Breaking News
Home / Breaking News / ಗಲಭೆ ಎಬ್ಬಿಸುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ: ಸಚಿವ ಸತೀಶ್‌ ಜಾರಕಿಹೊಳಿ

ಗಲಭೆ ಎಬ್ಬಿಸುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ: ಸಚಿವ ಸತೀಶ್‌ ಜಾರಕಿಹೊಳಿ

ಬೆಂಗಳೂರು: ‘ನಮ್ಮ ಸರ್ಕಾರ ಕೋಮು-ಗಲಭೆ ಹತ್ತಿಕ್ಕುವ ಕೆಲಸ ಮಾಡುತ್ತಿದೆ. ಯಾರೇ ಕೋಮು ಗಲಭೆ ಮಾಡಿದರೆ ಕಠಿಣ ಕ್ರಮ ತೆಗೆದುಕೊಳ್ಳುತ್ತೇವೆ’ ಎಂದು ಲೋಕೋಪಯೋಗಿ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್‌ ಜಾರಕಿಹೊಳಿ ಅವರು ಹೇಳಿದರು.

ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಬೆಳಗಾವಿ ನಗರದ ಅಳ್ವಾನ್ ಗಲ್ಲಿಯಲ್ಲಿ ಮಕ್ಕಳು ಕ್ರಿಕೆಟ್ ಆಟ ಆಡುವಾಗ ಆರಂಭವಾದ ಜಗಳ ದೊಡ್ಡವರ ಮಟ್ಟಿಗೆ ವಿಕೋಪಕ್ಕೆ ಬೆಳೆದು ಎರಡು ಕೋಮಿನ ಮಧ್ಯೆ ಗುಂಪು ಘರ್ಷಣೆಯಾಗಿ ಕಲ್ಲು ತೂರಾಟ ಮಾಡಲಾಗಿದೆ. ಈ ಗಲಾಟೆಯಲ್ಲಿ ಸಂಬಂಧ ಶಹಾಪುರ ಠಾಣೆಯಲ್ಲಿ 2 ಪ್ರತ್ಯೇಕ ಪ್ರಕರಣ ದಾಖಲಾಗಿದೆ ಎಂದರು.

ಕಾನೂನು ಕೈಗೆತ್ತಿಕೊಳ್ಳದಿರಿ: ಬೆಳಗಾವಿ ನಗರದ ಅಳ್ವಾನ್ ಗಲ್ಲಿಯಲ್ಲಿ ನಡೆದ ಗುಂಪು ಘರ್ಷಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಹಾಪುರ ಠಾಣೆಯಲ್ಲಿ ಈಗಾಗಲೇ 2 ಪ್ರತ್ಯೇಕ ಪ್ರಕರಣಗಳು ದಾಖಲಾಗಿದ್ದು, ಸಾರ್ವಜನಿಕರು ಯಾರು ಕೂಡ ಕಾನೂನು ಕೈಗೆತ್ತಿಕೊಳ್ಳಬಾರದು ಎಂದು ಸಚಿವ ಸತೀಶ್‌ ಜಾರಕಿಹೊಳಿ ಅವರು ತಿಳಿಸಿದ್ದಾರೆ.

ಗಲಾಟೆಯಲ್ಲಿ ಜಾತಿ, ಧರ್ಮದ ಬಣ್ಣ ಹಚ್ಚಬೇಡಿ: ಮಕ್ಕಳು ಕ್ರಿಕೆಟ್ ಆಟ ಆಡುವಾಗ ಆರಂಭವಾದ ಜಗಳ ದೊಡ್ಡವರ ಮಟ್ಟಿಗೆ ವಿಕೋಪಕ್ಕೆ ಬೆಳೆದು ಎರಡು ಕೋಮಿನ ಮಧ್ಯೆ ಗುಂಪು ಘರ್ಷಣೆಯಾಗಿದೆ. ಈ ವಿಚಾರವನ್ನು ಜಾತಿ, ಧರ್ಮದ ಬಣ್ಣದಲ್ಲಿ ನೋಡಬಾರದು. ಕೆಲವರು ಜಾತಿ-ಧರ್ಮದ ಬಣ್ಣ ಹಚ್ಚಲು ಪ್ರಯತ್ನಿಸುತ್ತಿರುವುದು ಅಪಾಯಕಾರಿ ಬೆಳವಣಿಗೆ. ಈ ಸಂಕಷ್ಟದ ಗಳಿಗೆಯಲ್ಲಿ ಎಲ್ಲರೂ ಒಂದಾಗಿರೋಣ, ಎಚ್ಚರವಾಗಿರೋಣ” ಎಂದು ಸಚಿವ ಸತೀಶ್‌ ಜಾರಕಿಹೊಳಿ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.

ಸಾರ್ವಜನಿಕರಲ್ಲಿ ಸಚಿವರ ಮನವಿ: ಯಾವುದೇ ಪ್ರದೇಶದಲ್ಲಿ ಕಾನೂನುಬಾಹಿರ ಕೃತ್ಯಗಳು ನಡೆದಲ್ಲಿ ಆ ಕುರಿತು ಪೊಲೀಸ್ ಇಲಾಖೆಗೆ ಮಾಹಿತಿ ನೀಡಬೇಕೆ ವಿನಹ ಯಾರೇ ಆಗಲಿ ಕಾನೂನನ್ನು ಕೈಗೆತ್ತಿಕೊಳ್ಳಬಾರದು. ಬೆಳಗಾವಿಯ ಶಾಂತಿ ಪರಿಸರದಲ್ಲಿ ಅನ್ಯ ವ್ಯಕ್ತಿಗಳಿಂದ ಕೋಮುಗಲಭೆ ಹುಟ್ಟು ಹಾಕುವ ಪ್ರಯತ್ನ ನಡೆಯುತ್ತಿದೆ. ಅಲ್ಲದೇ ಜಾತಿಗೆ ಬಣ್ಣ ಹಚ್ಚುವ ಕೆಲಸ ನಡೆಯುತ್ತಿದೆ. ಆದ್ದರಿಂದ ಸಾರ್ವಜನಿಕರು ಯಾವುದೇ ರೀತಿಯ ಆತಂಕ ಪಡೆದೆ ಕೋಮು ಗಲಭೆ ಸಷ್ಟಿಸುವರ ಮಾತಿಗೆ ಕಿವಿಗೊಡದೇ ಬೆಳಗಾವಿ ನಗರದಲ್ಲಿ ಶಾಂತಿಯನ್ನು ಕಾಪಾಡಬೇಕೆಂದು ಸಾರ್ವಜನಿಕರಲ್ಲಿ ಸಚಿವರು ವಿನಂತಿಸಿದ್ದಾರೆ.

Check Also

ಜೈ..ಜಗದೀಶ್ ಹರೇ..ಶೆಟ್ಟರ್ ಮಂತ್ರಿ ಆಗೋದು ಖರೇ…!!

ಬೆಳಗಾವಿ- ಜಗದೀಶ್ ಶೆಟ್ಟರ್ ಅವರಿಗೆ ಭರ್ಜರಿಯಾಗಿ ಬೆಳಗಾವಿಯ ಜನ ಗೆಲ್ಲಿಸಿದ್ದಾರೆ‌. ಶೆಟ್ಟರ್ ಅವರಿಗೆ ಬೆಳಗಾವಿ ಲಕ್ಕಿ ಯಾಕಂದ್ರೆ ಬೆಳಗಾವಿಯಿಂದ ಗೆದ್ದಿರುವ …

Leave a Reply

Your email address will not be published. Required fields are marked *