ಬೆಳಗಾವಿ-ವಾಯುವ್ಯ ಪದವೀಧರ, ಹಾಗೂ ಶಿಕ್ಷಕರ ಮತಕ್ಷೇತ್ರದ ಚುನಾವಣೆಯ ಸಿದ್ದತೆ ಕುರಿತು ಬೆಳಗಾವಿಯಲ್ಲಿ ಬಿಜೆಪಿ ಮಹತ್ವದ ಸಭೆ ನಡೆಸಿದ ಬೆನ್ನಲ್ಲಿಯೇ,ನಾಳೆ ಬೆಳಗಾವಿಯಲ್ಲಿ ಕಾಂಗ್ರೆಸ್ ಸಭೆ ನಡೆಯಲಿದೆ.
ನಾಳೆ ಸೋಮವಾರ ಬೆಳಿಗ್ಗೆ 11-00 ಗಂಟೆಗೆ ಬೆಳಗಾವಿಯ ಹೊಟೇಲ್ ಸಂಕಮ್ ನಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಅವರ ನೇತ್ರತ್ವದಲ್ಲಿ ಕಾಂಗ್ರೆಸ್ ಸಭೆ ನಡೆಯಲಿದ್ದು ಈ ಸಭೆಯಲ್ಲಿ ಬೆಳಗಾವಿ ಜಿಲ್ಲೆಯ ಹಾಲಿ,ಮಾಜಿ ಶಾಸಕರು,ಪಕ್ಷದ ಮುಖಂಡರು ಮತ್ತು ಪದಾಧಿಕಾರಿಗಳು ಭಾಗವಹಿಸಲಿದ್ದಾರೆ.
ವಾಯುವ್ಯ ಪದವೀಧರ ಮತಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ,ಸುನೀಲ ಸಂಕ,ಮತ್ತು ಶಿಕ್ಷಕರ ಮತಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ, ಹಿರಿಯ ಕಾಂಗ್ರೆಸ್ ಮುಖಂಡ,ವರ್ಕರ್ ಎಂದೇ ಪ್ರಸಿದ್ದಿ ಪಡೆದಿರುವ ಎಲ್ಲರ ಅಚ್ವುಮೆಚ್ಚಿನ ಮೀಸೆ ಮಾವ, ಪ್ರಕಾಶ್ ಹುಕ್ಕೇರಿ ಅವರು ಭಾಗವಹಿಸಲಿದ್ದು,ಈ ಸಭೆಯಲ್ಲಿ ನಾಮಪತ್ರ ಸಲ್ಲಿಸುವ ದಿನಾಂಕ ನಿಗದಿ ಆಗಲಿದೆ.
ಎರಡು ಕಾಂಗ್ರೆಸ್ ಅಭ್ಯರ್ಥಿಗಳ ಗೆಲುವಿಗೆ ಈ ಸಭೆಯಲ್ಲಿ ತಂತ್ರ ರೂಪಿಸುವ ಜೊತೆಗೆ ಚುನಾವಣೆಯ ಜವಾಬ್ದಾರಿಯನ್ನು ಸ್ಥಳೀಯ ಕಾಂಗ್ರೆಸ್ ನಾಯಕರಿಗೆ ಹಂಚಿಕೆ ಮಾಡಲಾಗುತ್ತದೆ ಎಂದು ತಿಳಿದು ಬಂದಿದೆ.
ಪಕ್ಷದ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸುವಾಗ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ಮತ್ತು ಸಿದ್ರಾಮಯ್ಯ ಅವರನ್ನು ಕರೆಯಿಸಿ ಆ ದಿನ ಕಾಂಗ್ರೆಸ್ ಶಕ್ತಿ ಪ್ರದರ್ಶನ ಮಾಡುವ ತೀರ್ಮಾಣ ಈ ಸಭೆಯಲ್ಲಿ ಕೈಗೊಳ್ಳುವ ನಿರ್ಧಾರ ನಾಳೆ ನಡೆಯುವ ಸಭೆಯಲ್ಲಿ ಕೈಗೊಳ್ಳಲಾಗುತ್ತದೆ ಎಂದು ಹೇಳಲಾಗಿದೆ.
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ