Breaking News
Home / Breaking News / ಬೆಳಗಾವಿ ಜಿಲ್ಲೆಯ ಒಂಬತ್ತು ದೇವಸ್ಥಾನಗಳು ಬಂದ್….

ಬೆಳಗಾವಿ ಜಿಲ್ಲೆಯ ಒಂಬತ್ತು ದೇವಸ್ಥಾನಗಳು ಬಂದ್….

ಬೆಳಗಾವಿ- ಕೋವೀಡ್ ಸೊಂಕು ರಾಜ್ಯದಲ್ಲಿ ಅತೀ ವೇಗವಾಗಿ ಹರಡುತ್ತಿರುವ ಹಿನ್ನಲೆಯಲ್ಲಿ ರಾಜ್ಯ ಸರ್ಕಾರ ಟಫ್ ರೂಲ್ಸ್ ಗಳನ್ನು ಜಾರಿಗೆ ತಂದಿರುವ ಹಿನ್ನಲೆಯಲ್ಲಿ ಬೆಳಗಾವಿ ಜಿಲ್ಲೆಯ ಒಂಬತ್ತು ಪ್ರಮುಖ ದೇವಸ್ಥಾನಗಳು ಅನಿಗದಿತ ಅವಧಿಯವರೆಗೆ ಬಂದ್ ಆಗಿವೆ.

ಬೆಳಗಾವಿ ಜಿಲ್ಲೆಯ ಸವದತ್ತಿ ಯಲ್ಲಮ್ಮ,ಚಿಂಚಲಿ ಮಾಯಕ್ಕ ರಾಮದುರ್ಗದ ವೀರಭದ್ರೇಶ್ವರ, ಹೊಳೆಮ್ಮಾ,ದೇವಸ್ಥಾನ ಸೇರಿದಂತೆ ಒಟ್ಟು ಒಂಬತ್ತು ದೇವಸ್ಥಾನಗಳಲ್ಲಿ ಸಾರ್ವಜನಿಕರ ದರ್ಶನ ನಿಷೇಧಿಸಿ ಬೆಳಗಾವಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.

ಸವದತ್ತಿ ಯಲ್ಲಮ್ಮನ ದೇವಸ್ಥಾನ ಕ್ಕೆ ಸಂಕ್ರಾಂತಿ ಹಬ್ಬದ ಸಮಯದಲ್ಲಿ ಲಕ್ಷಾಂತರ ಭಕ್ತರು ಸಮಾವೇಶಗೊಳ್ಳುತ್ತಿದ್ದರು.ಈ ಜಾತ್ರೆಗೆ ಮಹಾರಾಷ್ಟ್ರ ರಾಜ್ಯದಿಂದಲೂ ಸಾವಿರಾರು ಜನರು ಬರುವ. ಹಿನ್ನಲೆಯಲ್ಲಿ ದೇವಸ್ಥಾನದ ಆವರಣದಲ್ಲಿ ಜಾತ್ರೆ ನಡೆಸುವದಕ್ಕೂ ನಿರ್ಬಂಧ ಹೇರಲಾಗಿದ್ದು ಬೆಳಗಾವಿ ಜಿಲ್ಲೆಯ ಒಂಬತ್ತು ದೇವಸ್ಥಾನಗಳು ಮುಂದಿನ ಆದೇಶದವರೆಗೆ ಬಂದ್ ಆಗಲಿವೆ..

Check Also

ಬೆಳಗಾವಿಯ, ಗೋದಾಮಿನಲ್ಲಿದ್ದ 900 ಚೀಲ ಗೊಬ್ಬರ ಸ್ವಾಹಾ…!!

ಬೆಳಗಾವಿ-ಗೋದಾಮಿನಲ್ಲಿದ್ದ 50 ಕೆಜಿ ತೂಕದ 900 ಚೀಲ ರಸಗೊಬ್ಬರ ಕಳ್ಳತನ ಮಾಡಿದ ಘಟನೆ,ಬೆಳಗಾವಿ ತಾಲೂಕಿನ ದೇಸೂರು ರೇಲ್ವೆ ನಿಲ್ದಾಣ ಬಳಿ …

Leave a Reply

Your email address will not be published. Required fields are marked *