Breaking News

ಎಂಇಎಸ್ ಪುಂಡನ ವಿರುದ್ಧ ಬೆಳಗಾವಿಯಲ್ಲಿ ಎಫ್ಐಆರ್ ದಾಖಲು.

ಬೆಳಗಾವಿ-ಎಂಇಎಸ್ ಮುಖಂಡ ಶುಭಂ ಶೆಳಕೆ ವಿರುದ್ಧ ಬೆಳಗಾವಿಯಲ್ಲಿ ಎಫ್ಐಆರ್ ದಾಖಲಾಗಿದೆ.ಕರ್ನಾಟಕ ಗಡಿ ಭಾಗ ಮಹಾರಾಷ್ಟ್ರಕ್ಕೆ ಸೇರಿಸಿ ಎಂದು ವಿವಾದಿತ ನಕ್ಷೆ ತಯಾರಿಸಿ ,ಈ ನಕ್ಷೆಯಲ್ಲಿ ಬೆಳಗಾವಿ,ಬೀದರ್ ಬಾಲ್ಕಿ ಮಹಾರಾಷ್ಟ್ರಕ್ಕೆ ಸೇರಿಸಿದ ನಕ್ಷೆಯನ್ನು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿದ ಹಿನ್ನೆಲೆಯಲ್ಲಿ ಎಂಇಎಸ್ ಮುಖಂಡ ಶುಭಂ ಶೆಳಕೆ ವಿರುದ್ಧ ಈಗ ದೂರು ದಾಖಲು ಆಗಿದೆ.

ಬೆಳಗಾವಿಯ ಮಾಳಮಾರುತಿ ಠಾಣೆಯಲ್ಲಿ ಶುಭಂ ವಿರುದ್ಧ ಎಫ್ಐಆರ್ ದಾಖಲಾಗಿದ್ದು ,ಕರವೇ ಕಾರ್ಯಕರ್ತ ವಿನಾಯಕ ಭೋವಿ ನೀಡಿದ ದೂರಿನ ಮೇರೆಗೆ FIR ದಾಖಲಾಗಿದೆ ಐಟಿ ಆ್ಯಕ್ಟ್ 2000(U/s-66), ಐಪಿಸಿ ಸೆಕ್ಷನ್ 1860(U/s-153B)ರಡಿ ಕೇಸ್ ಬುಕ್ ಆಗಿದೆ.ವಿವಾದಿತ ಪೋಸ್ಟ್ ಹಾಕುವ ಮೂಲಕ ಗಡಿ ಖ್ಯಾತೆ ತೆಗೆದಿದ್ದ ಎಂಇಎಸ್ ಪುಂಡ ಶುಭಂ,ವಿವಾದಾತ್ಮಕ ವಿಡಿಯೋ ಸಹ ಪೋಸ್ಟ್ ಮಾಡಿದ್ದ.

*ಕರ್ನಾಟಕದ ಬೆಳಗಾವಿ, ನಿಪ್ಪಾಣಿ, ಕಾರವಾರ, ಬೀದರ, ಭಾಲ್ಕಿ ಮಹಾರಾಷ್ಟ್ರಕ್ಕೆ ಸೇರಿಸಿದ ರೀತಿಯ‌ ಗ್ರಾಫಿಕ್ ವಿಡಿಯೋ, ಫೋಟೋ ಪೋಸ್ಟ್* ಮಾಡಿ ಪುಂಡಾಟಿಕೆ ಪ್ರದರ್ಶಿಸಿದ್ದ‌.ಎಂಇಎಸ್ ಮುಖಂಡ ಶುಭಂ ಶೆಳಕೆ ಫೇಸ್‌ಬುಕ್ ಪೇಜ್ ಅಕೌಂಟ್‌ನಲ್ಲಿ ಪೋಸ್ಟ್ ಮಾಡಿದ್ದ.ಸಂಪೂರ್ಣ ಸಂಯುಕ್ತ ಮಹಾರಾಷ್ಟ್ರ ಶೀರ್ಷಿಕೆಯಡಿ ವಿವಾದಿತ ನಕ್ಷೆಯ ಪೋಸ್ಟ್ ಮಾಡಿದ್ದ.

ಮಹಾರಾಷ್ಟ್ರವಾದಿಗಳೇ ನಮಗೆಮನಃಪೂರ್ವಕವಾಗಿ ಮಹಾರಾಷ್ಟ್ರ ದಿನಕ್ಕೆ ಶುಭಕೋರಲು ಆಗುತ್ತಿಲ್ಲ,
ಸಂಯುಕ್ತ ಮಹಾರಾಷ್ಟ್ರಕ್ಕೆ ಬೆಳಗಾವಿ ರಕ್ತ ಹೋರಾಟದ ಮುನ್ನುಡಿ ಬರೆದಿದೆ.ಬೆಳಗಾವಿ ಸೇರಿ ಗಡಿ ಭಾಗದ ಮರಾಠಿಗರು ನ್ಯಾಯಕ್ಕಾಗಿ ಕಾಯುತ್ತಿದ್ದೇವೆ ಎಂದು ವಿಡಿಯೋ ಜೊತೆಗೆ ಪೋಸ್ಟ್ ಹಾಕಿದ್ದ ನಾಡದ್ರೋಹಿ ಶುಭಂ ಶೆಳಕೆಗೆಪೋಸ್ಟ್ ಡಿಲೀಟ್ ಮಾಡುವಂತೆ ಠಾಣೆಗೆ ಕರೆಸಿ ಪೋಲೀಸರು ವಾರ್ನಿಂಗ್ ಮಾಡಿದ್ದರು.ಪೊಲೀಸರು ಎಚ್ಚರಿಕೆ ನೀಡಿದ್ದರೂ ಪೋಸ್ಟ್ ಡಿಲೀಟ್ ಮಾಡದೇ ಉದ್ಧಟತನ ಮೆರೆದಿದ್ದ ಶುಭಂ ವಿರುದ್ಧ ಈಗ ಎಫ್ ಐ ಆರ್ ದಾಖಲಾಗಿದೆ.

Check Also

ಜ್ಞಾನೇಶ್ವರ ಮುನಿ ಮಹಾರಾಜರು (86) ವಿಧಿವಶ

ಬೆಳಗಾವಿ -ಯಮ ಸಲ್ಲೇಖನ ವೃತ್ತದ ಮೂಲಕ ಜ್ಞಾನೇಶ್ವರ ಮುನಿ ಮಹಾರಾಜರು (86) ಇಹಲೋಕವನ್ನು ತ್ಯೇಜಿಸಿದ್ದಾರೆ. ಬೈಲಹೊಂಗಲ ತಾಲೂಕಿನ ದೇವಲಾಪುರ ಕ್ಷೇತ್ರದಲ್ಲಿ …

Leave a Reply

Your email address will not be published. Required fields are marked *