ಬೆಳಗಾವಿ- ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಶಾಲಿನಿ ರಜನೀಶ ಭಾನುವಾರ ಜಿಲ್ಲಾ ಆಸ್ಪತ್ರೆಗೆ ಧಿಡೀರ ಭೇಟಿ ನೀಡಿ ಆಸ್ಪತ್ರೆಯ ಪರಿಸ್ಥಿತಿಯನ್ನು ಪರಶೀಲಿಸಿದರು
ಆಸ್ಪತ್ರೆಯ ಹೆರಿಗೆ ವಾರ್ಡಿಗೆ ಭೇಟಿ ನೀಡಿದ ಅವರು ಬಾನಂತಿಯರ ಆರೋಗ್ಯ ವಿಚಾರಿಸಿದರು ಬಿಸಿ ನೀರು.ಸೇರಿದಂತೆ ಇತರ ಆರೋಗ್ಯ ಸೇವೆಗಳು ನಿಗದಿತ ಸಮಯದಲ್ಲಿ ಸಿಗುತ್ತಿರುವ ಬಗ್ಗೆ ಮಾಹಿತಿ ಪಡೆದುಕೊಂಡರು
ಆಸ್ಪತ್ರೆಯಲ್ಲುರುವ ಗಲೀಜು ನೋಡಿದ ಶ್ಯಾಲಿನಿ ರಜನೀಶ್ ಅಸಮಾಧಾನ ವ್ಯಕ್ತಪಡಿಸಿದರು ಜೊತೆಯಲ್ಲಿದ್ದ ಜಿಲ್ಲಾ ಆರೋಗ್ಯಾಧಿಕಾರಿ ನರಹಟ್ಟಿ ಹಾಗು ಕಳಸದ ಅವರಿಗೆ ಆಸ್ಪತ್ರೆಯಲ್ಲಿ ಸ್ವಚ್ಛತೆ ಕಾಪಾಡುವಂತೆ ಸೂಚನೆ ನೀಡಿದರು
ನಾನು ಬೆಳಗಾವಿಯ ಜಿಲ್ಲಾಧಿಕಾರಿಯಾಗಿದ್ದಾಗ ಜಿಲ್ಲಾ ಆಸ್ಪತ್ರೆಯ ಯಾವ ಪರಿಸ್ಥಿತಿ ಇತ್ತೋ ಅದೇ ಪರಿಸ್ಥಿತಿ ಇದೆ ಆಸ್ಪತ್ರೆಗೆ ಬೇರೆ ಬೇರೆ ಮೂಲಗಳಿಂದ ಸಾಕಷ್ಟು ಅನುದಾನ ಬರುತ್ತಿದೆ ಅದನ್ನು ಸದ್ಭಳಕೆ ಮಾಡಿಕೊಂಡು ಆಸ್ಪತ್ರೆಯನ್ನು ಸುಧಾರಿಸುವ ಪ್ರಯತ್ನವನ್ನು ಮಾಡಿಲ್ಲ ಎಂದು ಶ್ಯಾಲಿನಿ ರಜನೀಶ್ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು
ಆರೋಗ್ಯಾಧಿಕಾರಿಗಳು ಗರ್ಭಿನಿಯರಿಗೆ ನಿಯಮಿತವಾಗಿ ಪೌಷ್ಠಿಕ ಆಹಾರ ಪೂರೈಸಲು ಕಾಳಜಿ ವಹಿಸಬೇಕು ಜಿಲ್ಲಾ ಆರೋಗ್ಯ ಅಧಿಕಾರಿಗಳು ಈ ವಿಷಯದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಗಳಿಗೆ ಕಾಲ ಕಾಲಕ್ಕೆ ಮಾರ್ಗದರ್ಶನ ಮಾಡಬೇಕು ಎಂದು ಸೂಚಿಸಿದರು
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ