Breaking News

ಬೃಹತ್ ಬೆಳಗಾವಿ ನಿರ್ಮಾಣದತ್ತ ಸಾಹುಕಾರ್,ಚಿತ್ತ…!!!

ಬೆಳಗಾವಿ- ರಾಜಧಾನಿ ಬೆಂಗಳೂರು ಸುತ್ತ ಮುತ್ತಲಿನ ಹಳ್ಳಿಗಳನ್ನು ಬೆಂಗಳೂರು ಮಹಾನಗರ ಪಾಲಿಕೆಗೆ ಸೇರಿಸಿ ಬೃಹತ್ತ್ ಬೆಂಗಳೂರು ಮಾಡಿದಂತೆ ಈಗ ಬೆಳಗಾವಿ ನಗರದ ಸುತ್ತಮುತ್ತಲಿನ ಹಳ್ಳಿಗಳನ್ನು ಬೆಳಗಾವಿ ಮಹಾನಗರ ಪಾಲಿಕೆಗೆ ಸೇರಿಸಿ,ಬೃಹತ್ ಬೆಳಗಾವಿ ಮಾಡಲು ಬೆಳಗಾವಿ ಜಿಲ್ಲಾ ಉಸ್ತುವಾರಿ ಹಾಗೂ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು ಮಹತ್ವದ ಯೋಜನೆ ರೂಪಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಬೆಳಗಾವಿಯ ಮಡಿಲಲ್ಲಿ ಇರುವ ಹಿಂಡಲಗಾ,ಕಾಕತಿ,ಹಲಗಾ,ಬಸ್ತವಾಡ,ಕಂಗ್ರಾಳಿ, ಮೋದಗಾ,ಸಾಂಬ್ರಾ,ಮೋದಗಾ ಪೀರನವಾಡಿ ಮಚ್ಛೆ,ಧಾಮಣೆ ಸೇರಿದಂತೆ ಬೆಳಗಾವಿ ನಗರದ ಸುತ್ತಮುತ್ತಲಿನ ಒಟ್ಟು ಹತ್ತು ಗ್ರಾಮಗಳನ್ನು ಬೆಳಗಾವಿ ಮಹಾನಗರ ಪಾಲಿಕೆ ವ್ಯಾಪ್ತಿಗೆ ಸೇರಿಸಿ ಬೃಹತ್ ಬೆಳಗಾವಿ ಮಾಡುವುದು ಸಾಹುಕಾರ್ ಸತೀಶ್ ಜಾರಕಿಹೊಳಿ ಅವರ ಕನಸಿನ ಯೋಜನೆಯಾಗಿದೆ.

ಬೆಳಗಾವಿ ನಗರದ ಸುತ್ತಮುತ್ತಲಿನ ಹತ್ತು ಹಳ್ಳಿಗಳೂ ಬೆಳಗಾವಿ ನಗರಕ್ಕೆ ಹೊಂದಿಕೊಂಡಿದ್ದರೂ ಸಹ ಈ ಗ್ರಾಮಗಳು ನಗರಾಭಿವೃದ್ಧಿ ಇಲಾಖೆ ಸೇರಿದಂತೆ ಇನ್ನೀತರ ಸರ್ಕಾರಿ ಸೌಲಭ್ಯಗಳಿಂದ ವಂಚಿತವಾಗಿವೆ.ಈ ಹಳ್ಳಿಗಳಿಗೂ ನಗರಕ್ಕೆ ಸಿಗುವ ನಾಗರಿಕ ಸೌಲಭ್ಯಗಳು ಸಿಗಬೇಕು ಎನ್ನುವದು,ಸಚಿವ ಸತೀಶ್ ಜಾರಕಿಹೊಳಿ ಅವರ ಕಳಕಳಿಯಾಗಿದೆ.

ಜಿಲ್ಲಾ ಉಸ್ತುವಾರಿ ಸಚಿವರಾದ ಬಳಿಕ ಪ್ರಥಮವಾಗಿ ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ ಅಧಿಕಾರಿಗಳ ಸಭೆ ನಡೆಸಿ ಬೆಳಗಾವಿ ಸುತ್ತಮುತ್ತಲಿನ ಹತ್ತು ಹಳ್ಳಿಗಳನ್ನು ಬೆಳಗಾವಿ ಮಹಾನಗರ ಪಾಲಿಕೆಗೆ ಸೇರಿಸುವ ಯೋಜನೆ ರೂಪಿಸಬೇಕು.ಅದಕ್ಕಾಗಿ ಪ್ರಸ್ತಾವನೆ ರೆಡಿ ಮಾಡುವಂತೆ ಅಧಿಕಾರಿಗಳಿಗೆ ಸಾಹುಕಾರ್ ಸೂಚನೆ ನೀಡಿದ್ದಾರೆ.

ನಾಲ್ಕು ಕಚರಾ ಡಿಪೋ ಮಾಡುವಂತೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸೂಚನೆ..‌

ಬೆಳಗಾವಿ ಗ್ರಾಮೀಣ ಕ್ಷೇತ್ರದ ತುರಮರಿಯಲ್ಲಿ ಇಡೀ ಬೆಳಗಾವಿ ನಗರದ ಕಸ ಡಂಪ್ ಮಾಡುವುದು ನ್ಯಾಯ ಅಲ್ಲ.ಬೆಳಗಾವಿ ಮಹಾನಗರದ ತ್ಯಾಜ್ಯವನ್ನು ವಿಲೇವಾರಿ ಮಾಡಲು ನಗರದ ನಾಲ್ಕು ದಿಕ್ಕುಗಳಲ್ಲಿ ನಾಲ್ಕು ಸರ್ಕಾರಿ ಅಥವಾ ಖಾಸಗಿ ಜಾಗೆಗಳನ್ನು ಗುರುತಿಸಿ ಪ್ರಸ್ತಾವಣೆ ಸಲ್ಲಿಸುವಂತೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ,ವಿಕಚೇತನರ ಕಲ್ಯಾಣ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆಗಳ ಸಚಿವರಾಗಿರುವ ಲಕ್ಷ್ಮೀ ಹೆಬ್ಬಾಳಕರ್ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ.

ಮುಂದಿನ ಸಭೆ ನಡೆಯುವ ಮುನ್ನ ಈ ಪ್ರಸ್ತಾವನೆ ಸಲ್ಲಿಕೆಯಾಗಬೇಕು,ಮುಂದಿನ ಸಭೆಯ ಅಜೆಂಡಾ ದಲ್ಲಿ ಈ ವಿಷಯವೇ ಪ್ರಥಮವಾಗಿರುತ್ತದೆ,ಈ ವಿಚಾರದಲ್ಲಿ ಅಧಿಕಾರಿಗಳು ನಿರ್ಲಕ್ಷ್ಯ ಮಾಡಬಾರದು ಎಂದು ಲಕ್ಷ್ಮೀ ಹೆಬ್ಬಾಳಕರ್ ಖಡಕ್ ಎಚ್ಚರಿಕೆ ಕೊಟ್ಟಿರುವುದು ವಿಶೇಷವಾಗಿದೆ.

ಇಬ್ಬರು ಮಂತ್ರಿಗಳ ಸಮನ್ವಯತೆ,ಬೆಳಗಾವಿ ಅಭಿವೃದ್ಧಿಗೆ ಪೂರಕ…!!

ಅಪಾರ ಅನುಭವ,ಅಭಿವೃದ್ಧಿಯ ದೂರದೃಷ್ಟಿ, ಸಾನಾಜಿಕ ಕಳಕಳಿ ಹೊಂದಿರುವ ಸತೀಶ್ ಜಾರಕಿಹೊಳಿ ಅವರು ಜಿಲ್ಲಾ ಉಸ್ತುವಾರಿ ಸಚಿವರಾಗಿ ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ನಿರ್ಧಾರಗಳನ್ನು ಕೈಗೊಳ್ಳುತ್ತಿದ್ದಾರೆ.ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರನ್ನು ಸಹ ಪ್ರತಿಯೊಂದು ವಿಚಾರದಲ್ಲೂ ವಿಶ್ವಾಸಕ್ಕೆ ತೆಗೆದುಕೊಂಡು ಸತೀಶ್ ಜಾರಕಿಹೊಳಿ ಅವರು ಬೆಳಗಾವಿ ಜಿಲ್ಲಾ ವಿಭಜನೆ,ಬೃಹತ್‌ ಬೆಳಗಾವಿ ನಿರ್ಮಾಣ, ನಾಲ್ಕು ಕಚರಾ ಡಿಪೋಗಳ ನಿರ್ಮಾಣ ಸೇರಿದಂತೆ ಹತ್ತು ಹಲವು ಮಹತ್ವದ ನಿರ್ಧಾರಗಳನ್ನು ಮಾಡಿರುವ ಸಾಹುಕಾರ್ ಜಿಲ್ಲೆಯ ಎಲ್ಲ ಶಾಸಕರನ್ನು ವಿಶ್ವಾಸಕ್ಕೆ ಪಡೆಯುತ್ತಿರುವದು ಒಳ್ಳೆಯ ಬೆಳವಣಿಗೆ ಆಗಿದ್ದು ಸಾಹುಕಾರ್ ನಡೆ,ಅಭಿವೃದ್ಧಿಗೆ ಪೂರಕವಾಗಿದೆ.

ಸಾಹುಕಾರ್ ಮುಂದಿರುವ ಸವಾಲುಗಳು…..

ಬೆಳಗಾವಿಯಲ್ಲಿ ಸೂಪರ್ ಸ್ಪೇಶ್ಯಾಲಿಟಿ ಆಸ್ಪತ್ರೆಯ ಕಟ್ಟಡ ನಿರ್ಮಾಣವಾಗಿದೆ.ಈ ಆಸ್ಪತ್ರೆ ಶುರು ಮಾಡಲು ವೈದ್ಯಕೀಯ ಸಲಕರಣೆಗಳು,ಹಾಗೂ ವೈದ್ಯಕೀಯ ಸಿಬ್ಬಂಧಿಗಳ ನೇಮಕ ಮಾಡಲು ಸಚಿವರಾದ ಸತೀಶ್ ಜಾರಕಿಹೊಳಿ ಮತ್ತು ಲಕ್ಷ್ಮೀ ಹೆಬ್ಬಾಳಕರ್ ಅವರು ತಕ್ಷಣ ಕ್ರಮ ಕೈಗೊಳ್ಳಬೇಕಾಗಿದೆ.

ಬೆಳಗಾವಿ ಸಿಬಿಟಿ ಬಸ್ ನಿಲ್ಧಾಣದ ನಿರ್ಮಾಣದ ಕಾಮಗಾರಿ ಆಮೆಗತಿಯಲ್ಲಿ ಸಾಗುತ್ತಿದ್ದು ಗುತ್ತಿಗೆದಾರನ ವಿರುದ್ಧ ಕ್ರಮ ಕೈಗೊಂಡು ಕಾಮಗಾರಿಯ ವೇಗ ಹೆಚ್ಚಿಸಿ ಈ ನಿಲ್ಧಾಣವನ್ನು ಸೇವೆಗೆ ಸಮರ್ಪಿಸಬೇಕಾಗಿದೆ.

ಧಾರವಾಡ- ಕಿತ್ತೂರು- ಬೆಳಗಾವಿಯ ರೇಲ್ವೆ ಮಾರ್ಗದ ನಿರ್ಮಾಣದ ವಿಚಾರದಲ್ಲಿ ರಾಜ್ಯ ಸರ್ಕಾರದ ಜವಾಬ್ದಾರಿಗಳನ್ನು ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸುವಂತೆ ಸರ್ಕಾರದ ಮೇಲೆ ಒತ್ತಡ ಹೇರುವುದ ಅತ್ಯಂತ ಅಗತ್ಯವಾಗಿದೆ.

Check Also

ವೆಲ್ಡಿಂಗ್ ಕಾರ್ಮಿಕನ ಮಗ ಲಕ್ ಪತಿ ಆಗಿದ್ದು ಹೇಗೆ ಎಲ್ಲಿ ಗೊತ್ತಾ…??

ಬಾಗಲಕೋಟೆ-ಸಾಧನೆಗೆ ಬಡತನ ಎಂದಿಗೂ ಅಡ್ಡಿಯಾಗದು. ಸತತ ಪ್ರಯತ್ನ, ಪರಿಶ್ರಮವಿದ್ದರೆ ಬೌದ್ಧಿಕ ಮಟ್ಟ ವೃದ್ಧಿಸಿಕೊಂಡು, ಎಂಥವರು ಸಾಧನೆ ಮಾಡಬಹುದು. ಜ್ಞಾನಕ್ಕೆ ಬೆಲೆ …

Leave a Reply

Your email address will not be published. Required fields are marked *