Breaking News

ಮಣಗುತ್ತಿ ಗ್ರಾಮದಲ್ಲಿ ಮೂರ್ತಿ ವಿವಾದಕ್ಕೆ ಟೋಟಲ್ ಬ್ರೇಕ್…

ಬೆಳಗಾವಿ: ಮಣಗುತ್ತಿ ಗ್ರಾಮದಲ್ಲಿ ಛತ್ರಪತಿ ಶಿವಾಜಿ ಮಹಾರಾಜ ಹಾಗೂ ವಾಲ್ಮೀಕಿ ಮಹರ್ಷಿ ಮೂರ್ತಿ ಪ್ರತಿಷ್ಠಾಪನೆ ಅಡಿಗಲ್ಲು ಕಾರ್ಯಕ್ರಮವನ್ನು ಶಾಸಕ ಸತೀಶ್ ಜಾರಕಿಹೊಳಿ ಶನಿವಾರ ನೆರವೇಸಿದರು.
ಶಿವಾಜಿ ಪ್ರತಿಮೆ ಸ್ಥಾಪನೆ ವಿವಾದಕ್ಕೆ ಇಡಾಗಿದ್ದ ಮಣಗುತ್ತಿ ಗ್ರಾಮದಲ್ಲಿ, ಮೂರು ಗ್ರಾಮಗಳ ಗ್ರಾಮಸ್ಥರ ಮುಖಂಡರೊಂದಿಗೆ ಚರ್ಚಿಸಿ, ಒಮ್ಮತ ಅಭಿಪ್ರಾಯದಿಂದ ಮೂರ್ತಿ ಪ್ರತಿಷ್ಠಾಪನೆ ಅಡಿಗಲ್ಲು ಸಮಾರಂಭವನ್ನು ನಡೆಯಿತು.
ಇದೇ ವೇಳೆ ಮಾತನಾಡಿದ ಅವರು, ಗ್ರಾಮದ ಹಿತದೃಷ್ಟಿಯಿಂದ ಧರ್ಮದಲ್ಲಿ ರಾಜಕೀಯ ಮಾಡುವುದು ಬೇಡ. ಎಲ್ಲರೂ ಗ್ರಾಮದ ಅಭಿವೃದ್ಧಿಗೆ ಶ್ರಮೀಸಬೇಕಾಗಿದೆ. ಇಂದಿನ ಬೆಳವಣಿಗೆಯಿಂದ ಸುತ್ತಮುತ್ತಲಿನ ಗ್ರಾಮಸ್ಥರಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿದೆ. ಆದಷ್ಟು ಬೇಗ ಎರಡು ಮೂರ್ತಿಗಳನ್ನು ಪ್ರತಿಷ್ಠಾಪನೆ ಮಾಡಲಾಗುವುದು ಎಂದು ಹೇಳಿದರು.
ಎಲ್ಲ ಸಮಾಜದ ಮುಖಂಡರು ಮಹಾನ್ ನಾಯಕರ ತತ್ವ, ಆದರ್ಶಗಳನ್ನು ತಮ್ಮ ಜೀವನದಲ್ಲಿ ಅಳಡಿಸಿಕೊಳ್ಳಬೇಕು. ಸಮಾಜದ ಮುಖಂಡರಲ್ಲಿ ಯಾವುದೇ ಭಿನ್ನಾಭಿಪ್ರಾಯವಿದ್ದರು. ಅವುಗಳನ್ನು ಬದಿಗೊತ್ತಿ. ಒಗ್ಗಟ್ಟಿನ ಮಂತ್ರ ಜಪಿಸಬೇಕು ಎಂದರು. ಮಣಗುತ್ತಿ ಗ್ರಾಮಸ್ಥರು ಶಾಸಕ ಸತೀಶ್ ಜಾರಕಿಹೊಳಿ ಅವರಿಗೆ ಸನ್ಮಾನಿಸಿದರು.
ಈ ಸಂದರ್ಭದಲ್ಲಿ ರಮೇಶ ಪಾಟೀಲ, ಸುರೇಶ ಬೆಣ್ಣಿ, ಸುನೀಲ ಹುಕ್ಕೇರಿ, ಮಾಹನಿಂಗ ಶಿರಗುಪ್ಪಿ, ಅರ್ಜುನ ಗಸ್ತಿ, ಶರತ್ ಪಾಟೀಲ, ರಮೇಶ್ ಜಿಂಜಾರ ಪಾಟೀಲ,ಬಸು ದರನಟ್ಟಿ, ವಿಠ್ಠಲ ವಕ್ಕೂಜಿ, ಕಾಡಪ್ಪ, ಆರ್.ಕೆ.ದೇಸಾಯಿ, ರಾಜು ದರಗಶೆಟ್ಟಿ, ಕಿರಣ ರಜಪೂತ, ಸುನೀಲ ಹುಕ್ಕೇರಿ, ಮಂಜು ಕಾಂಬಳೆ ಸೇರಿದಂತೆ ಇತರರು ಇದ್ದರು.

ಬೆಳಗಾವಿ: ಯಮಕನಮರಡಿ ವಿಧಾನಸಭಾ ಕ್ಷೇತ್ರದ ಉಳಾಗಡ್ಡಿ, ಖಾನಾಪುರ ಗ್ರಾಮಗಳಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಸತೀಶ್ ಜಾರಕಿಹೊಳಿ ಇಂದು ಚಾಲನೆ ನೀಡಿದರು.
ಪ್ರಧಾನ ಮಂತ್ರಿ ಗ್ರಾಮ ಸಡಕ್ ಯೋಜನೆಯಡಿ ಉಳ್ಳಾಗಡ್ಡಿ, ಖಾನಾಪುರ ಗ್ರಾಮಗಳಲ್ಲಿ 573.73 ಲಕ್ಷ ರೂ ಅಂದಾಜು ಮೊತ್ತದ ವಿವಿಧ ಕಾಮಗಾರಿಗಳಿಗೆ ಗ್ರಾಮ ಪಂಚಾಯಿತಿ ಅಧ್ಯಕ್ಷ, ಸದಸ್ಯರು ಭೂಮಿ ಪೂಜೆ ನೆರವೇರಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿ ಸದಸ್ಯ ಮಾಹಾಂತೇಶ ಮಗದುಮ್ಮ, ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯ ಪಾರೀಶಗೌಡ ಪಾಟೀಲ, ಗ್ರಾಮ ಪಂಚಾಯಿತಿ ಅಧ್ಯಕ್ಷ ಸುದೀರ ಗಿರೀಗೌಡರ, ರಾಜು ಅವಟಿ, ಭರತೇಶ ವೀರಭದ್ರಣ್ಣವರ, ಮನೋಹರ ತಳವಾರ, ಬಸವಂತ ಅರಭಾವಿ, ಶಿವರಾಜ ಜರಳಿ, ಈಶ್ವರ ಮುದಪಾಟಿ, ಮಲ್ಲಪ್ಪ ನಾಯಕ ಸೇರಿದಂತೆ ಇತರರು ಇದ್ದರು.

Check Also

ವೆಲ್ಡಿಂಗ್ ಕಾರ್ಮಿಕನ ಮಗ ಲಕ್ ಪತಿ ಆಗಿದ್ದು ಹೇಗೆ ಎಲ್ಲಿ ಗೊತ್ತಾ…??

ಬಾಗಲಕೋಟೆ-ಸಾಧನೆಗೆ ಬಡತನ ಎಂದಿಗೂ ಅಡ್ಡಿಯಾಗದು. ಸತತ ಪ್ರಯತ್ನ, ಪರಿಶ್ರಮವಿದ್ದರೆ ಬೌದ್ಧಿಕ ಮಟ್ಟ ವೃದ್ಧಿಸಿಕೊಂಡು, ಎಂಥವರು ಸಾಧನೆ ಮಾಡಬಹುದು. ಜ್ಞಾನಕ್ಕೆ ಬೆಲೆ …

Leave a Reply

Your email address will not be published. Required fields are marked *