Breaking News

ಕಾಂಗ್ರೆಸ್ ಪಕ್ಷದಲ್ಲಿ ಭಿನ್ನಾಭಿಪ್ರಾಯ ಇಲ್ಲ- ಸತೀಶ್ ಜಾರಕಿಹೊಳಿ

ಕಾಂಗ್ರೆಸ್ ಪಕ್ಷದಲ್ಲಿ ಭಿನ್ನಾಭಿಪ್ರಾಯ ಇಲ್ಲ- ಸತೀಶ್ ಜಾರಕಿಹೊಳಿ

ಬೆಳಗಾವಿ- ಕಾಂಗ್ರೆಸ್ ಪಕ್ಷದಲ್ಲಿ ಡಿ.ಕೆ.ಶಿ, ಸಿದ್ದರಾಮಯ್ಯ ಬಣ ಇರುವುದು ಸತ್ಯ ಆದ್ರೆ ಪಕ್ಷದಲ್ಲಿ ಭಿನ್ನಾಭಿಪ್ರಾಯ ಇಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ‌ ಹೇಳಿದರು

ಕೆಪಿಸಿಸಿ ಕಾರ್ಯಾದ್ಯಕ್ಷರಾದ ಬಳಿಕ ಪ್ರಥಮ ಬಾರಿಗೆ ಬೆಳಗಾವಿಗೆ ಆಗಮಿಸಿದ ಸತೀಶ್ ಜಾರಕಿಹೊಳಿ ಕಾಂಗ್ರೆಸ್ ಕಚೇರಿಯಲ್ಲಿ ಮಾದ್ಯಮಗಳ ಜೊತೆ ಮಾತನಾಡಿ ಡಿ.ಕೆ.ಶಿವಕುಮಾರ ಕಾಂಗ್ರೆಸ್ ಅಧ್ಯಕ್ಷರು. ಸಿದ್ದರಾಮಯ್ಯನವರು ಪ್ರಭಾವಿ ನಾಯಕರು. ಪಕ್ಷದಲ್ಲಿ ಈಗ ಮೂವರು ಕಾರ್ಯಾದ್ಯಕ್ಷರು ಇದ್ದಾರೆ ದಲಿತ ಸಮುದಾಯದ ನಾಯಕರೊಬ್ಬರು ಕಾರ್ಯಾದ್ಯಕ್ಷರಾಗಬೇಕು ಎಂಬ ಬೇಡಿಕೆ ಇದೆ ಎಲ್ಲರ ಸಮ್ಮುಖದಲ್ಲಿಯೇ ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಪಕ್ಷ ಮುನ್ನಡೆಸುತ್ತೇವೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ‌ ಹೇಳಿದರು.

ಮನೆ ಎಂದ ಮೇಲೆ ಕೆಲವರಲ್ಲಿ ವೈಮನಸ್ಸು ಇರುವುದು ಸಹಜ. ಚುನಾವಣೆ ಸಂದರ್ಭದಲ್ಲಿ ಟಿಕೆಟ್ ಗಾಗಿ ಗುಂಪುಗಾರಿಕೆ ನಡೆಯುತ್ತದೆ. ಸಿದ್ದರಾಮಯ್ಯ ಬಣ, ಡಿ.ಕೆ.ಶಿವಕುಮಾರ ಬಣ ಇರುವುದು ಸತ್ಯ. ಆದರೆ ಪಕ್ಷದ ವಿಚಾರ ಬಂದಾಗ ಎಲ್ಲರೂ ಒಂದಾಗುತ್ತೇವೆ ಎಂದರು. ಚುನಾವಣೆಗೆ ಇನ್ನೂ ಮೂರು ವರ್ಷ ಬಾಕಿ ಇದೆ ಅಲ್ಲಿಯವರೆಗೆ ಪಕ್ಷವನ್ನು ಸಂಘಟಿಸಿ ಪಕ್ಷವನ್ನು ಅಧಿಕಾರಕ್ಕೆ ತರುವ ಪ್ರಯತ್ನ ಮಾಡುತ್ತೇವೆ ಎಂದರು

ಎಲ್ಲರ ಬಹುದಿನಗಳ ಕಾತುರತೆಯಿತ್ತು.ಕಾಂಗ್ರೆಸ್ ಅಧ್ಯಕ್ಷರ ಬಗ್ಗೆ ಚರ್ಚೆ ನಡೆಯುತ್ತಿತ್ತು. ಹೈಕಮಾಂಡ್ ಇದನ್ನು ಗಂಭೀರವಾಗಿ ಪರಿಗಣಿಸಿ ಒಬ್ಬ ಅಧ್ಯಕ್ಷ ಹಾಗೂ ಮೂವರನ್ನು ಕಾರ್ಯಾಧ್ಯಕ್ಷರ ನೇಮಕ ಮಾಡಿದೆ ಎಂದರು. ಹುದ್ದೆಗೆ ಸಹಕಾರ ನೀಡಿದ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಸಿದ್ದರಾಮಯ್ಯ ನವರಿಗೆ ಧನ್ಯವಾದ ತಿಳಿಸುತ್ತೇನೆ ಎಂದರು. ಇಗೀನ ಅಧ್ಯಕ್ಷ ಡಿ.ಕೆ.ಶಿವಕುಮಾರ ಅವರಲ್ಲಿ ಉತ್ಸಾಹ ಇದೆ. ಬರುವ ವಿಧಾನಸಭೆ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಮೂವರು ಕಾರ್ಯಾಧ್ಯಕ್ಷರು ಕೆಪಿಸಿಸಿ ಅದ್ಯಕ್ಷರಿಗೆ ಸಂಪೂರ್ಣ ಸಹಕಾರ ನೀಡುತ್ತೇವೆ ಎಂದರು.

ಕೆಪಿಸಿಸಿ ಕಾರ್ಯಾಧ್ಯಕ್ಷ ಪರಿಶಿಷ್ಟ ಜಾತಿಯ ನೀಡಬೇಕೆಂಬ ಆಸೆ ನಮಗೂ ಇದೆ. ಇನ್ನೂ ಒಂದು ಹುದ್ದೆ ಖಾಲಿ ಇದೆ. ಹೈಕಮಾಂಡ್ ಯಾವ ರೀತಿ ತೀರ್ಮಾನ ಮಾಡುತ್ತದೆ ಎನ್ನುವುದನ್ನು ಕಾದು ನೋಡಬೇಕು.

ಬೆಳಗಾವಿಯಲ್ಲಿ ಗೋಕಾಕ ಸೇರಿದಂತೆ ‌ಮೂರು ಕ್ಷೇತ್ರದಲ್ಲಿ ಕಾಂಗ್ರೆಸ್ ವಂಚಿತವಾಗಿದೆ. ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ‌ಮುಖಮಾಡಿದ್ದಾರೆ. ಅದರಿಂದ ಯಾವುದೇ ನಷ್ಟವಾಗಿಲ್ಲ. ಉಪಚುನಾವಣೆಯಲ್ಲಿ ನಮ್ಮ‌ಶಕ್ತಿ ಪ್ರದರ್ಶ ಮಾಡಿದ್ದೇವೆ. ಇನ್ನೂ ಮೂರು ವರ್ಷ ಕಾಲಾವಕಾಶವಿದೆ. ಪಕ್ಷ ಬಲಪಡಿಸುವ ತಂತ್ರ ನಮ್ಮ ಪಕ್ಷದ ಕಾರ್ಯಕರ್ತರಲ್ಲಿ ಇದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಕೊರೋನಾ ವೈರಸ್ ತಡೆಗಟ್ಟುವ ಬಗ್ಗೆ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಸಭೆ ನಡೆಸಲು ಸೂಕ್ತ. ಮುಂದೆ ಅವಘಡವಾಗದಂತೆ ಎಚ್ಚರಿಕೆ ವಹಿಸಬೇಕು ಎಂದರು.

ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಕಾಂಗ್ರೆಸ್ ಸಿಂಬಾಲ್ ಮೇಲೆ ಚುನಾವಣೆ ಎದುರಿಸುವ ಕುರಿತು ಸ್ಥಳೀಯ ನಾಯಕರ,ಕಾರ್ಯಕರ್ತರ ಅಭಿಪ್ರಾಯ ಆಲಿಸಿ ನಂತರ ತೀರ್ಮಾಣ ಕೈಗೊಳ್ಳುತ್ತೇವೆ ಎಂದು ಸತೀಶ ಜಾರಕಿಹೊಳಿ ತಿಳಿದಿದರು

ಕಾಂಗ್ರೆಸ್ ಗ್ರಾಮೀಣ ಜಿಲ್ಲಾಧ್ಯಕ್ಷ ವಿನಯ ನಾವಲಗಟ್ಟಿ, ಕಾಂಗ್ರೆಸ್ ಮುಖಂಡ ವೀರಕುಮಾರ ಪಾಟೀಲ, ಲಕ್ಷ್ಮಣರಾವ್ ಚಿಂಗಳೆ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Check Also

ಜ್ಞಾನೇಶ್ವರ ಮುನಿ ಮಹಾರಾಜರು (86) ವಿಧಿವಶ

ಬೆಳಗಾವಿ -ಯಮ ಸಲ್ಲೇಖನ ವೃತ್ತದ ಮೂಲಕ ಜ್ಞಾನೇಶ್ವರ ಮುನಿ ಮಹಾರಾಜರು (86) ಇಹಲೋಕವನ್ನು ತ್ಯೇಜಿಸಿದ್ದಾರೆ. ಬೈಲಹೊಂಗಲ ತಾಲೂಕಿನ ದೇವಲಾಪುರ ಕ್ಷೇತ್ರದಲ್ಲಿ …

Leave a Reply

Your email address will not be published. Required fields are marked *