ಬೆಳಗಾವಿ:
ಸಮಾಜಮುಖಿಯಾಗಿ ಹಲವಾರು ಕ್ರಾಂತಿಕಾರಿ ಕಾರ್ಯಕ್ರಮಗಳನ್ನು ಮಾಡಿ ಸಮಾಜದಲ್ಲಿರುವ ಅಂಧಶೃದ್ಧೆಯನ್ನು ಹೋಗಲಾಡಿಸಲು ಶ್ರಮಿಸಿದ ಶಾಹು ಮಹಾರಾಜರ ತತ್ವಾದರ್ಶಗಳನ್ನು ಅನುಸರಿಸುವಂತೆ ಮಾಜಿ ಸಚಿವ ಸತೀಶ್ ಜಾರಕಿಹೊಳಿ ಕರೆ ನೀಡಿದ್ದಾರೆ.
ನಗರದಲ್ಲಿ ಬಸವ ಪಂಚಮಿ ಕಾರ್ಯಕ್ರಮವನ್ನು ಉಧ್ಘಾಟಿಸಿ ಮಾತನಾಡಿದ ಅವರು, ಬೆಳಗಾವಿ ನಗರದ ವೃತ್ತ ಒಂದಕ್ಕೆ ಶೀಘ್ರದಲ್ಲಿಯೇ ಶಾಹು ಮಹಾರಾಜರ ಹೆಸರನ್ನು ನಾಮಕರಣ ಮಾಡಲಾಗುವುದು. ಜೊತೆಗೆ ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ ಶಾಹು ಮಹಾರಾಜರ ಭಾವಚಿತ್ರವನ್ನು ಹಾಕುವಂತೆ ಕ್ರಮ ಕೈಗೊಳ್ಳುವುದರ ಜೊತೆಗೆ ನಗರದಲ್ಲಿ ಶಾಹು ಮಹಾರಾಜರ ಬೃಹತ್ ಪ್ರತಿಮೆಯನ್ನು ಅನಾವರಣಗೊಳಿಸಲು ನಿರ್ಧರಿಸಲಾಗಿದೆ ಎಂದು ಹೇಳಿದರು.
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ