ಬೆಳಗಾವಿ: ಅಪ್ಪಟ ದೇಶ ಭಕ್ತ, ಕನ್ನಡಿಗ ಟಿಪ್ಪು ಸುಲ್ತಾನ್ ಜಯಂತಿಗೆ ಅಪಸ್ವರ ಎತ್ತಿ ರಾಜ್ಯದಲ್ಲಿ ಕೋಮು ಭಾವನೆ ಕೆರಳಿಸುತ್ತಿರುವ ಕೇಂದ್ರ ಸಚಿವ ಅನಂತಕುಮಾರ ಹೆಗಡೆ ಸೇರಿದಂತೆ ಬಿಜೆಪಿ ನಾಯಕರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಬೇಕು ಎಂದು ಕೆಪಿಸಿಸಿ ಮಾಜಿ ಸದಸ್ಯ ಶಂಕರ ಮುನವಳ್ಳಿ ರಾಜ್ಯ ಸರ್ಕಾರವನ್ನು ಆಗ್ರಹಿಸಿದ್ದಾರೆ.
ನಗರದಲ್ಲಿ ಗುರುವಾರ ಸುದ್ದಿ ಗೋಷ್ಠಿ ಮಾತನಾಡಿದ ಅವರು, ಚುನಾಯಿತ ಜನಪ್ರತಿನಿಧಿಗಳು ಸಂವಿಧಾನಕ್ಕೆ ಬದ್ಧ ರಾಗಿ ದೇಶದ ಅಖಂಡತೆಗೆ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಆದರೆ ಕೇಂದ್ರ ಸಚಿವ ಅನಂತಕುಮಾರ ಹೆಗಡೆ, ಸಂಸದೆ ಶೋಭಾ ಕರಂದ್ಲಾಜೆ ಸೇರಿದಂತೆ ಬಿಜೆಪಿ ನಾಯಕರು ಟಿಪ್ಪು ಸುಲ್ತಾನ್ ಜಯಂತಿ ವಿಚಾರದಲ್ಲಿ ಒಂದು ಸಮುದಾಯದ ಕೋಮು ಭಾವನೆ ಕೆರಳಿಸುತ್ತಿದ್ದಾರೆ.
ಸಂವಿಧಾನದ ಆಶಯಕ್ಕೆ ಧಕ್ಕೆ ಉಂಟು ಮಾಡಿದ ಜನಪ್ರತಿನಿಧಿಗಳ ಸದಸ್ಯತ್ವ ರದ್ದು ಪಡಿಸಬೇಕು ಎಂದು ಆರೋಪಿಸಿದರು.
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ