ವಿದ್ಯುತ್ ವಿತರಣ ಕೇಂದ್ರ ಸ್ಥಾಪನೆಗೆ ಭೂಮಿಪೂಜೆ ಇಂದು ಬೆಳಗಾವಿಯಲ್ಲಿ
ಬೆಳಗಾವಿ, : ಮಚ್ಛೆ ವ್ಯಾಪ್ತಿಯಲ್ಲಿ ವಿದ್ಯುತ್ ವಿತರಣ ಕೇಂದ್ರ ಹಾಗೂ ಬಹು ವಿದ್ಯುತ್ ಪ್ರಸರಣ ಮಾರ್ಗ ನಿರ್ಮಾಣ ಕಾಮಗಾರಿಗೆ ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ್ ಜಾರಕಿಹೊಳಿ ಅವರು ಇಂದು ಸೋಮವಾರ(ಆ.7) ಸಂಜೆ 5 ಗಂಟೆಗೆ ಮಚ್ಛೆಯಲ್ಲಿರುವ ವಿದ್ಯುತ್ ಉಪ ಕೇಂದ್ರದ ಅವರಣದಲ್ಲಿ ಭೂಮಿಪೂಜೆ ನೆರವೇರಿಸಲಿದ್ದಾರೆ.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್, ಶಾಸಕ ಆಸೀಫ್(ರಾಜು) ಸೇಠ್, ವಿಧಾನಪರಿಷತ್ ಸದಸ್ಯ ಚನ್ನರಾಜ್ ಹಟ್ಟಿಹೊಳಿ ಅವರು ಅತಿಥಿಗಳಾಗಿ ಆಗಮಿಸಲಿದ್ದಾರೆ.
ಶಾಸಕ ಅಭಯ್ ಪಾಟೀಲ ಅವರು ಅಧ್ಯಕ್ಷತೆ ವಹಿಸಲಿದ್ದಾರೆ. ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಮತ್ತಿತರರು ಉಪಸ್ಥಿತರಿರುವರು ಎಂದು ಪ್ರಕಟಣೆ ತಿಳಿಸಿದೆ.
****
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ