ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ಧಾಣಕ್ಕೆ ವೀರರಾಣಿ ಕಿತ್ತೂರು ಚನ್ನಮ್ಮಾಜಿಯ ಹೆಸರು..

ರಾಜ್ಯದ ನಾಲ್ಕು ವಿಮಾನ ನಿಲ್ದಾಣಗಳಿಗೆ ಐತಿಹಾಸಿಕ ವ್ಯಕ್ತಿಗಳ ಹೆಸರು ನಾಮಕರಣಕ್ಕಾಗಿ ಕರ್ನಾಟಕ ವಿಧಾನಮಂಡಲದಿಂದ ಕೇಂದ್ರಕ್ಕೆ ಶಿಫಾರಸ್ಸು

ಬೆಳಗಾವಿ:  ರಾಜ್ಯದ ಗಣ್ಯವ್ಯಕ್ತಿಗಳ ಹಾಗೂ ಐತಿಹಾಸಿಕ ಪುರುಷರ ಹೆಸರುಗಳನ್ನು ಅನ್ವರ್ಥಕಗೊಳಿಸಿ ಗೌರವಿಸಲು ರಾಜ್ಯದ ನಾಲ್ಕು ವಿಮಾನ ನಿಲ್ದಾಣಗಳಿಗೆ ನಾಮಕರಣ ಮಾಡಲು ಕರ್ನಾಟಕ ವಿಧಾನಮಂಡಲದ ಉಭಯ ಸದನಗಳು ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಿವೆ.
ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಮತ್ತು ಮೂಲ ಸೌಕರ್ಯ ಸಚಿವರಾದ ಎಂ.ಬಿ. ಪಾಟೀಲ ಅವರು ವಿಧಾನಸಭೆಯಲ್ಲಿ ಹುಬ್ಬಳ್ಳಿಯ ವಿಮಾನ ನಿಲ್ದಾಣಕ್ಕೆ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ, ಬೆಳಗಾವಿ ವಿಮಾನ ನಿಲ್ದಾಣಕ್ಕೆ ವೀರರಾಣಿ ಕಿತ್ತೂರು ಚನ್ನಮ್ಮ, ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ರಾಷ್ಟ್ರಕವಿ ಡಾ. ಕೆ.ವಿ. ಪುಟ್ಟಪ್ಪ ಕುವೆಂಪು ಮತ್ತು ವಿಜಯಪುರ ವಿಮಾನ ನಿಲ್ದಾಣಕ್ಕೆ ಶ್ರೀ ಜಗಜ್ಯೋತಿ ಬಸವೇಶ್ವರ ನಾಮಕರಣಗೊಳಿಸಲು ಉಭಯ ಸದನಗಳಲ್ಲಿ ಅನುಮೋದನೆಗೊಂಡ ನಿರ್ಣಯ ಮಂಡಿಸಿದರು.

ನಿರ್ಣಯವನ್ನು ಬೆಂಬಲಿಸಿ ವಿಪಕ್ಷ ನಾಯಕ ಆರ್. ಅಶೋಕ, ಶಾಸಕರಾದ ಅರವಿಂದ ಬೆಲ್ಲದ, ಎನ್.ಹೆಚ್. ಕೊನರೆಡ್ಡಿ, ಅರಗ ಜ್ಞಾನೇಂದ್ರ ಸೇರಿದಂತೆ ಇತರರು ಅಭಿನಂದಿಸಿ ಮಾತನಾಡಿದರು.

ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಅವರು, ಸಭೆಯಲ್ಲಿ ಪ್ರಸ್ತಾಪಿಸಿ ಸದನವು ಸರ್ವಾನುಮತದಿಂದ ಅಂಗೀಕರಿಸಿದೆ ಎಂದು ತಿಳಿಸಿದರು.ಸಚಿವ ಎಂ.ಬಿ. ಪಾಟೀಲ ಅವರು ಉಭಯ ಸದನಗಳಲ್ಲಿ ಅಂಗೀಕೃತಗೊಂಡಿರುವ ಈ ನಿರ್ಣಯವನ್ನು ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಲಾಗುವುದೆಂದು ಸದನದಲ್ಲಿ ತಿಳಿಸಿದರು

Check Also

ನಿಶ್ಚಿತವಾಗಿದ್ದ ಮದುವೆ ರದ್ದು ಯುವಕನ ಆತ್ಮಹತ್ಯೆ

ಬೆಳಗಾವಿ-ನಿಶ್ಚಿತಯಗೊಂಡ ಮದುವೆ ರದ್ದಾಗಿ, ಸಂಬಂಧಗಳೆಲ್ಲವೂ ಮುರಿದು ಹೋದಕಾರಣ ಯುವಕ ಆತ್ಮಹತ್ಯೆಗೆ ಶರಣಾದ ಘಟನೆ ಬೆಳಗಾವಿ ತಾಲೂಕಿನ ಕೆಕೆಕೊಪ್ಪ ಗ್ರಾಮದಲ್ಲಿ ನಡೆದಿದೆ. …

Leave a Reply

Your email address will not be published. Required fields are marked *