Breaking News

ಧಿಡೀರ್ ಗೋವಾಗೆ ತೆರಳಿದ ಸತೀಶ್ ಜಾರಕಿಹೊಳಿ

ಬೆಳಗಾವಿ: ಮಾರ್ಚ್ 10ರಂದು ಪಂಚ ರಾಜ್ಯಗಳ ಫಲಿತಾಂಶ ಪ್ರಕಟವಾಗಲಿದ್ದು, ಕಾಂಗ್ರೆಸ್ ಹೈ ಕಮಾಂಡ್ ಸೂಚನೆ ಮೇರೆಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್‌ ಜಾರಕಿಹೊಳಿ ಅವರು ಈಗಾಗಲೇ ಗೋವಾದಲ್ಲಿ ಠಿಕಾಣಿ ಹೂಡಿದ್ದಾರೆ.

ಚುನಾವಣೋತ್ತರ ಸಮೀಕ್ಷೆಗಳು ಗೋವಾದಲ್ಲಿ ಅತಂತ್ರ ವಿಧಾನಸಭೆ ಸೃಷ್ಟಿಯಾಗಲಿದೆ ಎಂದು ಭವಿಷ್ಯ ನುಡಿದ ಬೆನ್ನಲ್ಲೇ ಕಾಂಗ್ರೆಸ್ ಹೈ ಕಮಾಂಡ್ ಅಲರ್ಟ್‌ ಆಗಿದ್ದು, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಸೇರಿದಂತೆ ಗೋವಾ ಕಾಂಗ್ರೆಸ್ ಉಸ್ತುವಾರಿ ದಿನೇಶ್ ಗುಂಡೂರಾವ್ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಅವರಿಗೂ ಗೋವಾಗೆ ಹೋಗಲು ಸೂಚನೆ ನೀಡಿದೆ.

ಗೋವಾ ವಿಧಾನಸಭೆ ಚುನಾವಣೆಯ ಅಂತಿಮ ಫಲಿತಾಂಶ ಬರುವವರೆಗೆ ಅಲ್ಲೇ ಇರಬೇಕು. ಫಲಿತಾಂಶ ಅತಂತ್ರವಾಗಿ ಅದರ ಲಾಭ ಪಡೆಯುವ ಅವಕಾಶವಿದ್ದರೆ ಅದನ್ನು ಬಳಸಿಕೊಂಡು ಪಕ್ಷ ಅಧಿಕಾರಕ್ಕೆ ತರಲು ಬೇಕಾದ ಪ್ರಯತ್ನ ಮಾಡಬೇಕು ಎಂದು ಹೈ ಕಮಾಂಡ್ ತಿಳಿಸಿದೆ.

ಇನ್ನೂ ಗೋವಾ ಚುನಾವಣೆಯಲ್ಲಿ ಅನೇಕ ರಣತಂತ್ರ ರೂಪಿಸಿದ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್‌ ಜಾರಕಿಹೊಳಿ ಅವರು ಗೋವಾದಲ್ಲಿ ಕಾಂಗ್ರೆಸ್‌ ಅಭ್ಯರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಗೆಲುವು ಸಾಧಿಸಲು ಪ್ರಯತ್ನ ಪಟ್ಟಿದ್ದರು. ಇದರಿಂದ ಗೋವಾ ಕಾಂಗ್ರೆಸ್ ಉಸ್ತುವಾರಿ ದಿನೇಶ್ ಗುಂಡೂರಾವ್ ಅವರಿಗೆ ಆನೆ ಬಲ ಬಂದಂತೆ ಆಗಿತ್ತು.

ಇಂದು ಬೆಂಗಳೂರಿನಿಂದ ನೇರ ಗೋವಾಗೆ ತೆರಳಿದ ಸತೀಶ್‌ ಜಾರಕಿಹೊಳಿ ಅವರು 2017ರಲ್ಲಿ ಆದ ಘಟನೆ ಮರುಕಳಿಸದಂತೆ ಎಚ್ಚರ ವಹಿಸುತ್ತಿದ್ದಾರೆ.

Check Also

ನಿರಂತರ ಮಳೆ,ಬೆಳಗಾವಿ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆ

ನದಿ ತೀರದ ಜನರು ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಸಚಿವ ಸತೀಶ್‌ ಜಾರಕಿಹೊಳಿ ಮನವಿ ಬೆಳಗಾವಿ: ಭಾರತ ಹವಾಮಾನ ಇಲಾಖೆ ಆಗಸ್ಟ್ …

Leave a Reply

Your email address will not be published. Required fields are marked *