Home / Breaking News / ಕೋವೀಡ್ ಬಗ್ಗೆ ಕಾಳಜಿ ವಹಿಸಲು,ಕಾಂಗ್ರೆಸ್ ಮಂಡಳಿಯ ಕಳಕಳಿ…..!!!

ಕೋವೀಡ್ ಬಗ್ಗೆ ಕಾಳಜಿ ವಹಿಸಲು,ಕಾಂಗ್ರೆಸ್ ಮಂಡಳಿಯ ಕಳಕಳಿ…..!!!

ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ನೇತೃತ್ವದಲ್ಲಿ ಬೆಳಗಾವಿ ಜಿಲ್ಲಾಧಿಕಾರಿಯನ್ನು ಭೇಟಿ ಮಾಡಿದ ಕಾಂಗ್ರೆಸ್ ನಿಯೋಗ

ಜಿಲ್ಲೆಯಲ್ಲಿ ಕೋವಿಡ್ ನಿಯಂತ್ರಣಕ್ಕೆ ಕೈಗೊಂಡ ಕ್ರಮಗಳು, ಸದ್ಯದ ಸ್ಥಿತಿಗತಿ ಬಗ್ಗೆ ಸುಧೀರ್ಘ ಚರ್ಚೆ

ಬೆಳಗಾವಿ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರ ನೇತೃತ್ವದಲ್ಲಿ ಜಿಲ್ಲೆಯ ಕಾಂಗ್ರೆಸ್ ಶಾಸಕರು ಇಂದು ಜಿಲ್ಲಾಧಿಕಾರಿಗಳನ್ನು ಭೇಟಿ ಮಾಡಿ, ಜಿಲ್ಲೆಯಲ್ಲಿನ ಕೋವಿಡ್ ಸ್ಥಿತಿಗತಿಯ ಬಗ್ಗೆ ಚರ್ಚೆ ನಡೆಸಿದರು.
ಸತೀಶ ಅವರೊಂದಿಗೆ ಶಾಸಕರಾದ ಲಕ್ಷ್ಮಿ ಹೆಬ್ಬಾಳಕರ್, ಅಂಜಲಿ ನಿಂಬಾಳ್ಕರ್, ಮಹಾಂತೇಶ ಕೌಜಲಗಿ ಅವರು ನೇರವಾಗಿ ಜಿಲ್ಲಾಧಿಕಾರಿಗಳ ಕಚೇರಿಗೆ ತೆರಳಿ, ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಅವರೊಂದಿಗೆ ಜಿಲ್ಲೆಯಲ್ಲಿ ಕೋವಿಡ್ ನಿಯಂತ್ರಣಕ್ಕಾಗಿ ಕೈಗೊಂಡಿರುವ ಕ್ರಮಗಳು, ಸದ್ಯದ ಸ್ಥಿತಿಗತಿ ಕುರಿತು ಸುಧೀರ್ಘವಾಗಿ ಚರ್ಚೆ ಮಾಡಿದರು.

ರೆಮ್ ಡಿಸಿವಿರ್, ಆಕ್ಸಿಜನ್ ಕೊರತೆ ನೀಗಿಸಿ:
“ಜಿಲ್ಲೆಯಲ್ಲಿ ರೆಮ್ ಡಿಸಿವಿರ್ ಲಸಿಕೆ ಹಾಗೂ ಆಕ್ಸಿಜನ್ ಕೊರತೆ ಇದೆ. ಇದಕ್ಕೆ ಸಂಬಂಧಪಟ್ಟಂತೆ ಈಗಾಗಲೇ ಸಾರ್ವಜನಿಕರಿಂದ ದೂರುಗಳು ಬರುತ್ತಿವೆ. ಹೀಗಾಗಿ, ಇವುಗಳ ಕೊರತೆಯಾಗದಂತೆ ಕ್ರಮಕೈಗೊಳ್ಳಿ” ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರು ಜಿಲ್ಲಾಡಳಿತವನ್ನು ಆಗ್ರಹಿಸಿದರು.

ಜಿಲ್ಲೆಯಲ್ಲಿ ಆಕ್ಸಿಜನ್ ಸಮಸ್ಯೆಯಿಂದ ಕೋವಿಡ್ ಸೋಂಕಿತರಿಗೆ ತೊಂದರೆಯಾಗುತ್ತಿದೆ. ಕೂಡಲೇ ಅದನ್ನು ಸರಿಪಡಿಸಬೇಕು. ಅಲ್ಲದೆ ರೆಮಡಿಸಿವರ್ ಲಸಿಕೆ‌ ಸಮರ್ಪಕವಾಗಿ ಪೂರೈಕೆಯಾಗುತ್ತಿಲ್ಲ ಅದನ್ನು ಸರಿಯಾಗಿ ನೀಡುವಂತೆ ಒತ್ತಾಯಿಸಿದರು.

ಬೆಳಗಾವಿಗೆ ತಾರತಮ್ಯ ಸಹಿಸಲ್ಲ: ಲಕ್ಷ್ಮಿ ಹೆಬ್ಬಾಳಕರ್
ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಮಾತನಾಡಿ, “ಜಿಲ್ಲೆಯಲ್ಲಿ ನಿತ್ಯ ಕೋವಿಡ್ ನಿಂದ ಮೃತಪಡುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿದೆ. ನಿತ್ಯ ಕೊರೊನಾ ಸೋಂಕಿತರ ಸಂಖ್ಯೆ ಸಾವಿರದ ಗಡಿಯತ್ತ ಸಾಗುತ್ತಿದೆ. ಸರಕಾರ ಕೊಡುವುದು ಒಂದು ಲೆಕ್ಕ, ನಮ್ಮ ಬಳಿ ಬರುವುದು ಒಂದು ಲೆಕ್ಕವಾಗಿದೆ” ಎಂದು ಆರೋಪಿಸಿದರು.

“ಬಿಮ್ಸ್ ನಲ್ಲಿ 350 ಆಕ್ಸಿಜನ್ ಬೆಡ್ ಲಭ್ಯವಿದೆ. 200 ಹೆಚ್ಚುವರಿ ಆಕ್ಸಿಜನ್ ಬೆಡ್ ನೀಡುವುದಾಗಿ ಸರ್ಕಾರ ಹೇಳಿತ್ತು. ಆದರೆ, ಹೆಚ್ಚುವರಿ ಬೆಡ್ ಗಳನ್ನು ನೀಡದೇ ಸರ್ಕಾರ ಬೆಳಗಾವಿಗೆ ತಾರತಮ್ಯ ಮಾಡುತ್ತಿದೆ. ಇಂತಹ ತಾರತಮ್ಯವನ್ನು ನಾವು ಸಹಿಸುವುದಿಲ್ಲ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಕೋವ್ಯಾಕ್ಸಿನ್ ಲಸಿಕೆ ಯಾವಾಗ ಕೊಡುತ್ತೀರಿ? ಎಷ್ಟು ತಾಲೂಕಿಗೆ ಎಷ್ಟು ಸಂಖ್ಯೆಯಲ್ಲಿ ಕೊಟ್ಟಿದ್ದೀರಿ? ಎಷ್ಟು ಬರುತ್ತಿದೆ ಎಂದು ಜಿಲ್ಲಾಡಳಿತ ಮಾಹಿತಿ ಕೊಡಬೇಕು. ಆನ್ ಲೈನ್ ನಲ್ಲಿ ರಿಜಿಸ್ಟರ್ ಮಾಡಲು ಗ್ರಾಮೀಣ ಭಾಗದ ಜನರಿಗೆ ಸಾಧ್ಯವಾಗುವುದಿಲ್ಲ. ಹೀಗಾಗಿ, ಇದಕ್ಕೆ ಬೇರೆ ವ್ಯವಸ್ಥೆ ಕಲ್ಪಿಸಬೇಕು. ಜಿಲ್ಲೆಯಲ್ಲಿ ವೈದ್ಯರ ಮೇಲೆ ಹಲ್ಲೆ ಪ್ರಕರಣಗಳು ವರದಿಯಾಗುತ್ತಿವೆ. ಹೀಗಾಗಿ, ಪೊಲೀಸ್ ಇಲಾಖೆಯಿಂದ ವೈದ್ಯರಿಗೆ ರಕ್ಷಣೆ ನೀಡಬೇಕು” ಎಂದು ಒತ್ತಾಯಿಸಿದರು.

ಬಿಮ್ಸ್ ನಲ್ಲಿ 800 ಬೆಡ್ ಗಳಿವೆ:
ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಮಾತನಾಡಿ, “ಬಿಮ್ಸ್ ನಲ್ಲಿ 800 ಬೆಡ್ ಗಳಿವೆ. ಸಮಸ್ಯೆಗೆ ಅನುಗುಣವಾಗಿ ನಾವು ವ್ಯವಸ್ಥೆ ಮಾಡುತ್ತೇವೆ. ತಾಲೂಕಾ ಆಸ್ಪತ್ರೆಯಲ್ಲಿ 30 ಬೆಡ್ ವ್ಯವಸ್ಥೆ ಮಾಡಲಾಗಿದೆ. ಸೋಂಕಿತರು ಬೆಳಗಾವಿ ಗೆ ಬರದಂತೆ ನೋಡಿಕೊಳ್ಳಬೇಕು. ಅವಶ್ಯಕತೆ ಇದ್ದರೇ ಮಾತ್ರ ಅವರು ಪತ್ರ ತೆಗೆದುಕೊಂಡು ಬಂದರೆ ಬಿಮ್ಸ್ ನಲ್ಲಿ ಚಿಕಿತ್ಸೆ ಕೊಡುವ ವ್ಯವಸ್ಥೆ ಇದೆ” ಎಂದು ತಿಳಿಸಿದರು.
“ಜಿಲ್ಲೆಗೆ ಅನುಗುಣವಾಗಿ ರೆಮಡಿಸಿವರ್ ಹಾಗೂ ಆಕ್ಸಿಜನ್ ವ್ಯವಸ್ಥೆಯನ್ನು ಸರ್ಕಾರ ಮಾಡುತ್ತಿದೆ. ಸಾರ್ವಜನಿಕರು ಭಯ ಪಡುವ ಅಗತ್ಯ ಇಲ್ಲ” ಎಂದು ಹೇಳಿದರು.

ಸಿಬ್ಬಂದಿ ಕೊರತೆ ಸರಿಪಡಿಸಿ:
ಶಾಸಕ ಮಹಾಂತೇಶ ಕೌಜಲಗಿ ಮಾತನಾಡಿ, “ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ಸಿಬ್ಬಂದಿಗಳ ಕೊರತೆ ಇದೆ. ಅದನ್ನು ಸರಿದೂಗಿಸಬೇಕು. 10 ರಿಂದ 15 ಜನ ಸಿಬ್ಬಂದಿಯನ್ನು ಗುತ್ತಿಗೆಯಾಧಾರದ ಮೇಲೆ ನಿಯುಕ್ತಿ ಮಾಡುವಂತೆ” ಸೂಚಿಸಿದರು.

ಶೀಘ್ರದಲ್ಲೇ ಗುತ್ತಿಗೆಯಾಧಾರದ ಮೇಲೆ ಸಿಬ್ಬಂದಿಗಳನ್ನು ನೇಮಕ ಮಾಡಲಾಗುವುದು. ಅಲ್ಲದೇ ಅವರಿಗೆ ಮುಕ್ತವಾಗಿ ಸೇವೆ ಮಾಡಲು ಅವಕಾಶ ಕಲ್ಪಿಸಲಾಗುವುದು” ಎಂದು‌ ಮಾಹಿತಿ ನೀಡಿದರು.

ಆಕ್ಸಿಜನ್ ಘಟಕ ಸ್ಥಾಪನೆಯಾದರೇ ಸಮಸ್ಯೆ ಇಲ್ಲ:
ಶಾಸಕಿ ಅಂಜಲಿ ನಿಂಬಾಳ್ಕರ್ ಮಾತನಾಡಿ, “ಜಿಲ್ಲೆಯಲ್ಲಿ ಜಿಲ್ಲಾಡಳಿತ ಆಕ್ಸಿಜನ್ ಘಟಕ ಸ್ಥಾಪನೆ ಮಾಡಿದರೆ ಸಮಸ್ಯೆ ಬಗೆಹರಿಯುತ್ತದೆ. ಸರ್ಕಾರದ ಬಳಿ ಆಕ್ಸಿಜನ್ ಕೇಳುವ ಅವಶ್ಯಕತೆಯೇ ಬರುವುದಿಲ್ಲ” ಎಂದು ಜಿಲ್ಲಾಡಳಿತಕ್ಕೆ ಸಲಹೆ ನೀಡಿದರು.
ಈ ಸಂದರ್ಭದಲ್ಲಿ ಎಐಸಿಸಿ ಗೋವಾ ವೀಕ್ಷಕ ಸುನೀಲ ಹನುಮಣ್ಣವರ್ ಸೇರಿ ಇನ್ನಿತರರು ಇದ್ದರು.

Check Also

52 ದಿನಗಳ ಬೀಗಕ್ಕೆ ಬ್ರೆಕ್,ಬೆಳಗಾವಿ ಇಂದಿನಿಂದ ಖುಲ್ಲಂ ಖುಲ್ಲಾ…!!!

ಬೆಳಗಾವಿ- ಬೆಳಗಾವಿ ಜಿಲ್ಲೆ ಕೊರೋನಾ ಮಹಾಮಾರಿಯ ಕಾಟಕ್ಕೆ ತತ್ತರಿಸಿತ್ತು,ಜಿಲ್ಲೆಯ ಜನ ಬರೊಬ್ಬರಿ 52 ದಿನಗಳ ಅನುಭವಿಸಿದ ಮನೆವಾಸದಿಂದ ಇಂದು ಮುಕ್ತಿ …

Leave a Reply

Your email address will not be published. Required fields are marked *