ಬೆಳಗಾವಿ- ರಾಜ್ಯದಲ್ಲಿ ಮಿಂಚಿನ ರಾಜಕೀಯ ಬೆಳವಣಿಗೆಗಳು ನಡೆದ ಬೆನ್ನಲ್ಲಿಯೇ ಮುಖ್ಯಮಂತ್ರಿ ಸಿದ್ರಾಮಯ್ಯ ಅಕ್ಟೋಬರ್ 13 ರಂದು ಬೆಳಗಾವಿಯ ಪ್ರಸಿದ್ಧ ಯಲ್ಲಮ್ಮನ ದೇವಸ್ಥಾನಕ್ಕೆ ಭೇಟಿ ನೀಡಿ ದೇವಿಯ ಕೃಪೆಗೆ ಪಾತ್ರರಾಗಲಿದ್ದಾರೆ.
ಸವದತ್ತಿ ಯಲ್ಲಮ್ಮ ಕ್ಷೇತ್ರದ ಶಾಸಕ ವಿಶ್ವಾಸ್ ವೈದ್ಯರವರ ನಿರಂತರ ಪ್ರಯತ್ನದ ಫಲವಾಗಿ ಸರ್ಕಾರ ಯಲ್ಲಮ್ಮ ದೇವಸ್ಥಾನ ಅಭಿವೃದ್ಧಿ ಪ್ರಾಧಿಕಾರ ರಚಿಸಿದ್ದು ಪ್ರಾಧಿಕಾರದ ವತಿಯಿಂದ ನಡೆಯುವ 21 ಕೋಟಿ ರೂ ವೆಚ್ಚದ ವಿವಿಧ ಕಾಮಗಾರಿಗಳಿಗೆ ಮುಖ್ಯಮಂತ್ರಿ ಸಿದ್ರಾಮಯ್ಯ ಶಂಕುಸ್ಥಾಪನೆ ನೆರವೇರಿದಲಿದ್ದಾರೆ.
ರಾಜ್ಯದಲ್ಲಿ ಸಿಎಂ ಬದಲಾಗುತ್ತಾರೆ ಎನ್ನುವ ಊಹಾಪೋಹಗಳಿಗೆ,ವದಂತಿಗಳಿಗೆ ಕೊರತೆ ಇಲ್ಲ ಸಿ ಎಂ ಬದಲಾವಣೆಯ ಬಿರುಗಾಳಿ ಬೀಸುತ್ತಿದೆ.15 ದು ಸಿಎಂ ಬದಲಾಗುತ್ತಾರೆ ಎನ್ನುವ ಸುದ್ಧಿಯನ್ನು ಬಿಜೆಪಿಯ ನಾಯಕರೇ ಪ್ರಚಾರ ಮಾಡುತ್ತಿದ್ದಾರೆ. ಸಿಎಂ ಬದಲಾದ್ರೆ ಸಿದ್ರಾಮಯ್ಯಮವರ ಪರಮಾಪ್ತ ಸತೀಶ್ ಜಾರಕಿಹೊಳಿ ಅವರೇ ಸಿಎಂ ಆಗ್ತಾರೆ ಎನ್ನುವ ಲೆಕ್ಕಾಚಾರವೂ ಇದೆ, ಇವೆಲ್ಲ ಬೆಳವಣಿಗೆಗಳ ನಡುವೆ 13 ರಂದು ಸಿದ್ರಾಮಯ್ಯ ಯಲ್ಲಮ್ಮನ ದೇವಸ್ಥಾನಕ್ಕೆ ಭೇಟಿ ನೀಡುತ್ತಿರುವದು ವಿಶೇಷವಾಗಿದೆ.
ಸವದತ್ತಿ ಶಾಸಕ ವಿಶ್ವಾಸ್ ವೈದ್ಯ ಅವರ ಸಂಕಲ್ಪ ಸಾಕಾರಗೊಂಡಿದೆ. 13 ರಂದು ಸವದತ್ತಿಯಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಿರುವ ಸಿಎಂ ಯಲ್ಲಮ್ಮನ ದೇವಸ್ಥಾನಕ್ಕೆ ಭೇಟಿ ನೀಡಿ ದೇವಿಯ ದರ್ಶನ ಪಡೆಯಲಿದ್ದಾರೆ.
ಅದೇ ದಿನ ಸವದತ್ತಿ ಯಲ್ಲಿ ಮುಖ್ಯಮಂತ್ರಿ ಸಿದ್ದಾಮಯ್ಯ ಯಲ್ಲಮ್ಮ ದೇವಸ್ಥಾನ ಅಭಿವೃದ್ಧಿ ಪ್ರಾಧಿಕಾರದ ಸಭೆಯನ್ನು ನಡೆಸಲಿದ್ದಾರೆ.
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ