ಲೋಕಸಭೆ ಚುನಾವಣೆಗೆ ಸ್ಪರ್ದಿಸುವ ವಯಕ್ತಿಕವಾಗಿ ಆಸಕ್ತಿ ಇಲ್ಲ- ಸತೀಶ್ ಜಾರಕಿಹೊಳಿ

ಬೆಳಗಾವಿ – ಅಭಿವೃದ್ಧಿಯ ದೃಷ್ಠಿಯಿಂದ ಬೆಳಗಾವಿ ಜಿಲ್ಲೆಯ ವಿಭಜನೆ ಆಗುವ ಅಗತ್ಯವಿದ್ದು,
ಗೋಕಾಕ, ಚಿಕ್ಕೋಡಿ, ಜಿಲ್ಲೆಯಾಗಲೇ ಬೇಕು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಒತ್ತಾಯಿಸಿದ್ದಾರೆ.

ಗುರುವಾರ ನಗರದ ಕಾಂಗ್ರೆಸ್ ಭವನದಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು
ಧಾರವಾಡದಲ್ಲಿಯೂ ಮೊದಲು 18 ವಿಧಾನಸಭಾ ಕ್ಷೇತ್ರಗಳಿದ್ದವು. ಅದರಂತೆ ಬೆಳಗಾವಿಯೂ ವಿಭಜನೆಯಾಗಬೇಕೆಂದು ಮೊದಲಿನಿಂದಲೂ ಒತ್ತಾಯಿಸಿದ್ದೇವೆ ಎಂದು ಹೇಳಿದರು.

ಬೆಳಗಾವಿ ಲೋಕಸಭಾ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಆಯ್ಕೆಯ ಕುರಿತು ಡಿಸೆಂಬರ್ ಮೊದಲವಾರದಲ್ಲಿ ಇನ್ನೊಂದು ಸುತ್ತಿನ ಸಭೆ ನಡೆಸಲಾಗುವುದು ಎಂದು ಹೇಳಿದರು.

ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ಉಪಚುನಾವಣೆಗೆ ನನ್ನ ಹೆಸರು ಕೇಳಿ ಬಂದಿದೆ. ನನಗೆ ವೈಯಕ್ತಿಕವಾಗಿ ಆಸಕ್ತಿ ಇಲ್ಲ. ಮುಂದಿನ ದಿನಗಳಲ್ಲಿ ಸಭೆ ನಡೆಸಿ ಮೂವರು ಅಭ್ಯರ್ಥಿಗಳ ಹೆಸರು ಶಿಪಾರಸ್ಸು ಮಾಡಬೇಕು. ಕಾಂಗ್ರೆಸ್ ನಲ್ಲಿ ಅಭ್ಯರ್ಥಿಗಳ ಕೊರತೆ ಇಲ್ಲ ಸಮರ್ಥ ಅಭ್ಯರ್ಥಿ ನೇಮಕ ಮಾಡಲಾಗುವುದು ಎಂದು ಸ್ಪಷ್ಟಪಡಿಸಿದರು.

ಮಸ್ಕಿಯಲ್ಲಿ ನಮ್ಮ ಪಕ್ಷದ ಅಭ್ಯರ್ಥಿ ಗೆಲವು ನಿಶ್ಚಿತ. ಮಸ್ಕಿಯಲ್ಲಿ ಎಲ್ಲ ಸಮುದಾಯದ ಮತಗಳು ನಿರ್ಣಾಯಕರಾಗಿದ್ದಾರೆ. ಎಂದರು.

ಕರ್ನಾಟಕ ಬಂದ್ ಗೆ ಕಾಂಗ್ರೆಸ್ ಬೆಂಬಲ ಇಲ್ಲ. ಸಮುದಾಯ ಹಾಗೂ ನಿಗಮ ಮಂಡಳಗಳಿಗೆ ಬೋಡ್೯ ಮಾಡಿರುವುದರಕ್ಕೆ ವಿರೋಧ ಇಲ್ಲ. ಅದನ್ನು ಬಜೆಟ್ ನಲ್ಲಿ ಘೋಷಣೆ ಮಾಡಬೇಕಿತ್ತು ಎಂದು ಹೇಳಿದರು.

ಬೆಳಗಾವಿ ಕಾಂಗ್ರೆಸ್ ಗ್ರಾಮೀಣ ಜಿಲ್ಲಾಧ್ಯಕ್ಷ ವಿನಯ ನಾವಲಗಟ್ಟಿ, ನಗರಾಧ್ಯಕ್ಷ ರಾಜು ಸೇಠ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Check Also

ಬೆಳಗಾವಿ ಮಹಾನಗರದ ಅಪಾಯಕಾರಿ ತಂತಿಗಳ ತೆರವು

  ಗಣೇಶೋತ್ಸವ- ಅಪಾಯಕಾರಿ ವಿದ್ಯುತ್ ತಂತಿಗಳ ತೆರವು; ಮಾರ್ಗಗಳ ಎತ್ತರ ಹೆಚ್ಚಳ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಬೆಳಗಾವಿ, -ಗಣೇಶೋತ್ಸವ ಹಿನ್ನೆಲೆಯಲ್ಲಿ …

Leave a Reply

Your email address will not be published. Required fields are marked *

Sahifa Theme License is not validated, Go to the theme options page to validate the license, You need a single license for each domain name.