ಬೆಳಗಾವಿ : ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳಿಗೆ ಸಂಬಂದಿಸಿದಂತೆ ಕೇವಲ ಬೆಂಗಳೂರಿಗೆ ಸೀಮಿತವಾಗಿದ್ದ ಕಚೇರಿಯನ್ನು ಬೆಳಗಾವಿಗೂ ವಿಸ್ತರಿಸುವ ಮೂಲಕ ನೂತನ ವಲಯ ವಿಭಾಗದ ಕಚೇರಿ ಇನ್ಮುಂದೆ ಬೆಳಗಾವುಯಲ್ಲಿ ಕಾರ್ಯಾರಂಭ ಮಾಡಲಿದೆ.
ಲೋಕೋಪಯೋಗಿ ಇಲಾಖೆ ಸಚಿವ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿಗಳಾದ ಸತೀಶ್ ಜಾರಕಿಹೊಳಿ ಅವರ ಪ್ರಯತ್ನದ ಫಲವಾಗಿ ಬೆಳಗಾವಿಗೆ ಮತ್ತೊಂದು ಹಿರಿಮೆ ಹೆಚ್ಚಿಸಿದೆ. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಸಂಬಂಧಿಸಿದೆ ರಾಜ್ಯದ ಉತ್ತರ ವಲಯ ಕಚೇರಿ ಬೆಳಗಾವಿಯಲ್ಲಿ ಸ್ಥಾಪಿಸಲು ಲೋಕೋಪಯೋಗಿ ಇಲಾಖೆ ಗ್ರೀನ್ ಸಿಗ್ನಲ್ ನೀಡಿದೆ.
ಈ ಕಚೇರಿಗೆ ಧಾರವಾಡ ಉತ್ತರ ಹಾಗೂ ಕಲಬುರಗಿ ಈಶಾನ್ಯ ವಲಯ ಎರಡೂ ಇನ್ಮುಂದೆ ಬೆಳಗಾವಿ ಉತ್ತರ ವಲಯ ಕಚೇರಿ ವ್ಯಾಪ್ತಿಗೆ ಬರಲಿವೆ. ರಾಷ್ಟ್ರೀಯ ಹೆದ್ದಾರಿ ಯೋಜನೆಗಳ ಸಮರ್ಪಕ ಅನುಷ್ಠಾನದ ದೃಷ್ಟಿಯಿಂದ ಈ ಕಚೇರಿ ಪ್ರಾರಂಭಕ್ಕೆ ಸರ್ಕಾರ ಮಹತ್ವದ ಕ್ರಮ ಕೈಗೊಂಡಿದೆ.
ತಕ್ಷಣದಿಂದಲೇ ಜಾರಿಗೆ ಬರುವಂತೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಕಗಳಿಗೆ ಲೋಕೋಪಯೋಗಿ ಇಲಾಖೆ ಕಾರ್ಯದರ್ಶಿ ರಘುನಾಥಗೌಡ ಪಾಟೀಲ್ ಪತ್ರ ಕಳುಹಿಸಿದ್ದು, ಸಚಿವ ಸತೀಶ್ ಜಾರಕಿಹೊಳಿ ಅವರ ಕಾರ್ಯಕ್ಕೆ ಜಿಲ್ಲೆಯ ಜನ ಕೃತಜ್ಞತೆ ಸಲ್ಲಿಸಿದ್ದಾರೆ.
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ