Breaking News

ಸತೀಶ್, ಸಾಧುನವರ ಸಾಥ್,ಸಾಥ್ ಹೈ….ಶಿವಕಾಂತ ಸಿಧ್ನಾಳ ಕ್ಯಾ ಬಾತ್ ಹೈ….!!!!

ಬೆಳಗಾವಿ- ಲೋಕಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸುವ ದಿನಾಂಕ ಹತ್ತಿರವಾದರೂ ಬೆಳಗಾವಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯ ಹೆಸರು ಇನ್ನುವರೆಗೆ ಪ್ರಕಟವಾಗಿಲ್ಲ ಆದರೆ ನನ್ನ ಹೆಸರೇ ಅಂತಿಮವಾಗಿದೆ ಎಂದು ಹೇಳುತ್ತ ಸಾಧುನವರ ಕ್ಷೇತ್ರದಲ್ಲಿ ಪ್ರಚಾರ ಶುರು ಮಾಡಿದ್ದಾರೆ

ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ ಈಗಾಗಲೇ ಒಂದು ಸುತ್ತಿನ ಪ್ರಚಾರ ಮುಗಿಸಿರುವ ಸಾಧುನವರ ಜಿಲ್ಲಾ ಮಂತ್ರಿ ಸತೀಶ ಜಾರಕಿಹೊಳಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಭೆಗಳಲ್ಲಿ ಸಾಧುನವರ ಭಾಗವಹಿಸುತ್ತಿದ್ದಾರೆ

ಕಾಂಗ್ರೆಸ್ ಟಿಕೆಟ್ ಗಾಗಿ ಬೈಲಹೊಂಗಲದ ಸಾಧುನವರ ಮತ್ತು ಶಿವಕಾಂತ ಸಿಧ್ನಾಳ ನಡುವೆ ಪ್ರಬಲ ಪೈಪೋಟಿ ನಡೆಯುತ್ತಿದೆ ಇಬ್ಬರ ನಡುವೆ ಟಿಕೆಟ್ ಗಾಗಿ ಹಗ್ಗ ಜಗ್ಗಾಟ ನಡೆದಿದ್ದು ಕಾಂಗ್ರೆಸ್ ಅಭ್ಯರ್ಥಿ ನಾನೇ ಎಂದು ಇಬ್ಬರೂ ಆಕಾಂಕ್ಚಿಗಳು ಹೇಳಿಕೊಳ್ಳುತ್ತಿದ್ದು ಇಬ್ಬರಲ್ಲಿ ಯಾರು ಪ್ರಬಲರು ಅನ್ನೋದನ್ನು ಕಾಂಗ್ರೆಸ್ ಹೈಕಮಾಂಡ್ ಲೆಕ್ಕಾಚಾರ ಹಾಕುತ್ತಿದ್ದು ಮಾರ್ಚ 23 ರಂದು ಕಾಂಗ್ರೆಸ್ ಅಭ್ಯರ್ಥಿಗಳ ಅಂತಿಮ ಪಟ್ಟಿ ಪ್ರಕಟವಾಗಲಿದೆ ಎಂದು ಕಾಂಗ್ರೆಸ್ ಮೂಲಗಳಿಂದ ತಿಳಿದು ಬಂದಿದೆ

ಸಾಧುನವರ,ಶಿವಕಾಂತ ಸಿಧ್ನಾಳ ಮತ್ತು ಹೆಬ್ಬಾಳಕರ ಸಹೋದರ ಚನ್ನರಾಜ ಹಟ್ಟಿಹೊಳಿ ಅವರ ಹೆಸರನ್ನು ಕೆಪಿಸಿಸಿ ಕಾಂಗ್ರೆಸ್ ಹೈಕಮಾಂಡ್ ಗೆ ಶಿಫಾರಸ್ಸು ಮಾಡಿದೆ ಎಂದು ತಿಳಿದು ಬಂದಿದ್ದು ಶಿವಕಾಂತ ಮತ್ತುಸಾಧುನವರ ನಡುವೆ ಸಕತ್ತ್ ಗುದ್ದಾಟ ನಡೆದಿರುವದು ಸತ್ಯ

ಮಾಜಿ ಮಂತ್ರಿ ರಮೇಶ್ ಜಾರಕಿಹೊಳಿ ನಡೆ ಮಾತ್ರ ನಿಗೂಢವಾಗಿದೆ ಲೋಕಸಭಾ ಚುನಾವಣೆಯಲ್ಲಿ ಅವರ ನಿಲುವು ಏನು ಅನ್ನೋದನ್ನು ತಿಳಿದುಕೊಳ್ಳಲು ಕಾಂಗ್ರೆಸ್ ಹರಸಹಾಸ ಪಡುತ್ತಿದೆ ಆದರೆ ರಮೇಶ್ ಜಾರಕಿಹೊಳಿ ಮಾತ್ರ ಕಾಂಗ್ರೆಸ್ ಪಕ್ಷದಲ್ಲೇ ಉಳಿದುಕೊಂಡು ಕಾಂಗ್ರೆಸ್ ನಾಯಕರನ್ನು ಆಟವಾಡುತ್ತಿರುವ ವಿಷಯ ಈಗ ಗುಟ್ಟಾಗಿ ಉಳಿದಿಲ್ಲ

ಬೆಳಗಾವಿ ಜಿಲ್ಲಾ ಕಾಂಗ್ರೆಸ್ ಪಕ್ಷದಲ್ಲಿರುವ ಗುಂಪುಗಾರಿಕೆಯಿಂದ ಬಚಾವ್ ಆಗಬಲ್ಲ,ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಹೋಗಬಲ್ಲ ಅಭ್ಯರ್ಥಿಯ ಹುಡುಕಾಟದಲ್ಲಿ ಕೆಪಿಸಿಸಿ ತೊಡಗಿದ್ದು ಬೆಳಗಾವಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಯಾರು ? ಎನ್ನುವ ಪ್ರಶ್ನೆ ಕಾಂಗ್ರೆಸ್ ಕಾರ್ಯಕರ್ತರನ್ನು ಕಾಡುತ್ತಿದೆ

ಕಾಂಗ್ರೆಸ್ ಅಭ್ಯರ್ಥಿ ಯಾರು ? ಎನ್ನುವ ವಿಷಯದ ಮೇಲೆ ಕ್ಷೇತ್ರದಲ್ಲಿ ಬೆಟ್ಟಿಂಗ್ ನಡೆಯುತ್ತಿದೆ ಎಂದು ಹೇಳಲಾಗಿದ್ದು ಒಳಗೆ ಯಾರು ಸೆಟ್ಟಿಂಗ್ ಮಾಡಿಕೊಂಡಿದ್ದಾರೆ ಅಭ್ಯರ್ಥಿ ಯಾರಾಗ್ತಾರೆ ಅನ್ನೋದು ಎಲ್ಲರಲ್ಲಿ ಕುತೂಹಲ ಮೂಡಿಸಿದೆ

Check Also

ವೆಲ್ಡಿಂಗ್ ಕಾರ್ಮಿಕನ ಮಗ ಲಕ್ ಪತಿ ಆಗಿದ್ದು ಹೇಗೆ ಎಲ್ಲಿ ಗೊತ್ತಾ…??

ಬಾಗಲಕೋಟೆ-ಸಾಧನೆಗೆ ಬಡತನ ಎಂದಿಗೂ ಅಡ್ಡಿಯಾಗದು. ಸತತ ಪ್ರಯತ್ನ, ಪರಿಶ್ರಮವಿದ್ದರೆ ಬೌದ್ಧಿಕ ಮಟ್ಟ ವೃದ್ಧಿಸಿಕೊಂಡು, ಎಂಥವರು ಸಾಧನೆ ಮಾಡಬಹುದು. ಜ್ಞಾನಕ್ಕೆ ಬೆಲೆ …

Leave a Reply

Your email address will not be published. Required fields are marked *