ಜಾರಕಿಹಳಿ ಬ್ರದರ್ಸ ಗೆ ಮಂತ್ರಿ ಸ್ಥಾನ ಕೊಡಬೇಡಿ- ಶಂಕರ ಮುನವಳ್ಳಿ

ಬೆಳಗಾವಿ – ರಾಜ್ಯದಲ್ಲಿ ಅಸ್ತಿತ್ವಕ್ಕೆ ಬರಲಿರುವ ಸಮ್ಮಿಶ್ರ ಸರ್ಕಾರದಲ್ಲಿ ಬೆಳಗಾವಿಯ ಜಾರಕಿಹೊಳಿ ಬ್ರದರ್ಸ ಗೆ ಮಂತ್ರಿಸ್ಥಾನ ಕೊಡಬಾರದು ಲಕ್ಷ್ಮೀ ಹೆಬ್ಬಾಳಕರ ಅವರಿಗೆ ಜಿಲ್ಲಾ ಉಸ್ತುವಾರಿ ಸ್ಥಾನ ಕೊಡಬೇಕು ಎಂದು ಕೆಪಿಸಿಸಿ ಮಾಜಿ ಸದಸ್ಯ ಶಂಕರ ಮುನವಳ್ಳಿ ಒತ್ತಾಯಿಸಿದ್ದಾರೆ

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಲಕ್ಷ್ಮೀ ಹೆಬ್ಬಾಳಕರ ಮತ್ತು ಅಂಜಲಿ ನಿಂಬಾಳಕರ ವಿದ್ಯಾವಂತರಾಗಿದ್ದು ಬಡವರ ಕಷ್ಟಸುಖಗಳಿಗೆ ಸ್ಪಂದಿಸುವ ಗುಣ ಅವರಲ್ಲಿದೆ ಇವರ ಜೊತೆ ಗಣೇಶ ಹುಕ್ಕೇರಿಗೂ ಮಂತ್ರಿ ಸ್ಥಾನ ಕೊಡಬೇಕು ಲಕ್ಷ್ಮೀ ಹೆಬ್ಬಾಳಕರ ಅವರಿಗೆ ಜಿಲ್ಲಾ ಉಸ್ತುವಾರಿ ಸಚಿವ ಸ್ಥಾನ ನೀಡಬೇಕು ಎಂದು ಶಂಕರ ಮುನವಳ್ಳಿ ಒತ್ತಾಯಿಸಿದ್ದಾರೆ

ಬೆಳಗಾವಿ ಜಿಲ್ಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳನ್ನು ಗೆಲ್ಲಿಸಲು ಸತೀಶ ಜಾರಕಿಹೊಳಿ ಮತ್ತು ರಮೇಶ ಜಾರಕಿಹೊಳಿ ಶ್ರಮಿಸಿಲ್ಲ ಕಾಂಗ್ರೆಸ್ ಪಕ್ಷ ಜಾರಕಿಹೊಳಿ ಸಹೋದರರ ಆಸ್ತಿ ಅಲ್ಲ ಇದು ಕಾರ್ಯಕರ್ತರ ಆಸ್ತಿಯಾಗಿದ್ದು ಕಾಂಗ್ರೆಸ್ ಪಕ್ಷದ ಗೌರವ ಹೆಚ್ಚಿಸಿ ಕಾರ್ಯಕರ್ತರಲ್ಲಿ ಹೊಸ ಹುಮ್ಮಸ್ಸು ತುಂಬಿದ ಡಿಕೆ ಶಿವಕುಮಾರ್ ಅವರಿಗೆ ಉಪ ಮುಖ್ಯಮಂತ್ರಿ ಸ್ಥಾನ ನೀಡಬೇಕು ಎಂದು ಶಂಕರ ಮುನವಳ್ಳಿ ಅವರ ಒತ್ತಾಯವಾಗಿದೆ

ಬೆಳಗಾವಿಯ ಚರ್ಚ ಬದಿಯಲ್ಲಿರುವ ಜಾಗೆಯ ಹಗರಣದಲ್ಲಿ ಸತೀಶ ಜಾರಕಿಹೊಳಿ ಭಾಗಿಯಾಗಿದ್ದಾರೆ ಈ ಹಗರಣವನ್ನು ಸಿಬಿಐ ತನಿಖೆಗೆ ಒಪ್ಪಸುವಂತೆ ಹೈಕೋರ್ಟಿನಲ್ಲಿ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಯನ್ನು ದಾಖಲಿದಲಾಗಿದೆ ಸತೀಶ ಜಾರಕಿಹೊಳಿ ಅವರಿಗೆ ಸಮ್ಮಿಶ್ರ ಸರ್ಕಾರದಲ್ಲಿ ಮಂತ್ರಿ ಸ್ಥಾನ ನೀಡಿದರೆ ಕೇಸ್ ಮೂವ್ ಮಾಡುತ್ತೇನೆ ಎಂದು ಶಂಕರ ಮುನವಳ್ಳಿ ಎಚ್ಚರಿಕೆ ನೀಡಿದ್ದಾರೆ

Check Also

ಬೆಳಗಾವಿ ಮಹಾನಗರ ಪಾಲಿಕೆಯ ಇಬ್ಬರು ಸದಸ್ಯರ ಸದಸ್ಯತ್ವ ರದ್ದು……!!!

ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ ಒಂದು ಕಡೆ ಅಧಿಕಾರಿಗಳ ನಡುವೆ ತಿಕ್ಕಾಟ ಇನ್ನೊಂದು ಕಡೆ ಪಾಲಿಕೆ ಆಯುಕ್ತರನ್ನೇ ವರ್ಗಾವಣೆ ಮಾಡುವಂತೆ ಪಾಲಿಕೆ …

Leave a Reply

Your email address will not be published. Required fields are marked *