ಕಾರವಾರ: ಶಾಸಕ ಸತೀಶ್ ಸೈಲ್ ನಿವಾಸದ ಮೇಲೆ ಬುಧವಾರ ಜಾರಿ ನಿರ್ದೇಶಾನಲಯದ ಅಧಿಕಾರಿಗಳು ದಾಳಿ ನಡೆಸಿದ್ದಾರೆ.ಕಾರವಾರದ, ಸದಾಶಿವಘಡದಲ್ಲಿರುವ ಅವರ ನಿವಾಸದ ಬುಧವಾರ ಮುಂಜಾನೆ ಏಕಾಏಕಿ ದಾಳಿ ನಡೆಸಲಾಗಿದೆ. ಪರಶೀಲನೆ ಕಾರ್ಯಾಚರಣೆ ಮುಂದುವರೆದಿದೆ.
ಶಾಸಕ ಸತೀಶ್ ಸೈಲ್ ಅವರ ನಿವಾಸದಲ್ಲಿ ದಾಖಲೆ ಮತ್ತು ಕಾಗದ ಪತ್ರಗಳ ಪರಿಶೀಲನೆ ನಡೆಸಲಾಗುತ್ತಿದೆ.
ಅಕ್ರಮ ಹಣ ವರ್ಗಾವಣೆ ಹಾಗೂ ತೆರಿಗೆ ವಂಚನೆ ಆರೋಪದಡಿಯಲ್ಲಿ ಜಾರಿ ನಿರ್ದೇಶಾನಲಯ ಈ ದಾಳಿ ನಡೆಸಿದೆಯೆನ್ನಲಾಗಿದೆ. ಇದುವರೆಗೂ ಜಾರಿ ನಿರ್ದೇಶಾನಲಯದ ಅಧಿಕಾರಿಗಳು ಯಾವುದೇ ಮಾಹಿತಿ ಬಿಡುಗಡೆ ಮಾಡಿಲ್ಲ. ಶಾಸಕರ ನಿವಾಸದೊಳಗೆ ಹೊರಗಿನಿಂದ ಪ್ರವೇಶ ನಿರ್ಬಂಧಿಸಲಾಗಿವದೆ. ಖಾಸಗಿ ವಾಹನಗಳಲ್ಲಿ ಯಾವುದೇ ಸುಳಿವು ನೀಡದೇ ಧಿಡೀರನೆ ಇ.ಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.