ಬೆಳಗಾವಿ- ಲೋಕಸಭೆ ಚುನಾವಣೆ ಘೋಷಣೆಯಾಗುವ ದಿನಗಣನೆ ಶುರುವಾದ ಬೆನ್ನಲ್ಲಿಯೇ ಬೆಳಗಾವಿ ಜಿಲ್ಲೆಯ ರಾಜಕಾರಣ ಚುರುಕಾಗಿದೆ.ಬೆಳಗಾವಿ ಮತ್ತು ಚಿಕ್ಕೋಡಿ ಲೋಕಸಭಾ ಕ್ಷೇತ್ರಗಳ ಅಭ್ಯರ್ಥಿಗಳನ್ನು ಅಂತಿಮಗೊಳಿಸುವ ನಿಟ್ಟಿನಲ್ಲಿ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಅವರು ಬೆಳಗಾವಿ ಜಿಲ್ಲೆಯ ಕಾಂಗ್ರೆಸ್ ನಾಯಕರ ತುರ್ತು ಸಭೆಯನ್ನು ಬೆಂಗಳೂರಿನಲ್ಲಿ ಕರೆದಿದ್ದಾರೆ.
ಬೆಂಗಳೂರಿನಲ್ಲಿರುವ ಸಚಿವ ಸತೀಶ್ ಜಾರಕಿಹೊಳಿ ಅವರ ಗೃಹ ಕಚೇರಿಯಲ್ಲಿ ಇಂದು ರಾತ್ರಿ 8-00 ಗಂಟೆಗೆ ಈ ಸಭೆ ನಡೆಯಲಿದೆ.ಸಭೆಯಲ್ಲಿ ಬೆಳಗಾವಿ ಜಿಲ್ಲೆಯ ಹಾಲಿ,ಕಾಂಗ್ರೆಸ್ ಶಾಸಕರು,ಮಾಜಿ ಶಾಸಕರು,ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು, ಬೆಳಗಾವಿ ಜಿಲ್ಲೆಯ ಕಾಂಗ್ರೆಸ್ ಅಧ್ಯಕ್ಷರುಗಳು,ಪದಾಧಿಕಾರಿಗಳು ಭಾಗವಹಿಸಲಿದ್ದಾರೆ.ಈಗಾಗಲೇ ಎಲ್ಲರೂ ಬೆಂಗಳೂರಿಗೆ ದೌಡಾಯಿಸಿದ್ದಾರೆ.
ಸಭೆಯಲ್ಲಿ ಬೆಳಗಾವಿ,ಮತ್ತು ಚಿಕ್ಕೋಡಿ ಲೋಕಸಭಾ ಕ್ಷೇತ್ರಗಳ ಕಾಂಗ್ರೆಸ್ ಅಭ್ಯರ್ಥಿಗಳ ಆಯ್ಕೆ ಕುರಿತು ಮಹತ್ವದ ಚರ್ಚೆ ನಡೆಯಲಿದೆ. ಎಲ್ಲ ನಾಯಕರ ಅಭಿಪ್ರಾಯ ಆಲಿಸಿದ ಬಳಿಕ ಅಭ್ಯರ್ಥಿಗಳನ್ನು ಅಂತಿಮಗೊಳಿಸಲಾಗುತ್ತದೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ.
ಎರಡೂ ಕ್ಷೇತ್ರಗಳ ಕಾಂಗ್ರೆಸ್ ಆಕಾಂಕ್ಷಿಗಳು ಸಹ ಬೆಂಗಳೂರಿಗೆ ತೆರಳಿದ್ದಾರೆ.
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ