Breaking News

ನನಗೆ ಯಾವುದೇ ರೀತಿಯ ಜೀವಬೆದರಿಕೆಗಳು ಬಂದಿಲ್ಲ- ಸತೀಶ್ ಜಾರಕಿಹೊಳಿ

ಬೆಳಗಾವಿ- ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲ್ಲೂಕಿನ ಬೈಲೂಲರು ನಿಷ್ಕಲ ಮಂಟಪದ ನಿಜಗುಣಾನಂದ ಶ್ರೀಗಳ ಮಠಕ್ಕೆ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ್ ಜಾರಕಿಹೊಳಿ ಅವರು ಭೇಟಿ ನೀಡಿದ್ರು.

ಈ ಸಂಧರ್ಭದಲ್ಲಿ ಮಾದ್ಯಮಗಳ ಜೊತೆ ಮಾತನಾಡಿದ ಅವರು ಮಠದಲ್ಲಿ ಇತ್ತೀಚಿಕೆ ಕಾರ್ಯಕ್ರಮ ನಡೆದಿತ್ತು ಆ ಕಾರ್ಯಕ್ರಮದಲ್ಲಿ ಭಾಗವಹಿಸಲು ಆಗಿರಲಿಲ್ಲ.ಅದಕ್ಕಾಗಿ ಅವರನ್ನು ಭೇಟಿಯಾಗಲು ಬಂದಿದ್ದೆ,ಶ್ರೀ ಗಳು ಬಸವತತ್ವಗಳನ್ನು ಮನೆ,ಮನೆಗೆ ತಲುಪಿಸುವ ಕಾರ್ಯವನ್ನು ಮಾಡುತ್ತಿದ್ದಾರೆ.ನಾವೂ ಬುದ್ದ,ಬಸವ,ಅಂಬೇಡ್ಕರ್ ಅವರ ತತ್ವಗಳನ್ನು ಮನೆ.ಮನೆಗೆ ತಲುಪಿಸುವ ಕಾರ್ಯವನ್ನು ಮಾಡುತ್ತಿದ್ದೇವೆ.ಅವರ ಹೋರಾಟ ಮತ್ತು ನಮ್ಮ ಹೋರಾಟ ಮೆಲಕು ಹಾಕುತ್ತದೆ.ಇಬ್ಬರ ವಿಚಾರ ಒಂದೇ ಆಗಿರುವದರಿಂದ ನಾನು ಆಗಾಗ್ಗೆ ಶ್ರೀಗಳನ್ನು‌ ಭೇಟಿ ಆಗ್ತಾ ಇರ್ತೇನಿ ಎಂದು ಸತೀಶ್ ಜಾರಕಿಹೊಳಿ ಹೇಳಿದರು.

ಸಮಾಜ ಪರಿವರ್ತನೆ,ಮತ್ತು ಪ್ರಗತಿಪರ ಚಿಂತಕಕರಿಗೆ ಜೀವ ಬೆದರಿಕೆಗಳು ಬರ್ತಾನೆ ಇವೆ.ಆದ್ರೆ ನನಗೆ ಯಾವುದೇ ಜೀವ ಬೆದರಿಕೆಗಳು ಬಂದಿಲ್ಲ.ಈ ರೀತಿಯ ಜೀವ ಬೆದರಿಕೆಗಳು ಬಂದಾಗ,ಸರ್ಕಾರ,ಕಾನೂನು,ಪೋಲೀಸ್ ಇಲಾಖೆ ಇದೆ.ಈ ಬಗ್ಗೆ ಅವರು ಕ್ರಮ ಕೈಗೊಳ್ಳುತ್ತಾರೆ.ಸ್ವಾಮೀಜಿಗಳಿಗೆ ಜೀವ ಬೆದರಿಕೆಯ ಪತ್ರ ಬಂದಿರುವ ವಿಚಾರವನ್ನು ಮುಖ್ಯಮಂತ್ರಿಗಳ ಗಮನಕ್ಕೆ ತರುತ್ತೇನೆ ಎಂದು ಸತೀಶ್ ಜಾರಕಿಹೊಳಿ ಹೇಳಿದ್ರು.

ಸಮಾಜದಲ್ಲಿ ಒಳ್ಳೆಯ ಕೆಲಸ ಮಾಡುವವರಿಗೆ ಈ ರೀತಿಯ ಪರಿಸ್ಥಿತಿ ಎದುರಾಗುತ್ತದೆ.ನಾವು ಜಾಗೃತರಾಗಬೇಕು,ಹೋರಾಟವನ್ನು ಮುಂದುವರೆಸಬೇಕು ಎಂದು ಸತೀಶ್ ಜಾರಕಿಹೊಳಿ ಹೇಳಿದರು.

Check Also

ವೀಕ್ಲಿ ಮ್ಯಾರೇಜ್,ಇದು ಲಕ್ಷ ಲಕ್ಷ ರೂಗಳ ಪ್ಯಾಕೇಜ್ ಹುಡುಗರ ಲೈಫ್ ಡ್ಯಾಮೇಜ್ …..!!!

ಬೆಳಗಾವಿ – ಹೆಣ್ಣು ಮಕ್ಕಳ ಮಾರಾಟ ಆಯ್ತು,ಹನಿ ಟ್ರ್ಯಾಪ್ ಗೋಳಾಟ ಆಯ್ತು ಈಗ ಹೊಸದೊಂದ ಆಟ ಶುರುವಾಗಿದೆ ಇದು ಮದ್ಯ …

Leave a Reply

Your email address will not be published. Required fields are marked *