ಬೆಳಗಾವಿ
ರಾಜಕೀಯದಲ್ಲಿ ಸಂಕ್ರಾಂತಿಯ ಕ್ರಾಂತಿಯಾಗುವ ವಿಷಯ ಅದು ಕೇವಲ ಭ್ರಮೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು.
ಸೋಮವಾರ ವೈದ್ಯಕೀಯ ಶಿಕ್ಷಣ ಇಲಾಖೆ, ಬೆಳಗಾವಿ ವೈದ್ಯಕೀಯ ವಿಜ್ಞಾನ ಸಂಸ್ಥೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಇಂಜನಿಯರಿಂಗ್ ಘಟಕದ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಆವರಣದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಯ ಪರಿಶೀಲನೆ ನಡೆಸಿ ಮಾಧ್ಯಮದವರೊಂದಿಗೆ ಮಾತನಾಡಿದರು.
ಆಪರೇಷನ್ ಕಮಲ್ ಏಳು ತಿಂಗಳಿನಿಂದ ಹೇಳುತ್ತಿದ್ದಾರೆ. ಕರ್ನಾಟಕದ ರಾಜಕೀಯದಲ್ಲಿ ಸಂಕ್ರಾಂತಿ ಕ್ರಾಂತಿಯಾಗುತ್ತಿದೆ ಎಂದು ಹೇಳುತ್ತಿರುವುದರಲ್ಲಿ ಯಾವುದೇ ಅರ್ಥವಿಲ್ಲ.
ಮಾಜಿ ಸಚಿವ ರಮೇಶ ಜಾರಕಿಹೊಳಿ ಹಾಗೂ ಉಮೇಶ ಜಾಧವ ಬಿಜೆಪಿ ಸೇರುವುದು ಸುಳ್ಳು. ಸರಕಾರದ ಮುಖ್ಯ ಸಚೇತಕ ಗಣೇಶ ಹುಕ್ಕೇರಿ ಅವರು ಬಿಜೆಪಿಗೆ ಹೋಗುತ್ತಾರೆ ಎಂದು ಗಾಳಿ ಸುದ್ದಿ ಹರಡಿತ್ತು. ಅದು ಸುಳ್ಳಾಗಲಿಲ್ಲವೇ ಎಂದು ಪ್ರಶ್ನಿಸಿದರು.
ಅತೃಪ್ತ ಶಾಸಕರ ಜವಾಬ್ದಾರಿಯನ್ನು ಆಯಾ ಜಿಲ್ಲಾ ಉಸ್ತುವಾರಿ ಸಚಿವರಿಗೆ ವರಿಷ್ಠರು ನೀಡಿದ್ದಾರೆ ಎಂಬ ಪ್ರಶ್ನೆಗೆ ಉತ್ತರಿಸಿದ ಸಚಿವ ಸತೀಶ ನಮ್ಮಲ್ಲಿ ಅಂಥ ಅತೃಪ್ತ ಶಾಸಕರು ಯಾರೂ ಇಲ್ಲ. ರಮೇಶ ಜಾರಕಿಹೊಳಿ ಅವರ ಮೊಬೈಲ್ ಕೆಲ ದಿನಗಳಿಂದ ಸ್ವೀಚ್ ಆಫ್ ಇದೆ. ಉಮೇಶ ಜಾಧವ ಅವರು ಬಿಜೆಪಿಗೆ ಹೋಗುವುದು ಸುಳ್ಳು ಅತೃಪ್ತ ಶಾಸಕರ ಬೇಡಿಕೆಯನ್ನು ಪಕ್ಷದ ವರಿಷ್ಠರು ಶಮನಮಾಡುತ್ತಾರೆ ಎಂದರು.
ಸ್ಮಾರ್ಟ್ ಸಿಟಿ ಕಾಮಗಾರಿ ಹಂತ ಹಂತವಾಗಿ ಪ್ರಾರಂಭಿಸಲಾಗುತ್ತಿದೆ. ಸುಪರ್ ಸ್ಪೇಷಾಲಿಟಿ ಆಸ್ಪತ್ರೆ ಸುಸಜ್ಜಿತವಾದ ಕಟ್ಟಡ ನಿರ್ಮಾಣವಾಗುತ್ತಿದ್ದು ಶೀಘ್ರದಲ್ಲಿಯೇ ಪ್ರಾರಂಭಿಸಲಾಗುವುದು ಎಂದು ಹೇಳಿದರು.
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ