Breaking News
Home / Breaking News / ರಾಜ್ಯದಲ್ಲಿ ಕಾಂಗ್ರೆಸ್ ಮತ್ತೆ ಪುನರ್ ಕಟ್ಟುವ ಬಗ್ಗೆ ವ್ಯಾಪಕ ಚರ್ಚೆ- ಸತೀಶ್ ಜಾರಕಿಹೊಳಿ

ರಾಜ್ಯದಲ್ಲಿ ಕಾಂಗ್ರೆಸ್ ಮತ್ತೆ ಪುನರ್ ಕಟ್ಟುವ ಬಗ್ಗೆ ವ್ಯಾಪಕ ಚರ್ಚೆ- ಸತೀಶ್ ಜಾರಕಿಹೊಳಿ

 

ಬೆಳಗಾವಿ-ಬೆಂಗಳೂರಿನಲ್ಲಿ ಆತ್ಮಾವಲೋಕನ ಸಭೆ ಬಗ್ಗೆ ಬೆಳಗಾವಿಯಲ್ಲಿ‌ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೋಳಿ ಪ್ರತಿಕ್ರಿಯೆ ನೀಡಿದ್ದಾರೆ

ಬೆಳಗಾವಿಯಲ್ಲಿ ಅವರನ್ನು ಭೇಟಿಯಾದ ಮಾದ್ಯಮ ಮಿತ್ರರ ಜೊತೆ ಮಾತನಾಡಿದಾವರು,
ರಾಜ್ಯದಲ್ಲಿ ಕಾಂಗ್ರೆಸ್ ಮತ್ತೆ ಪುನರ್ ಕಟ್ಟುವ ಬಗ್ಗೆ ವ್ಯಾಪಕ ಚರ್ಚೆ ನಡೆದಿದೆ‌.ಪಕ್ಷದಲ್ಲಿ ಕೆಲ ಬದಲಾವಣೆ ತರುವ ಬಗ್ಗೆ ಸಭೆಯಲ್ಲಿ ನಾಯಕರು ಸಲಹೆ ನೀಡಿದ್ದಾರೆ. ಭವಿಷ್ಯದಲ್ಲಿ ಬದಲಾವಣೆ ಮಾಡಿದರೆ ಮಾತ್ರ ಪಕ್ಷಕ್ಕೆ ಒಳ್ಳೆಯದು ಎನ್ನುವ ಅಭಿಪ್ರಾಯ ವ್ಯಕ್ತವಾಗಿದೆ ಎಂದು ಸತೀಶ್ ಜಾರಕಿಹೊಳಿ ಹೇಳಿದರು.

ಸೂಕ್ತ ಬದಲಾವಣೆ ತರುವ ಬಗ್ಗೆ ಇದನ್ನ ಕೆಪಿಸಿಸಿ ಅಧ್ಯಕ್ಷರು ಒಪ್ಪಿಕೊಂಡಿದ್ದಾರೆ. ನಮ್ಮ ವರ್ತನೆಯಿಂದ, ತಪ್ಪಿನಿಂದ, ಭಾಷೆಯಿಂದ, ಏಕಪಕ್ಷೀಯ ನಿರ್ಧಾರದಿಂದ ಪಕ್ಷಕ್ಕೆ ಸೋಲಾಗುತ್ತಿದೆ. ಒಬ್ಬ ನಾಯಕನಿಗೆ ಬೈಯುವುದರಿಂದ ಅವರ ಸಮುದಾಯಕ್ಕೆ ನೋವಾಗುತ್ತದೆ ಎನ್ನುವ ಸೂಕ್ಷ್ಮ ವಿಚಾರಗಳ ಕುರಿತು ಚರ್ಚೆ ನಡೆದಿದೆ ಎಂದರು‌.

ಸಾಮೂಹಿಕ ನಾಯಕತ್ವದಲ್ಲಿ ಪಕ್ಷ ಮುನ್ನಡೆಸಲು ಸಭೆಯಲ್ಲಿ ತೀರ್ಮಾಣಿಸಲಾಗಿದೆ ಎಲ್ಲ‌ ನಾಯಕರು ಹೃದಯಪೂರ್ವಕ ಹಾಗೂ ಮುಕ್ತವಾಗಿ ಚರ್ಚೆ ಮಾಡಿದ್ದಾರೆ. ನಿಗಮಗಳ‌ ಸ್ಥಾಪನೆ, ಮೀಸಲಾತಿ ಬಗ್ಗೆ ಕಾಂಗ್ರೆಸ್ ಪಕ್ಷ‌ದ ನಿಲುವೇನು? ಎಂಬುದರ ಬಗ್ಗೆ ಚರ್ಚೆ ನಡೆದಿದೆ.ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಅವರು ಕಾಂಗ್ರೆಸ್ ಆತ್ಮಾವಲೋಕನ ಸಭೆಯಲ್ಲಿ ನಡೆದ ಸಾಧಕ ಬಾಧಕ ಚರ್ಚೆಗಳ ಕುರಿತು ಮಾಹಿತಿ ನೀಡಿದ್ರು.

ನಾಳೆ ಶನಿವಾರ ಡಿಕೆಶಿ ಬೆಳಗಾವಿಗೆ

ಕೆಪಿಸಿಸಿ ಅದ್ಯಕ್ಷ ಡಿಕೆ ಶಿವಕುಮಾರ್ ಅವರು ನಾಳೆ ಶನಿವಾರ ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ಧಾಣಕ್ಕೆ ಆಗಮಿಸಲಿದ್ದಾರೆ.

ವಿಶೇಷ ವಿಮಾನದ ಮೂಲಕ ಬೆಳಗಾವಿಗೆ ಆಗಮಿಸುವ ಅವರು ಸಾಂಬ್ರಾ ವಿಮಾನ ನಿಲ್ಧಾಣದಿಂದ ಹೆಲಿಕಾಪ್ಟರ್ ಮೂಲಕ ಮಹಾಲಿಂಗಪೂರ ಸೇರಿದಂತೆ ವಿವಿಧ ನಗರಗಳಲ್ಲಿ ನಡೆಯುವ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.

ಓದುಗರ ಅನುಕೂಲಕ್ಕಾಗಿ ಈ ಸುದ್ಧಿಯಲ್ಲಿ ಡಿಕೆ ಶಿವಕುಮಾರ್ ಅವರ ಪ್ರವಾಸ ಪಟ್ಟಿಯನ್ನು ಅಪ್ ಲೋಡ್ ಮಾಡಲಾಗಿದೆ.

Check Also

ಲಕ್ಷ್ಮಣ ಸವದಿಗೆ ಮುಖ್ಯಮಂತ್ರಿ ಆಗ್ರಿ ಅಂತಾ ಆಶೀರ್ವಾದ ಮಾಡಿದವರು ಯಾರು ಗೊತ್ತಾ.??

ಬೆಳಗಾವಿ-ಲಕ್ಷ್ಮಣ ಸವದಿಗೆ ಸಿಎಂ ಆಗುವಂತೆ ಜೈನ ಮುನಿಗಳು ಆಶೀರ್ವಾದ ಮಾಡಿದ್ದಾರೆ.ಮಾಜಿ ಡಿಸಿಎಂ‌ ಲಕ್ಷ್ಮಣ ಸವದಿಗೆ ಜೈನ್ ಮುನಿಗಳಿಂದ ಆಶೀರ್ವಾದ ಮಾಡಿರುವ …

Leave a Reply

Your email address will not be published. Required fields are marked *