ಬೆಳಗಾವಿ- ಸ್ಮಾರ್ಟ್ ಸಿಟಿ ಯೋಜನೆಯಲ್ಲಿ ಮಾಡಿರುವ ರಸ್ತೆ ಕಾಮಗಾರಿಗೆ ಬೆಳಗಾವಿ ಮಹಾನಗರ ಪಾಲಿಕೆಯಿಂದ 20 ಕೋಟಿ ರೂ ಪರಿಹಾರ ಕೊಡುವುದು ಸರಿಯಲ್ಲ ಇದಕ್ಕೆ ನನ್ನ ಸಮ್ಮತಿ ಇಲ್ಲ ಎಂದು ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.
ಇಂದು ಬೆಳಗಾವಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತಾಡಿದ ಅವರು ಪಾಲಿಕೆಯಲ್ಲಿ 20 ಕೋಟಿ ರೂ ಪರಿಹಾರ ನೀಡುವ ವಿಚಾರದಲ್ಲಿ ರಾಜಕೀಯ ಹಿತಾಸಕ್ತಿ ಇದೆ.ಪಾಲಿಕೆಯಲ್ಲಿ ಕೈಗೊಂಡ ನಿರ್ಣಯಕ್ಕೆ ನನ್ನ ಸಮ್ಮತಿ ಇಲ್ಲ ಎಂದರು
ಬೆಳಗಾವಿಯಲ್ಲಿ ಭೂಸ್ವಾಧೀನ ಮಾಡಿಕೊಳ್ಳದೇ ರಸ್ತೆ ಕಾಮಗಾರಿ ಮಾಡಲಾಗಿತ್ತು ಈ ಕಾಮಗಾರಿಯಲ್ಲಿ ಜಮೀನು ಕಳೆದುಕೊಂಡವರು ನ್ಯಾಯಾಲಯದ ಮೊರೆ ಹೋಗಿದ್ದರು.ಜಮೀನು ಮಾಲೀಕರಿಗೆ ಪರಿಹಾರ ನೀಡುವಂತೆ ನ್ಯಾಯಾಲಯ ಆದೇಶಿಸಿದೆ.ಪರಿಹಾರವನ್ನು ಸ್ಮಾರ್ಟ್ ಸಿಟಿ ಯೋಜನೆಯಿಂದ ಭರಿಸಬೇಕಾಗಿತ್ತು ಈ ವಿಚಾರದಲ್ಲಿ ರಾಜಕೀಯ ಮಾಡಿ ಬೆಳಗಾವಿ ಮಹಾನಗರ ಪಾಲಿಕೆಯ ಮೇಲೆ ಅಪರಾಧ ಹೊರಿಸಲಾಗಿದೆ ಎಂದು ಸತೀಶ್ ಜಾರಕಿಹೊಳಿ ಆರೋಪಿಸಿದರು.
ಬೆಳಗಾವಿ ಪಾಲಿಕೆಯ 20 ಕೋಟಿ ರೂ ದುಡ್ಡು ಉಳಿಸಿಕೊಳ್ಳಲು ಸಾಧ್ಯವೇ ಎನ್ನುವದನ್ನು ಚರ್ಚೆ ಮಾಡುತ್ತೇವೆ.ಬೆಳಗಾವಿ ಜಿಲ್ಲಾಧಿಕಾರಿಗಳು ಈ ಬಗ್ಗೆ ತನಿಖೆ ಮಾಡ್ತಾರೆ. ಈ ವಿಚಾರದಲ್ಲಿ ತಪ್ಪು ಮಾಡಿದ್ದು ಯಾರು ಅನ್ಬೋದನ್ನು ಪತ್ತೆ ಮಾಡಬೇಕಿದೆ. ಇದರ ತನಿಖೆಗಾಗಿ ಡಿಸಿ ನೇತ್ರತ್ವದಲ್ಲಿ ತಂಡ ರಚಿಸಲಾಗಿದೆ.ಎಂದು ಸತೀಶ್ ಜಾರಕಿಹೊಳಿ ಹೇಳಿದರು.
ಈ ರಸ್ತೆ ಕಾಮಗಾರಿ ನಡೆದಾಗ ಬೆಳಗಾವಿ ಜಿಲ್ಲಾಧಿಕಾರಿಗಳು ಅಡಳಿತಾಧಿಕಾರಿ ಇದ್ದರು,ಆದ್ರೆ ಈ ವಿಚಾರವನ್ನು ಆವಾಗ ಡಿಸಿ ಗಮನಕ್ಕೂ ತರಲಾಗಿಲ್ಲ. ಈ ಎಲ್ಲ ವಿಚಾರಗಳನ್ನು ತನಿಖೆ ಮಾಡುತ್ತೇವೆ ದೊಡ್ಡ ಮೊತ್ತದ ಪರಿಹಾರ ನೀಡುವ ಅನಿವಾರ್ಯತೆ ಎದುರಾಗಿದ್ದು ಹೇಗೆ ಎನ್ನುವದು ತನಿಖೆಯಿಂದ ಗೊತ್ತಾಗಬೇಕಿದೆ ಎಂದು ಸತೀಶ್ ಜಾರಕಿಹೊಳಿ ಹೇಳಿದ್ರು