Breaking News

ಬೆಳಗಾವಿಯಿಂದ ಕಲ್ಯಾಣ ಕರ್ನಾಟಕಕ್ಕೆ ಹಾರಿದ ಹುಲಿ….ಕಾಪ್ಟರ್…!!!

ಗೋಕಾಕ: ಉತ್ತರ ಕರ್ನಾಟಕದ ಮಸ್ಕಿ ಹಾಗೂ ಬಸವಕಲ್ಯಾಣಗಳ ಎರಡು ಕ್ಷೇತ್ರದ ವಿಧಾನಸಭೆಯ ಉಪಚುನಾವಣೆಗೆ ಇನ್ನೂ ದಿನಾಂಕ ನಿಗದಿಯಾಗಿಲ್ಲ. ಆದರೆ ಮೂರು ಪಕ್ಷಗಳ ಚಂದುರಂಗದಾಟ ದಿನದಿಂದ ದಿನಕ್ಕೆ ರಂಗೇರುತ್ತಿದೆ. ಇದಕ್ಕೆ ಸಂಬಂಧಿಸಿದಂತೆ ಶಾಸಕ, ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿ ಹೊಳಿ ಪಕ್ಷ ಸಂಘಟನೆ ಹಾಗೂ ಚುನಾವಣಾ ಕಾರ್ಯತಂತ್ರ ಕುರಿತು ಪಕ್ಷದ ಹಲವು ಕಾರ್ಯಕರ್ತರೊಂದಿಗೆ ಸಮಾಲೋಚನೆ ನಡೆಸಲು ಹಾಗೂ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಎರಡು ಅಭ್ಯರ್ಥಿಗಳ ಗೆಲುವಿಗಾಗಿ ಹೆಲಿಕಾಪ್ಟರ್ ಮೂಲಕ ಕಲ್ಯಾಣ ಕರ್ನಾಟಕ ಪ್ರವಾಸ ಕೈ ಗೊಂಡಿದ್ದಾರೆ.ಅದು ಹೆಲಿಕಾಪ್ಟರ್ ನಿಜ ಅದರಲ್ಲಿ ಹುಲಿ ಬೆಳಗಾವಿಯಿಂದ ಕಲ್ಯಾಣ ಕರ್ನಾಟಕಕ್ಕೆ ಹಾರಿದ್ದೂ ನಿಜ

ಹೆಲಿಕಾಪ್ಟರ್ ಮೂಲಕ ಪ್ರವಾಸ ಕೈ ಗೊಂಡಿರುವ ಅವರು, ಅಭ್ಯರ್ಥಿಗಳ ಗೆಲುವಿಗಾಗಿ ಈಗಾಗಲೇ ಅಗತ್ಯ ಕಾರ್ಯತಂತ್ರವನ್ನು ರೂಪಿಸಿದ್ದಾರೆ. ಕಾಂಗ್ರೆಸ್ ರಾಜ್ಯಾಧ್ಯಕ್ಷ ಡಿ.ಕೆ.ಶಿವುಕುಮಾರ್‍ರವರು ಈಗಾಗಲೇ ಕಲ್ಯಾಣ ಕರ್ನಾಟಕ ಪ್ರವಾಸ ಕೈ ಗೊಂಡಿದ್ದು ಕಾಂಗ್ರೆಸ್ ಪಕ್ಷ ಅಭ್ಯರ್ಥಿಗಳ ಗೆಲುವಿಗಾಗಿ ಕಸರತ್ತು ಆರಂಭಿಸಿದೆ.
ಈ ಹಿಂದೆಯು ರಾಜ್ಯಾದ್ಯಂತ ನಡೆದಿದ್ದ ಹಲವು ಚುನಾವಣೆ ಪ್ರಚಾರ ಹಾಗೂ ಸಮಾವೇಶಗಳಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿ ಹೊಳಿಯವರು ಪಕ್ಷ ಸಂಘಟನೆ ಹಾಗೂ ಚುನಾವಣಾ ಕಾರ್ಯತಂತ್ರವನ್ನು ರೂಪಿಸುವ ಮೂಲಕ ಪಕ್ಷವನ್ನು ಬಲಪಡಿಸಿದ್ದರು.
ಪ್ರವಾಸದಲ್ಲಿ ಅವರ ಜೊತೆ ವಿವೇಕ್ ಜತ್ತಿ, ಪ್ರಕಾಶ್ ಡಾಂಗೆ, ಜಿಲ್ಲಾ ಎಸ್ಟಿ ಸೆಲ್ ಅಧ್ಯಕ್ಷ ಪ್ರಾಶಾಂತ್ ಗುಡ್ಡಕಾರ್ ಉಪಸ್ಥಿತರಿದ್ದರು.

Check Also

ಇಂದು ಬೆಳಗಾವಿಯಲ್ಲಿ ಬೃಹತ್ ಮೌನ ಮೆರವಣಿಗೆ ಹತ್ತು ಸಾವಿರ ರೇನ್ ಕೋಟ್ ವಿತರಣೆ

ಇಂದು ಬೆಳಗಾವಿಯಲ್ಲಿ ಬೃಹತ್ ಮೌನ ಮೆರವಣಿಗೆ ಹತ್ತು ಸಾವಿರ ರೇನ್ ಕೋಟ್ ವಿತರಣೆ ಬೆಳಗಾವಿ- ಪುಣ್ಯಕ್ಷೇತ್ರ ಧರ್ಮಸ್ಥಳದ ಕುರಿತು ಸರ್ಕಾರ …

Leave a Reply

Your email address will not be published. Required fields are marked *