Breaking News

ಮಲ್ಲಮ್ಮನ‌ ಬದುಕು ನಮಗೆ ಆದರ್ಶವಾಗಲಿ: ಸಚಿವೆ ಶಶಿಕಲಾ ಜೊಲ್ಲೆ

 

ಬೆಳಗಾವಿ :ರಾಜ್ಯ ಮತ್ತು ಪ್ರಜೆಗಳಿಗೆ ಸಂಕಟ ಬಂದಾಗ ಕೈಗೆ ಖಡ್ಗ ತೆಗೆದುಕೊಂಡು ಕೆಚ್ಚೆದೆಯ ಹೋರಾಟ ಮಾಡಿದ ವೀರವನಿತೆಯರ ಬದುಕು ನಾವು ಮಾದರಿಯಾಗಿಟ್ಟುಕೊಳ್ಳಬೇಕು. ಇಂತಹ ವೀರ ಮಹಿಳೆಯರ ಕಥೆಗಳನ್ನು ಮಕ್ಕಳಿಗೆ ತಿಳಿಸುವ ಮೂಲಕ ಉತ್ತಮ ಸಮಾಜ ನಿರ್ಮಾಣಕ್ಕೆ ನಾವೆಲ್ಲರೂ ಮುಂದಾಗಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಚಿವರಾದ ಶಶಿಕಲಾ‌ ಜೊಲ್ಲೆ ಕರೆ ನೀಡಿದರು.

ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ಆಯೋಜಿಸಲಾಗಿದ್ದ ಬೆಳವಡಿ ಮಲ್ಲಮ್ಮ ಉತ್ಸವವನ್ನು ಶುಕ್ರವಾರ(ಫೆ.೨೮) ಸಂಜೆ ಉದ್ಘಾಟಿಸಿ ಅವರು ಮಾತನಾಡಿದರು

ಛತ್ರಪತಿ ಶಿವಾಜಿ ಮಹಾರಾಜರ ದೊಡ್ಡ ಸೈನ್ಯದ ಜತೆಗೆ‌ ಬೆಳವಡಿ ಮಲ್ಲಮ್ಮ ಸೆಣಸಾಡಿರುವುದು ಅಸಾಮಾನ್ಯ ಸಾಧನೆ. ಕನ್ನಡ ‌ನೆಲದ ವೀರಪರಂಪರೆಯ ಮಹಿಳೆ ಮಲ್ಲಮ್ಮ ಎಂದು‌ ಬಣ್ಣಿಸಿದರು.
ಬೆಳವಡಿ ಮಲ್ಲಮ್ಮನ‌ ದಿಟ್ಟ ವ್ಯಕ್ತಿತ್ವವನ್ನು ನಾವೆಲ್ಲರೂ ಪಾಲಿಸಿದರೆ ಸಾಧನೆ ಸಾಧ್ಯ ಎಂದರು.
ಹೆಣ್ಣು ಎಂಬ ಭೇದ ತೋರದೇ ಮಲ್ಲಮ್ಮನ ತಂದೆ-ತಾಯಿಗಳು ನೀಡಿದ ಪ್ರೋತ್ಸಾಹವು ಆಕೆಯಲ್ಲಿ ಅತ್ಯುತ್ತಮ ಸಂಸ್ಕಾರ ಮತ್ತು ಧೈರ್ಯಶಾಲಿ ವ್ಯಕ್ತಿತ್ವವನ್ನು ಬೆಳೆಸಿಕೊಳ್ಳಲು ಸಹಕಾರಿಯಾಯಿತು.
ಮೊದಲ ಮಹಿಳಾ ಸೈನ್ಯ ಕಟ್ಟಿದ ಬೆಳವಡಿ ಮಲ್ಲಮ್ಮ, ಬ್ರಿಟೀಷರ ವಿರುದ್ಧ ಹೋರಾಡಿದ ಕಿತ್ತೂರು ಚನ್ನಮ್ಮ, ಝಾನ್ಸಿರಾಣಿ ಲಕ್ಷ್ಮೀಬಾಯಿ ಅವರ ಹೋರಾಟದ ಬದುಕು ಇಂದಿನ ಮಹಿಳೆಯರು ಆದರ್ಶವಾಗಿಟ್ಟುಕೊಳ್ಳಬೇಕು ಎಂದು ಸಚಿವೆ ಶಶಿಕಲಾ ಜೊಲ್ಲೆ ಕರೆ ನೀಡಿದರು.

ರಾಣಿ ಮಲ್ಲಮ್ಮ ಪ್ರಶಸ್ತಿ ಪ್ರದಾನ:

ಖ್ಯಾತ ಅಂಕಣಕಾರರಾದ ಡಾ.ವಿಜಯಲಕ್ಷ್ಮೀ ಬಾಳೇಕುಂದ್ರಿ ಅವರಿಗೆ ರಾಣಿ ಮಲ್ಲಮ್ಮ ಪ್ರಶಸ್ತಿಯನ್ನು ಸಚಿವರಾದ ಶಶಿಕಲಾ ಜೊಲ್ಲೆ ಅವರು ಪ್ರದಾನ ಮಾಡಿದರು.
ಇದೇ ಸಂದರ್ಭದಲ್ಲಿ ಬೆಳವಡಿಯ ಈಶಪ್ರಭು ಶಿಕ್ಷಣ ಸಂಸ್ಥೆಯ ನಿವೃತ್ತ ಪ್ರಾಂಶುಪಾಲರಾದ ಮ.ಮ.ಕಾಡೇಶನವರ ಅವರಿಗೆ ರಾಜಶ ಈಶಪ್ರಭು ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.
ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಡಾ.ವಿಜಯಲಕ್ಷ್ಮೀ ಬಾಳೇಕುಂದ್ರಿ ಅವರು, ಬೆಳವಡಿ ಮಲ್ಲಮ್ಮನ ಹೋರಾಟವನ್ನು ಸ್ಮರಿಸಿದರು.

ಶಾಸಕ ಮಹಾಂತೇಶ ಕೌಜಲಗಿ ಅಧ್ಯಕ್ಷತೆ ವಹಿಸಿದ್ದರು. ಹೂಲಿಯ ಹಿರೇಮಠ ಬೆಳವಡಿ ಸಂಸ್ಥಾನದ ರಾಜಗುರುಗಳು ಶಿವಮಹಾಂತ ಶಿವಾಚಾರ್ಯ ಸ್ವಾಮೀಜಿ ಸಾನಿಧ್ಯ ವಹಿಸಿದ್ದರು.

ಜಿಲ್ಲಾಧಿಕಾರಿ ಡಾ.ಎಸ್. ಬಿ.ಬೊಮ್ಮನಹಳ್ಳಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ, ಜಿಲ್ಲಾ ಪಂಚಾಯತ ಸದಸ್ಯರಾದ ಈರಣ್ಣ ಕರೀಕಟ್ಟಿ, ಅನಿಲ್ ಮೇಕಲಮರಡಿ, ತಾಲ್ಲೂಕು ಪಂಚಾಯತ ಅಧ್ಯಕ್ಷೆ ನೀಲವ್ವ, ಮಾಜಿ ಶಾಸಕರಾದ ವಿ.ಐ.ಪಾಟೀಲ, ಬೈಲಹೊಂಗಲ ಉಪ ವಿಭಾಗಾಧಿಕಾರಿ ಶಿವಾನಂದ ಭಜಂತ್ರಿ ಮತ್ತಿತರರು ಉಪಸ್ಥಿತರಿದ್ದರು.
ಇದಕ್ಕೂ ಮುಂಚೆ ಬೆಳಿಗ್ಗೆ ವಿವಿಧ ಕಾರ್ಯಕ್ರಮಗಳು ಜರುಗಿದವು.
ಬೆಳವಡಿ ಮಲ್ಲಮ್ಮ ಉತ್ಸವದ ಅಂಗವಾಗಿ ಬೆಳವಡಿ ಸಂಸ್ಥಾನದ ಧ್ವಜಾರೋಹಣ ನೆರವೇರಿಸಿ, ವೀರಜ್ಯೋತಿಯನ್ನು ಬರಮಾಡಿಕೊಳ್ಳಲಾಯಿತು.
ಶಾಸಕ ಮಹಾಂತೇಶ ಕೌಜಲಗಿ, ಉಪ ವಿಭಾಗಾಧಿಕಾರಿಗಳಾದ ಶಿವಾನಂದ ಭಜಂತ್ರಿ ಮತ್ತಿತರರು ಉಪಸ್ಥಿತರಿದ್ದರು.
****

Check Also

ವೀಕ್ಲಿ ಮ್ಯಾರೇಜ್,ಇದು ಲಕ್ಷ ಲಕ್ಷ ರೂಗಳ ಪ್ಯಾಕೇಜ್ ಹುಡುಗರ ಲೈಫ್ ಡ್ಯಾಮೇಜ್ …..!!!

ಬೆಳಗಾವಿ – ಹೆಣ್ಣು ಮಕ್ಕಳ ಮಾರಾಟ ಆಯ್ತು,ಹನಿ ಟ್ರ್ಯಾಪ್ ಗೋಳಾಟ ಆಯ್ತು ಈಗ ಹೊಸದೊಂದ ಆಟ ಶುರುವಾಗಿದೆ ಇದು ಮದ್ಯ …

Leave a Reply

Your email address will not be published. Required fields are marked *