ಗಡಿ ವಿವಾದ,ಸುಪ್ರೀಂ ಕೋರ್ಟ್ ತೀರ್ಪಿಗೆ ಬದ್ದ – ಸಂಜಯ ರಾವುತ
ಬೆಳಗಾವಿ- ಕರ್ನಾಟಕ ಮಹಾರಾಷ್ಟ್ರ ಗಡಿವಿವಾದ ಬಗ್ಗೆ ಸುಪ್ರೀಂಕೋರ್ಟ್ ತೀರ್ಪಿಗೆ ಬದ್ಧರಾಗಿದ್ದೇವೆ ಎಂದು
ಬೆಳಗಾವಿಯಲ್ಲಿ ಶಿವಸೇನೆ ವಕ್ತಾರ ಸಂಜಯ್ ರಾವುತ್ ಹೇಳಿದ್ದಾರೆ.
ಬೆಳಗಾವಿಯ ಗೋಗಟೆ ರಂಗ ಮಂದಿರದಲ್ಲಿ ಸಾರ್ವಜನಿಕ ವಾಚನಾಲಯದ ಪುರಸ್ಕಾರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು
ಕರ್ನಾಟಕ-ಮಹಾರಾಷ್ಟ್ರ ಗಡಿವಿವಾದ ಸುಪ್ರೀಂಕೋರ್ಟ್ ನಲ್ಲಿದೆಗಡಿವಿವಾದ ಸಮಸ್ಯೆ ಸುಪ್ರೀಂ ಕೋರ್ಟ್ ನಲ್ಲಿ ಇತ್ಯರ್ಥ ವಾಗಲಿದೆ ಸುಪ್ರೀಂಕೋರ್ಟ್ ಉಭಯ ರಾಜ್ಯಗಳ ವಾದ ಆಲಿಸಲಿ ಬಳಿಕ ಸುಪ್ರೀಂ ಕೋರ್ಟ್ ನೀಡುವ ತೀರ್ಪಿಗೆ ನಾವು ಬದ್ಧರಾಗಿರಬೇಕು ಎಂದು ಸಂಜಯ ರಾವುತ ಹೇಳಿದರು
ದಶಕಗಳಿಂದ ವಿವಾದವಾಗಿದ್ದ ಅಯೋಧ್ಯೆ-ರಾಮಮಂದಿರ ವಿವಾದ ಇತ್ಯರ್ಥವಾಗಿದೆ, ದೇಶದ ಸಂವಿಧಾನ, ಸುಪ್ರೀಂ ಕೋರ್ಟ್ ಎಲ್ಲದಕ್ಕಿಂತ, ಎಲ್ಲರಿಗಿಂತ ದೊಡ್ಡದು ,ಕರ್ನಾಟಕಕ್ಕೆ ಆಗಮಿಸಿ ಮಹಾರಾಷ್ಟ್ರ ನಾಯಕರಿಂದ ನಾಡದ್ರೋಹಿ ಹೇಳಿಕೆ ನೀಡಬಾರದು ಗಡಿವಿವಾದ ಬಗ್ಗೆ ಹೇಳಿಕೆ ನೀಡದಂತೆ ನಾಯಕರಿಗೆ ಸಿಎಂ ಉದ್ಧವ್ ಠಾಕ್ರೆ ನಿರ್ದೇಶನ ನೀಡಿದ್ದಾರೆ ಕೆಲ ದಿನಗಳ ಹಿಂದೆಯೇ ಉದ್ಧವ್ ಠಾಕ್ರೆ ಎಲ್ಲ ಶಿವಸೇನೆ ಪದಾಧಿಕಾರಿಗಳಿಗೆ ಸೂಚನೆ ಕೊಟ್ಟಿದ್ದಾರೆ ಗಡಿವಿವಾದ ಬಗ್ಗೆ ಸುಪ್ರೀಂಕೋರ್ಟ್ ನಿರ್ಧರಿಸಲಿ ಎಂದು ಸಿಎಂ ಉದ್ಧವ್ ಠಾಕ್ರೆ ಹೇಳಿದ್ದಾರೆ ಎಂದು ಬೆಳಗಾವಿಯಲ್ಲಿ ಶಿವಸೇನೆ ವಕ್ತಾರ ಸಂಜಯ್ ರಾವುತ್ ಹೇಳಿದರು