ಬೆಳಗಾವಿ- ಬೆಳಗಾವಿ ಜಿಲ್ಲೆಯಲ್ಲಿ ವ್ಯಾಪಕವಾಗಿ ಮಳೆ ಸುರಿಯುತ್ತಿದೆ. ಜಿಲ್ಲೆಯ ಬಹುತೇಕ ಎಲ್ಲ ಜಲಾಶಯಗಳು ತುಂಬುತ್ತಿವೆ. ಮಹಾರಾಷ್ಡ್ರದಿಂದ ಹರಿದು ಬೆಳಗಾವಿಗೆ ಬರುವ ಎಲ್ಲ ನದಿಗಳು ಅಪಾಯದ ಮಟ್ಟವನ್ನು ಮೀರಿ ಹರಿಯುತ್ತಿವೆ. ಮಹಾರಾಷ್ಡ್ರದ ಕೋಯ್ನಾ ಜಲಾಶಯದಿಂದ ಕೃಷ್ಣಾ ನದಿಗೆ ನೀರು ಬಿಡುವ ಸಾಧ್ಯತೆಗಳಿದ್ದು ಕೃಷ್ಣಾ ನದಿ ತೀರದಲ್ಲಿ ಪ್ರವಾಹದ ಆತಂಕ ಶುರುವಾಗಿದ್ದು, ಪ್ರವಾಹ ಪರಿಸ್ಥಿತಿಯನ್ನು ಪರಶೀಲಿಸಿ ಸಾರ್ವಜನಿಕರಿಗೆ ಎಲ್ಲ ರೀತಿಯ ಅನಕೂಲಕತೆಗಳನ್ನು ಕಲ್ಪಿಸುವಂತೆ ಜಿಲ್ಲೆಯ ಅಧಿಕಾರಿಗಳಿಗೆ ಮಾರ್ಗದರ್ಶನ ಮಾಡಲು ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಅವರು ಬೆಂಗಳೂರಿನ ಅಧಿವೇಶನ ಮತ್ತು ಇನ್ನಿತರ ಕಾರ್ಯಕ್ರಮಗಳನ್ನು ಮೊಟಕುಗೊಳಿಸಿ ರಾತ್ರಿಯೇ ಬೆಳಗಾವಿಗೆ ಆಗಮಿಸಿದ್ದಾರೆ. ಕಪ
ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ್ ಜಾರಕಿಹೊಳಿ ಅವರು ಇಂದು ಗುರುವಾರ(ಜು.25) ಮಧ್ಯಾಹ್ನ 12 ಗಂಟೆಗೆ ಕುಡಚಿ ಮತ್ತು 1 ಗಂಟೆಗೆ ಹಳೆ ದಿಗ್ಗೇವಾಡಿಯ ಪ್ರವಾಹ ಪ್ರದೇಶಗಳನ್ನು ವೀಕ್ಷಿಸಲಿದ್ದಾರೆ.
ಇದಾದ ಬಳಿಕ ಮಧ್ಯಾಹ್ನ 2 ಗಂಟೆಗೆ ಚಿಕ್ಕೋಡಿಯ ಪ್ರವಾಸಿಮಂದಿರಕ್ಕೆ ಭೇಟಿ ನೀಡಲಿದ್ದಾರೆ.