ಬೆಳಗಾವಿ : ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ಅವರಿಗೆ ಭಾರತದ ಇತಿಹಾಸ ಗೊತ್ತಿಲ್ಲ. ಅವರು ಕರ್ನಾಟಕಕ್ಕೆ ಬರುವ ಮೊದಲು ಬಸವಣ್ಣನವರ ಇತಿಹಾಸ ತಿಳಿದುಕೊಂಡು ಬರಬೇಕು ಎಂದು ಕಾಂಗ್ರೆಸ್ ಅಭ್ಯರ್ಥಿ ಸತೀಶ್ ಜಾರಕಿಹೊಳಿ ತಿರುಗೇಟು ನೀಡಿದ್ದಾರೆ.
ನಗರದಲ್ಲಿಂದು ಕಾಂಗ್ರೆಸ್ ಅಭ್ಯರ್ಥಿ ಹಿಂದು ವಿರೋಧಿ ಎಂಬ ಹೇಳಿಕೆಗೆ ಪ್ರತಿಕ್ರಿಯಿಸಿ, ಅರುಣ್ ಸಿಂಗ್ ಕರ್ನಾಟಕದಲ್ಲಿ ಕಾಲಿಡಬೇಕಾದ್ರೆ, ಬಸವಣ್ಣನವರ ಇತಿಹಾಸ ತಿಳಿದುಕೊಳ್ಳಬೇಕು. ಯಾವ ರೀತಿಯಾಗಿ ಹೋರಾಟ ಮಾಡಿದ್ದಾರೆ ಎಂಬುವುದನ್ನು ಓದಿಕೊಳ್ಳಬೇಕು ಎಂದು ಚಾಟಿ ಬಿಸಿದರು.
ಮೌಢ್ಯ ವಿರೋಧಿ ಹೋರಾಟ ಆರಂಭವಾಗಿದ್ದು, 6ನೇ ಶತಮಾನದಲ್ಲಿ. ಸತೀಶ್ ಜಾರಕಿಹೊಳಿ ಆರಂಭ ಮಾಡಿದ್ದಲ್ಲ. ಬಸವಣ್ಣನವರು ಮಾಡಿದ್ದಾರೆ. ಡಾ.ಬಿ.ಆರ್.ಅಂಬೇಡ್ಕರ್ ಅವರು ಸಂವಿಧಾನದಲ್ಲಿ ಬರೆದಿದ್ದಾರೆ. ಅವರ ವಿಚಾರಗಳನ್ನು ನಾವು ಪಾಲೋ ಮಾಡುತ್ತಿದ್ದೇವೆ. ಅರುಣ್ ಸಿಂಗ್ ಏನೇ ಕೇಳಬೇಕಾದರು ಅವರನ್ನೇ ಕೇಳಬೇಕು ಎಂದು ಹೇಳಿದರು.
ಬಿಜೆಪಿ ಪಕ್ಷದವರಿಗೆ ಉಪಚುನಾವಣೆ ಪ್ರಚಾರದಲ್ಲಿ ಯಾವುದೇ ವಿಷಯಗಳಿಲ್ಲ. ಧರ್ಮ , ಜಾತಿ, ಬಾಂಗ್ಲಾದೇಶ ಅಷ್ಟೇ ಚುನಾವಣೆ ವಿಷಯವಾಗಿವೇ. ಚುನಾವಣೆ ಪ್ರಚಾರಕ್ಕೆ ಬಂದಿದ್ದಾರೆ, ಬಂದು ಏನೋ ಹೇಳಬೇಕು ಅಂತಾ, ಏನು ಬೇಕು ಅದನ್ನು ಮಾತನಾಡುತ್ತಿದ್ದಾರೆ ಎಂದು ಕಿಡಿಕಾರಿದರು.
ಬಿಜೆಪಿಯಿಂದ ಕೋಮುಗಲಭೆ :
ಕೋಮುಗಲಭೆ ಮಾಡುವವರು ಬಿಜೆಪಿಯವರು, ಅವರಿಂದಲೇ ಆಗುವುವುದು. ಕಾಂಗ್ರೆಸ್ ನವರಿಂದ ಅಲ್ಲ. ಬಿಜೆಪಿಯ ಯಾವುದೇ ನಾಯಕರು, ರಾಷ್ಟ್ರ ನಾಯಕರು ಬಂದರು ಸಹ ಫಲಿತಾಂಶ ಬದಲಾಯಿಸಲು ಸಾಧ್ಯವಿಲ್ಲ. ಈಗಾಗಲೇ ಜನರು ಯಾರಿಗೆ ವೋಟ್ ಮಾಡಬೇಕು ಎಂಬುವುದನ್ನು ನಿರ್ಧರಿಸಿದ್ದಾರೆ. ಬೆಳಗಾವಿ ಮತದಾರರ ನಿರ್ಧಾರವನ್ನು ಬದಲಾಯಿಸಲು ಸಾಧ್ಯವಿಲ್ಲ ಎಂದು ಹೇಳಿದರು.
ಬಿಜೆಪಿ ಸರ್ಕಾರದ ಏಳು ವರ್ಷದ ಆಡಳಿತ ಅವಧಿಯಲ್ಲಿಯೇ ಹೆಚ್ಚು ಉಗ್ರರ ದಾಳಿಗಳಾಗಿವೆ. ಆದರೆ ಕಾಂಗ್ರೆಸ್ ಸರ್ಕಾರದಲ್ಲಿ ಆಗಿವೇ ಅಷ್ಟೊಂದು ಆಗಿಲ್ಲ. ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಹುತಾತ್ಮರಾದ ಭಾರತೀಯ ಸೈನಿಕ ಕಡಿಮೆ. ಈಗಿನ ಸರ್ಕಾರದಲ್ಲಿಯೇ ಹೆಚ್ಚು ಸೈನಿಕರು ಹುತಾತ್ಮರಾಗಿದ್ದಾರೆ ಎಂದು ಆರೋಪ ಮಾಡಿದರು. ಈ ಸಂದರ್ಭದಲ್ಲಿ ಶಾಸಕ ಗಣೇಶ ಹುಕ್ಕೇರಿ , ಮಾಜಿ ಸಚಿವ ಹೆಚ್.ಎಂ.ರೇವಣ್ಣ, ನಾಗರಾಜ್ ಯಾದವ್ ಇತರರು ಇದ್ದರು.