ಬೆಳಗಾವಿ
ಅಯ್ಯೋಧೆಯಲ್ಲಿ ರಾಮಮಂದಿರ ನಿರ್ಮಿಸುವುದು ಕಾಂಗ್ರೆಸ್ ಅಜೆಂಡಾ ಅಲ್ಲಾ. ಅದು ಬಿಜೆಪಿಯವರದ್ದು ಎಂದು ಎಐಸಿಸಿ ಕಾರ್ಯದರ್ಶಿ ಸತೀಶ ಜಾರಕಿಹೊಳಿ ಹೇಳಿದರು.ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದರು.ರಾಮಮಂದಿರ ನಿರ್ಮಾಣ ಮಾಡುವುದು ಬಿಜೆಪಿಯ ಅಜೆಂಡಾ. ಧಾರ್ಮಿಕವಾಗಿ ಪ್ರಾಮುಖ್ಯತೆ ಇರುವ ದೇವಸ್ಥಾನಕ್ಕೆ ಪ್ರಗತಿಪರ ಎಲ್ಲ ಮಠ ಹಾಗೂ ದೇವಸ್ಥಾನಕ್ಕೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಭೇಟಿ ನೀಡುತ್ತಿದ್ದಾರೆ ವಿನಃ ರಾಜಕೀಯ ಉದ್ದೇಶದಿಂದಲ್ಲ ಎಂದು ಬಿಜೆಪಿ ಮುಖಂಡರ ಆರೋಪಕ್ಕೆ ತಿರುಗೇಟು ನೀಡಿದರು.
ಫೆ. 23, ಫೆ. 24 ಹಾಗೂ ಫೆ. 25 ರಂದು ಬೆಳಗಾವಿ, ವಿಜಯಪುರ, ಬಾಗಲಕೋಟ, ಧಾರವಾಡದಲ್ಲಿ ರಾಹುಲ್ ಗಾಂಧಿ ಪ್ರವಾಸ ಮಾಡಲಿದ್ದಾರೆ ಎಂದರು.
ರಾಹುಲ್ ಗಾಂಧಿ ಕರ್ನಾಟಕ ಪ್ರವಾಸ ಮುಗಿದ ನಂತರ ಕಾಂಗ್ರೆಸ್ ನ ವಿಧಾನಸಭಾ ಚುನಾವಣೆ ಟಿಕೆಟ್ ಫಿಕ್ಸ್ ಮಾಡಲಾಗುವುದು. ಉತ್ತರ ಕರ್ನಾಟಕದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳಿಗೆ ಈ ಸಲ ಮಣೆಹಾಕಲಾಗುವುದು ಎಂದರು.
 ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ
				 
		 
						
					 
						
					 
						
					