Breaking News

ವಿಟಿಯು ವಿಭಜನೆ ವಿರುದ್ಧ ಬೆಳಗಾವಿಗರ ಶಕ್ತಿ ಪ್ರದರ್ಶನ- ಯುವಕರಿಂದ ಆಂದೋಲನ

ಬೆಳಗಾವಿ: ವಿಶ್ವೇಶ್ವರಯ್ಯತಾಂತ್ರಿಕ ವಿಶ್ವವಿದ್ಯಾಲಯ ವಿಭಜನೆ ವಿರೋಧಿಸಿ ಮಠಾಧೀಶರ ನೇತೃತ್ವದಲ್ಲಿ ವಿವಿಧ ಸಂಘಟನೆಗಳ ಕಾರ್ಯಕರ್ತರಿಂದ ಶನಿವಾರ ಬೆಳಗಾವಿಯಲ್ಲಿ ಬೃಹತ್ ಪ್ರತಿಭಟನಾ ರ‌್ಯಾಲಿ ನಡೆಸಿ, ಶಕ್ತಿ ಪ್ರದರ್ಶನ ನಡೆಸಿದರು.

ನಗರದ ಬೋಗಾರವೇಸ್‌ದಲ್ಲಿ ಜಮಾಯಿಸಿದ ಪ್ರತಿಭಟನಾಕಾರರು ಅಲ್ಲಿಂದ, ಕಾಲೇಜು ರಸ್ತೆ, ಚನ್ನಮ್ಮ ವೃತ್ತದ ಮೂಲಕ ಹಾಯ್ದು ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿ, ವಿಟಿಯುವ ವಿಭಜನೆ ಮಾಡದಂತೆ ಆಗ್ರಹಿಸಿ ಜಿಲ್ಲಾಧಿಕಾರಿ ಎಸ್.ಬಿ.ಬೊಮ್ಮನಹಳ್ಳಿ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.
ಯಾವುದೇ ಕಾರಣಕ್ಕೂ ವಿಟಿಯು ವಿಭಜನೆ ಮಾಡಬಾರದು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.
ಪ್ರತಿಭಟನೆಯನೇತೃತ್ವ ವಹಿಸಿಕೊಂಡಿದ್ದ ಹುಕ್ಕೇರಿ ಹಿರೇಮಠದ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಮಾತನಾಡಿ, ಸರ್ಕಾರ ಪದೇ ಪದೆ ಉತ್ತರ ಕರ್ನಾಟಕ್ಕೆ ಅನ್ಯಾಯಮಾಡುತ್ತಿದೆ. ಇದನ್ನು ನಾವು ಸಹಿಸುವುದಿಲ್ಲ. ಯಾವುದೇ ಕಾರಣಕ್ಕೂ ವಿಟಿಯು ವಿಭಜನೆ ಮಾಡಬಾರದು. ನಾವು ಸುಮ್ಮನಿದ್ದರೆ ನಮ್ಮನ್ನು ಉಳಿಯಲು ಬಿಡುವುದಿಲ್ಲ. ಉತ್ತರ ಕರ್ನಾಟಕಕ್ಕೆ ಅನ್ಯಾಯ ಆಗಾದ ಕಾಂಗ್ರೆಸ, ಬಿಜೆಪಿ, ಜೆಡಿಎಸ್ ಶಾಸಕರೆಲ್ಲರೂ ಪಕ್ಷ ಭೇದ ಮರೆದು ಒಗ್ಗಟ್ಟಾಗಿ ಹೋರಾಟ ಮಾಡಬೇಕು ಎಂದು ಕರೆ ನೀಡಿದರು.
ರಾಜ್ಯಸಭಾ ಸದಸ್ಯ ಪ್ರಭಾಕರ ಕೋರೆ ಮಾತನಾಡಿ, ಉತ್ತರ ಕರ್ನಾಟಕದಲ್ಲಿ ನೀರಾವರಿಗೆ ಹೋರಾಡಬೇಕು. ವಿಶ್ವವಿದ್ಯಾಲಯಕ್ಕೆ ಹೋರಾಡಬೇಕು. ಈಗ ಇದ್ದ ಯೋಜನೆಗಳನ್ನು ಉಳಿಸಿಕೊಳ್ಳುವುದಕ್ಕೂ ಹೋರಾಡಬೇಕಾದ ಪರಿಸ್ಥಿತಿ ಇದೆ. ಇದೆಂಥ ನ್ಯಾಯ ಎಂದು ಪ್ರಶ್ನಿಸಿದ ಅವರು ವಿವಿ ಕುಲಪತಿ ಕೂಡ ಹಾಸನ ಕಡೆಯವರೇ ಇದ್ದಾರೆ. ಅನೇಕ ಯೋಜನೆಗಳಲ್ಲಿ ಬೆಳಗಾವಿಗೆ ಅನ್ಯಾಯ ಆಗಿದೆ. ಈಗ ಆಗಿರುವ ಸಮಸ್ಯೆ ಸರಿ ಮಾಡಬೇಕು. ಅಲ್ಲಿವರೆಗೆ ಹೋರಾಟ ನಿಲ್ಲುವುದಿಲ್ಲ ಎಂದು ಎಚ್ಚರಿಕೆ ನೀಡಿದರು.
ಶಾಸಕಿ ಲಕ್ಷ್ಮಿ ಹೆಬ್ಬಾಳಕರ  ಅವರು ಮಾತನಾಡಿ, ವಿಟಿಯು ವಿಭಜನೆ ದುರದೃಷ್ಟಕರ. ಉತ್ತರ ಕರ್ನಾಟಕದ ಜನಪ್ರತಿನಿಧಿಗಳು ಪಕ್ಷಾತೀತವಾಗಿ ಶಾಸಕರು ಸೇರಿ ಸಿಎಂಗೆ ಮನವಿ ಮಾಡಿದ್ದೇವೆ. ಈ ಹೋರಾಟಕ್ಕೆ ನನ್ನ ಬೆಂಬಲ ಇದೆ. ಇದರಲ್ಲಿ ರಾಜಕಾರಣ ಬೇಡ. ಇದು ಒಡೆಯಲು ಬಿಡುವುದಿಲ್ಲ. ನಾವೆಲ್ಲ ಒಗ್ಗಟ್ಟಾಗಿದ್ದೇವೆ. ನಮ್ಮ ಆಸ್ತಿ ಬಿಡಲ್ಲ. ಸದನದಲ್ಲಿ ಮುಖ್ಯಮಂತ್ರಿಗಳಿಂದ ಈ ಕುರಿತು ಸ್ಪಷ್ಟನೆ ಪಡೆದೇ ಪಡೆಯುತ್ತೇನೆ ಎಂದು ಭರವಸೆ ನೀಡಿದರು.
ನಾವು ಯಾವುದೇ ಕಾರಣಕ್ಕೂ ವಿಟಿಯು ವಿಭಜನೆ ಮಾಡಲು ಅವಕಾಶ ನೀಡುವುದಿಲ್ಲ. ಆದಾಗ್ಯೂ ಸರ್ಕಾರ ವಿಟಿಯು ವಿಭಜನೆ ಮಾಡಲು ಮುಂದಾದರೆ ಉತ್ತರ ಕರ್ನಾಟಕದ ಎಲ್ಲ ಶಾಸಕರು ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡುವ ಮೂಲಕ ಒಗ್ಗಟ್ಟು ಪ್ರದರ್ಶಿಸಬೇಕು ಎಂದು ಶಾಸಕ ಅನಿಲ ಬೆನಕೆ ಹೇಳಿದರು.
ಶಾಸಕ ಅಭಯ ಪಾಟೀಲ್ ಮಾತನಾಡಿ, ವಿಟಿಯು ಒಡೆದು ಬೆಳಗಾವಿ ಶಕ್ತಿ ಕುಗ್ಗಿಸಿವ ತಂತ್ರ ನಡೆಯುತ್ತಿದೆ. ವಿಭಜನೆ ಮಾಡದಂತೆ ಶಾಸಕರ ಸಹಿ ಹಾಕಿ ಸಿಎಂಗೆ ಪತ್ರ ಕೊಟ್ಟಿದ್ದೇವೆ. ಅಸಕ್ಕೆ ಸಿಎಂ ಸ್ಪಂದಿಸಿದ್ದರ ಹಾಸನದಲ್ಲಿ ಬೇರೊಂದು ರೀತಿಯಲ್ಲಿ ವಿಟಿಯು ಒಡೆಯುವ ಕೆಲಸ ನಡೆಯುತ್ತಿದೆ ಎಂದು ಆರೋಪಿಸಿದರು.
ಸಂಸದ ಸುರೇಶ ಅಂಗಡಿ, ಮೇಯರ್ ಬಸಪ್ಪ ಚಿಕ್ಕಲದಿನ್ನಿ, ಎಂ.ಬಿ.ಜಿರಲಿ, ಮಾಜಿ ಶಾಸಕ ವಿಶ್ವನಾಥ ಪಾಟೀಲ, ರಾಜೀವ ಟೋಪಣ್ಣವರ, ಕರ್ನಾಟಕ ರಕ್ಷಣಾ ವೇದಿಕೆಯ ದೀಪಕ ಗುಡಗನಟ್ಟಿ ಸೇರಿದಂತೆ ವಿವಿಧ ಸಂಘಟನೆಗಳ ಕಾರ್ಯಕರ್ತರು,ಉದ್ಯಮಿಗಳು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್

Check Also

ವೆಲ್ಡಿಂಗ್ ಕಾರ್ಮಿಕನ ಮಗ ಲಕ್ ಪತಿ ಆಗಿದ್ದು ಹೇಗೆ ಎಲ್ಲಿ ಗೊತ್ತಾ…??

ಬಾಗಲಕೋಟೆ-ಸಾಧನೆಗೆ ಬಡತನ ಎಂದಿಗೂ ಅಡ್ಡಿಯಾಗದು. ಸತತ ಪ್ರಯತ್ನ, ಪರಿಶ್ರಮವಿದ್ದರೆ ಬೌದ್ಧಿಕ ಮಟ್ಟ ವೃದ್ಧಿಸಿಕೊಂಡು, ಎಂಥವರು ಸಾಧನೆ ಮಾಡಬಹುದು. ಜ್ಞಾನಕ್ಕೆ ಬೆಲೆ …

Leave a Reply

Your email address will not be published. Required fields are marked *