ಬೆಳಗಾವಿ- ಇಂದು ಬೆಳಿಗ್ಗೆ ಕಾಂಗ್ರೆಸ್ ಅದ್ಯಕ್ಷ ಡಿಕೆ ಶಿವಕುಮಾರ್ ಅವರ ಮನೆಯ ಮೇಲೆ ನಡೆದಿರುವ ದಾಳಿ ಹೊಸದೇನಲ್ಲ ಇದು ಪೂರ್ವ ನಿಯೋಜಿತ,ನಮ್ಮನ್ನು ಡಿಸ್ಟರ್ಬ್ ಮಾಡಲು ದಾಳಿ ಮಾಡಿದ್ದಾರೆ ಎಂದು ಕೆಪಿಸಿಸಿ ಕಾರ್ಯಾದ್ಯಕ್ಷ ಸತೀಶ್ ಜಾರಕಿಹೊಳಿ ಆರೋಪಿಸಿದ್ದಾರೆ.
ಈ ಕುರಿತು ವಿಡಿಯೋ ಮೂಲಕ ಹೇಳಿಕೆ ಬಿಡುಗಡೆ ಮಾಡಿರುವ ಅವರು,ಕೇಂದ್ರ ಸರ್ಕಾರ ತನ್ನ ಅಂಗ ಸಂಸ್ಥೆಗಳನ್ನು ದುರುಪಯೋಗ ಮಾಡಿಕೊಳ್ಳುತ್ತಿದೆ,ಈ ಬಗ್ಗೆ ಸಾಕಷ್ಟು ಸಲ ನಾವು ಆರೋಪ ಮಾಡಿದ್ದೇವೆ,ಉಪ ಚುನಾವಣೆ ಸಂಧರ್ಭದಲ್ಲಿ ನಮಗೆ ತೊಂದರೆ ಕೊಡುವ ಉದ್ದೇಶದಿಂದಲೇ ದಾಳಿ ನಡೆದಿದೆ,ಪಕ್ಷ ದೊಡ್ಡದು,ಅವರನ್ನು ಹೆದರಿಸಲು ಸಾಧ್ಯವಿಲ್ಲ,ಎಂದು ಸತೀಶ್ ಜಾರಕಿಹೊಳಿ ಹೇಳಿದ್ದಾರೆ.
ಅದ್ಯಕ್ಷ ಡಿಕೆ ಶಿವಕುಮಾರ್ ಸಮರ್ಥರಾಗಿದ್ದಾರೆ,ಅವರು ಅದನ್ನು ಫೇಸ್ ಮಾಡುತ್ತಾರೆ,ಅವರ ಅದ್ಯಕ್ಷತೆಯಲ್ಲಿ ಪಕ್ಷ ಕಾರ್ಯನಿರ್ವಹಿಸುತ್ತದೆ ಎಂದು ಸತೀಶ್ ಜಾರಕಿಹೊಳಿ ಹೇಳಿದ್ದಾರೆ.
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ