಂತರ ಕೆಎಎಸ್ ತೇರ್ಗಡೆಯಾದ ಅವರು ಬೀದರ ಜಿಲ್ಲೆಯ ಅಪರ ಜಿಲ್ಲಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಅವರನ್ನು ಬೆಳಗಾವಿ ಮಹಾನಗರ ಪಾಲಿಕೆ ಆಯುಕ್ತರನ್ನಾಗಿ ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.
ಬೆಳಗಾವಿ ಮಹಾನಗರ ಪಾಲಿಕೆಗೆ ಆಯುಕ್ತರು ಇಲ್ಲದೇ ಚುನಾವಣೆ ನಡೆದಿತ್ತು ಸ್ಮಾರ್ಟ್ ಸಿಟಿ ಯೋಜನೆಯ ಎಂ.ಡಿ ಪ್ರವೀಣ ಬಾಗೇವಾಡಿ ಅವರು ಪ್ರಭಾರಿ ಆಯುಕ್ತರಾಗಿ ಕಾರ್ಯನಿರ್ವಹಿಸುತ್ತಿದ್ದರು.
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ