Breaking News

ಚಿಕ್ಕೋಡಿ,ಬೆಳಗಾವಿ ಕಾಂಗ್ರೆಸ್ ಅಭ್ಯರ್ಥಿಗಳ ಬದಲಾವಣೆ ಇಲ್ಲ- ಸತೀಶ್ ಜಾರಕಿಹೊಳಿ ಸ್ಪಷ್ಟನೆ

ಬೆಳಗಾವಿ- ಕತ್ತಿ ಬ್ರದರ್ಸ್ಸ್ ಬಂಡಾಯ ವಿಚಾರವಾಗಿ ಬೆಳಗಾವಿ ಜಿಲ್ಲೆಯಲ್ಲಿ ಚಿಕ್ಕೋಡಿ ,ಮತ್ತು ಬೆಳಗಾವಿ ಕ್ಷೇತ್ರದ ಅಭ್ಯರ್ಥಿಗಳು ಬದಲಾಗ್ತಾರೆ ಎನ್ನುವ ವದಂತಿಗಳು ಹರಡಿದ್ದು ಕಾಂಗ್ರೆಸ್ ಕಾರ್ಯಕರ್ತರು ವಿಚಲಿತರಾಗುವ ಅವಶ್ಯಕತೆ ಇಲ್ಲ ಎರಡೂ ಕ್ಷೇತ್ರಗಳಲ್ಲಿ ಒಂದು ಸುತ್ತಿನ ಪ್ರಚಾರ ಮುಗಿದಿದೆ ಅಭ್ಯರ್ಥಿಗಳ ಬದಲಾವಣೆ ಮಾಡುವದಿಲ್ಲ ಎಂದು ಅರಣ್ಯ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಸ್ಪಷ್ಟಪಡಿಸಿದ್ದಾರೆ

ಬೆಳಗಾವಿಯಲ್ಲಿ ಸಚಿವ ಸತೀಶ್ ಜಾರಕಿಹೊಳಿ ಪ್ರತಿಕ್ರಿಯೆ ನೀಡಿದ್ದು ಕತ್ತಿ ಸಹೋದರರು ಯಾವುದೇ ಕಾಂಗ್ರೆಸ್ ನಾಯಕರನ್ನ ಸಂಪರ್ಕ ಮಾಡಿಲ್ಲ ಕಾಂಗ್ರೆಸ್ ಸೇರುವುದು ಕೇವಲ ವದಂತಿ ಮಾತ್ರ. ಚಿಕ್ಕೋಡಿ, ಬೆಳಗಾವಿ ಕಾಂಗ್ರೆಸ್ ಅಭ್ಯರ್ಥಿ ಘೋಷಣೆ ಮಾಡಿ ಆಗಿದೆ.ಇದರಲ್ಲಿ ಯಾವುದೇ ಬದಲಾವಣೆ ಇಲ್ಲಾ ಎಂದು ಸತೀಶ್ ಹೇಳಿದ್ದಾರೆ

ಯಾವುದೇ ಗೊಂದಲಕ್ಕೆ ಈಡಾಗದಂತೆ ಕಾರ್ಯಕರ್ತರಿಗೆ ಮನವಿ ಮಾಡಿಕೊಂಡಿರುವ ಅವರು ಕತ್ತಿ ಸಹೋದರರು ಪಕ್ಷ ಸೇರುವ ವಿಚಾರ ಹೈಕಮಾಂಡಗೆ ಬಿಟ್ಟ ವಿಚಾರವಾಗಿದೆ ಬೆಳಗಾವಿ ಸತೀಶ್ ಜಾರಕಿಹೊಳಿ ಹೇಳಿದ್ದಾರೆ

Check Also

ಇಂದು ಬೆಳಗಾವಿಯಲ್ಲಿ ಬೃಹತ್ ಮೌನ ಮೆರವಣಿಗೆ ಹತ್ತು ಸಾವಿರ ರೇನ್ ಕೋಟ್ ವಿತರಣೆ

ಇಂದು ಬೆಳಗಾವಿಯಲ್ಲಿ ಬೃಹತ್ ಮೌನ ಮೆರವಣಿಗೆ ಹತ್ತು ಸಾವಿರ ರೇನ್ ಕೋಟ್ ವಿತರಣೆ ಬೆಳಗಾವಿ- ಪುಣ್ಯಕ್ಷೇತ್ರ ಧರ್ಮಸ್ಥಳದ ಕುರಿತು ಸರ್ಕಾರ …

Leave a Reply

Your email address will not be published. Required fields are marked *