
ಬೆಳಗಾವಿ- ಬೆಳಗಾವಿ ಜಿಲ್ಲೆಯಲ್ಲಿ ಕೋವಿಡ್ ಚಿಕಿತ್ಸಾ ಸೌಲಭ್ಯಗಳನ್ನು ಹೆಚ್ಚಿಸುವಂತೆ ಕೆಪಿಸಿಸಿ ಕಾರ್ಯಾದ್ಯಕ್ಷ ಸತೀಶ್ ಜಾರಕಿಹೊಳಿ ಅವರು ಮುಖ್ಯಮಂತ್ರಿ ಯಡಿಯೂರಪ್ಪನವರಿಗೆ ಪತ್ರ ಬರೆದಿದ್ದಾರೆ.
ಬೆಳಗಾವಿ ಜಿಲ್ಲೆಯ ತಾಲ್ಲೂಕಾ ಆಸ್ಪತ್ರೆಗಳನ್ನು ಕೋವೀಡ್ ಆಸ್ಪತ್ರೆಗಳನ್ನಾಗಿ ಪರಿವರ್ತನೆ ಮಾಡಬೇಕು,ಜಿಲ್ಲೆಯ ಎಲ್ಲ ಹೋಬಳಿಗಳಲ್ಲಿ ಕೋವೀಡ್ ಕೇರ್ ಸೆಂಟರ್ ಗಳನ್ನು ಆಭಿಸಬೇಕು,ಆರೋಗ್ಯ ಇಲಾಖೆಯಲ್ಲಿ ಖಾಲಿ ಉಳಿದಿರುವ ಎಲ್ಲ ಹುದ್ದೆಗಳನ್ನು ತುಂಬ ಬೇಕು,ಎಲ್ಲ ತಾಲ್ಲೂಕುಗಳಿಗೆ ಎರಡು ಹೆಚ್ಚುವರಿ ಅಂಬ್ಯುಲೆನ್ಸ್ ಗಳನ್ನು ನೀಡಬೇಕು ಬೆಳಗಾವಿ ಜಿಲ್ಲೆಯಲ್ಲಿ ಕೇವಲ ಎರಡು ಕೋವಿಡ್ ಟೆಸ್ಟಿಂಗ್ ಲ್ಯಾಬ್ ಗಳಿದ್ದು ,ಚಿಕ್ಕೋಡಿ ಮತ್ತು ಗೋಕಾಕಿನಲ್ಲಿ ಎರಡು ಪ್ರಯೋಗಾಲಯ ಮಂಜೂರು ಮಾಡುವಂತೆ ಸತೀಶ್ ಜಾರಕಿಹೊಳಿ,ಅವರು ಮುಖ್ಯಮಂತ್ರಿ ಗಳಿಗೆ ಪತ್ರ ಬರೆದು ಮನವಿ ಮಾಡಿಕೊಂಡಿದ್ದಾರೆ.
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ