ಬೆಳಗಾವಿ: ಪರಿಶಿಷ್ಟ ಜಾತಿಯ 92 ಉಪಜಾತಿಗಳಿಗೆ ರಾಜಕೀಯ ಅವಕಾಶ ನೀಡದೇ ಅನ್ಯಾಯ ಮಾಡಿದ ಕಾಂಗ್ರೆಸ್ ವಿರುದ್ಧ ಕೆಪಿಸಿಸಿ ಮಾಜಿ ಸದಸ್ಯ ಶಂಕರ ಮುನವಳ್ಳಿ ದನಿ ಎತ್ತಿದ್ದಾರೆ. ಪರಿಶಿಷ್ಟ ಜಾತಿಗಳ 92 ಉಪಜಾತಿಗಳು ಸಾಮಾಜಿಕ ನ್ಯಾಯದಿಂದ ವಂಚಿತಗೊಂಡ ಸಮುದಾಯದ ವೇದಿಕೆ ವತಿಯಿಂದ ಶಂಕರ ಮುನವಳ್ಳಿ ಅವರು ರಾಜ್ಯ ಮಟ್ಟದ ಪತ್ರಿಕೆಗಳಲ್ಲಿ ಜಾಹೀರಾತು ಪ್ರಕಟಿಸಿರುವುದು ಕಾಂಗ್ರೆಸ್ ಗೆ ಮುಳ್ಳಾಗಿ ಪರಿಣಮಿಸಿದೆ. ಅಲ್ಲದೆ ಕಾಂಗ್ರೆಸ್ ನಾಯಕರ ನಿದ್ದೆ ಗೆಡೆಸಿದೆ. ಪರಿಶಿಷ್ಟ ಜಾತಿಯಲ್ಲಿ ಕೆಲ ನಾಯಕರು ತಮ್ಮ ಸ್ವಾರ್ಥಕ್ಕಾಗಿ ಇಡೀ ಪರಿಶಿಷ್ಟ ಜಾತಿಯ ಉಪಜಾತಿಗಳಿಗೆ ಅನ್ಯಾಯ ಮಾಡಿದ್ದಾರೆ. ಎಡ ಮತ್ತು ಬಲ ಜಾತಿ ಹುಟ್ಟು ಹಾಕಿದ್ದಾರೆ. ಪರಿಶಿಷ್ಟ ಜಾತಿಯಲ್ಲಿ ಒಟ್ಟು 101 ಉಪಜಾತಿಗಳಿವೆ. ಆದರೆ, ಅದರಲ್ಲಿ ಕೇವಲ 7 ಪ್ರಬಲ ಉಪಜಾತಿಗಳ ನಾಯಕರು ರಾಜಕೀಯ ಲಾಭ ಪಡೆದಿದ್ದಾರೆ. ಉಳಿದ ಎಲ್ಲ ಉಪ ಜಾತಿಗಳು ರಾಜಕೀಯ ಅವಕಾಶ ದೊರೆಯದೇ ಅನ್ಯಾಯಕ್ಕೆ ಒಳಗಾಗಿವೆ ಎಂದು ಎನ್ನುವ ಮಾಹಿತಿಯನ್ನು ಜಾಹಿರಾತಿನಲ್ಲಿ ಎಳೆ ಎಳೆಯಾಗಿ ಹೇಳುವ ಮೂಲಕ ಕಾಂಗ್ರೆಸ್ ವಿರುದ್ಧ ಹರಿಹಾಯ್ದಿದ್ದಾರೆ. ಪತ್ರಿಕೆಗಳಲ್ಲಿ ಪ್ರಕಟವಾದ ಜಾಹೀರಾತು ಕಾಂಗ್ರೆಸ್ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ
Check Also
ಜ್ಞಾನೇಶ್ವರ ಮುನಿ ಮಹಾರಾಜರು (86) ವಿಧಿವಶ
ಬೆಳಗಾವಿ -ಯಮ ಸಲ್ಲೇಖನ ವೃತ್ತದ ಮೂಲಕ ಜ್ಞಾನೇಶ್ವರ ಮುನಿ ಮಹಾರಾಜರು (86) ಇಹಲೋಕವನ್ನು ತ್ಯೇಜಿಸಿದ್ದಾರೆ. ಬೈಲಹೊಂಗಲ ತಾಲೂಕಿನ ದೇವಲಾಪುರ ಕ್ಷೇತ್ರದಲ್ಲಿ …