Breaking News

ಬೆಳಗಾವಿಯಲ್ಲಿ ರಷಿಯಾ ಮಾದರಿಯ ಕುಸ್ತಿ ಮೈದಾನ ನಿರ್ಮಾಣ- ಸತೀಶ್ ಜಾರಕಿಹೊಳಿ

ಬೆಳಗಾವಿಯಲ್ಲಿ ಸಡಗರ ಸಂಬ್ರಮದಿಂದ ಗಣರಾಜ್ಯೋತ್ಸವ ಆಚರಣೆ

ಬೆಳಗಾವಿ- ರಾಜ್ಯದ ಎರಡನೇಯ ರಾಜಧಾನಿ ಬೆಳಗಾವಿಯಲ್ಲಿ ಸಡಗರ ಸಂಬ್ರಮದಿಂದ ಗಣರಾಜ್ಯೋತ್ಸವವನ್ನು ಆಚರಿಸಲಾಯಿತು ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಧ್ವಜಾರೋಹಣ ಮಾಡಿದರು

ಪೋಲೀಸ್ ಇಲಾಖೆಯ ವಿವಿಧ ವಿಭಾಗದ ತುಕಡಿಗಳು ಆಕರ್ಷಕ ಪಥಸಂಚಲನ ನಡೆಸಿ ಗೌರವ ವಂದನೆ ಸಲ್ಲಿಸಿದರು ಎನ್ ಸಿ ಸಿ,ಸ್ಕೌಟ್ ಮತ್ತು ನಗರದ ವಿವಿಧ ಶಾಲೆಗಳ ವಿಧ್ಯಾರ್ಥಿಗಳು ಪಥಸಂವಲನದಲ್ಲಿ ಭಾಗವಹಿಸಿ ಎಲ್ಲರ ಗಮನ ಸೆಳೆದರು

ಈ ಸಂಧರ್ಭದಲ್ಲಿ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ದೇಶ ಅಹಿಂಸಾ ಹೋರಾಟದ ಮೂಲಕ ಸ್ವಾತಂತ್ರ್ಯ ಪಡೆದು ಇತರ ದೇಶಗಳಿಗೆ ಪ್ರೇರಣಾದಾಯಕವಾಗಿದೆ ಸ್ವಾತಂತ್ಯ ಹೋರಾಟದಲ್ಲಿ ಬೆಳಗಾವಿ ಜಿಲ್ಲೆ ಪ್ರಮುಖ ಪಾತ್ರವಹಿಸಿದ್ದು ಹೆಮ್ಮೆಯ ಸಂಗತಿಯಾಗಿದೆ ವೀರರಾಣಿ ಕಿತ್ತೂರ ಚನ್ನಮ್ಮ ಸಂಗೊಳ್ಳಿ ರಾಯಣ್ಣ ಸೇರಿದಂತೆ ಬೆಳಗಾವಿ ಜಿಲ್ಲೆಯ ಅನೇಕ ಜನ ಮಹಾಪುರುಷರು ಸ್ವಾತಂತ್ರ್ಯ ಹೋರಾಟಕ್ಕೆ ಬುನಾದಿ ಹಾಕಿದ್ದು ಗಣರಾಜ್ಯೋತ್ಸವ ದಿನ ಎಲ್ಲ ಮಹಾಪುರುಷರನ್ನು ಸ್ಮರಿಸಬೇಕು ಎಂದರು

ರಾಜ್ಯದಲ್ಲಿರುವ ಸಮ್ಮಿಶ್ರ ಸರ್ಕಾರ ಬೆಳಗಾವಿ ಜಿಲ್ಲೆಯ ಅನೇಕ ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಿಸಿ ಪರಿಹಾರ ಕಾಮಗಾರಿಗಳನ್ನು ಆರಂಭಿಸಿದೆ ಜಿಲ್ಲೆಯ ಸಾವಿರಾರು ರೈತರ ಸಾಲ ಮನ್ನಾ ಮಾಡಲಿದ್ದು ಸರ್ಕಾರ ಬೆಳಗಾವಿ ಜಿಲ್ಲೆಯಲ್ಲಿ ನೀರಾವರಿ ಯೋಜನೆಗಳನ್ನು ಪೂರ್ಣಗೊಳಿಸಲಿದೆ ಸರ್ಕಾರ ವಿವಿಧ ಇಲಾಖೆಗಳ ಮೂಲಕ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಜಿಲ್ಲೆಯ ಅಭಿವೃದ್ಧಿಗೆ ಸರ್ಕಾರ ಒತ್ತು ನೀಡುತ್ತಿದೆ ಎಂದು ಸತೀಶ್ ಜಾರಕಿಹೊಳಿ ಗಣರಾಜ್ಯೋತ್ಸವದ ಸಂದೇಶ ನೀಡಿದರು

ಸ್ಮಾರ್ಟ್ ಸಿಟಿ ಯೋಜನೆ,ಲೋಕೋಪಯೋಗಿ ಇಲಾಖೆಯ ಮೂಲಕ ಜಿಲ್ಲೆಯ ರಸ್ತೆಗಳನ್ನು ಸುಧಾರಣೆ ಮಾಡಲಾಗುತ್ತಿದೆ ಐದು ಕೋಟಿ ರೂ ವೆಚ್ಚದಲ್ಲಿ ಬೆಳಗಾವಿಯಲ್ಲಿ ರಷಿಯಾ ಮಾದರಿಯಲ್ಲಿ ಕುಸ್ತಿ ಮೈದಾನ ನಿರ್ಮಿಸುವ ಸಂಕಲ್ಪ ಮಾಡಲಾಗಿದೆ ಬೆಳಗಾವಿಯ ಪೋಲೀಸ್ ಆಯುಕ್ತರ ಕಚೇರಿ ನಿರ್ಮಾಣಕ್ಕೆ ಸರ್ಕಾರಕ್ಕೆ 11ಕೋಟಿ ರೂ ಗಳ ಪ್ರಸ್ತಾವನೆ ಸಲ್ಲಿಸಿ ಪ್ರಸಕ್ತ ಸಾಲಿನ ಬಜೆಟ್ ನಲ್ಲಿ ಅದಕ್ಕೆ ಮಂಜೂರಾತಿ ಪಡೆಯುವ ಸಂಕಲ್ಪ ಮಾಡಲಾಗಿದೆ ಎಂದು ಸತೀಶ್ ಜಾರಕಿಹೊಳಿ ಹೇಳಿದರು

Check Also

ರಮೇಶ್ ಕತ್ತಿ, ರಾಜೀನಾಮೆ ಪತ್ರದಲ್ಲಿ ಏನಿದೆ ಗೊತ್ತಾ…?

  ಮಾನ್ಯ ಮುಖ್ಯ ಕಾರ್ಯನಿರ್ವಾಹಕರು ದಿ ಬೆಳಗಾವಿ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿ.ಬೆಳಗಾವಿ ವಿಷಯ- ನನ್ನ ಅಧ್ಯಕ್ಷ ಸ್ಥಾನಕ್ಕೆ …

Leave a Reply

Your email address will not be published. Required fields are marked *

Sahifa Theme License is not validated, Go to the theme options page to validate the license, You need a single license for each domain name.