ನಾಳೆ ಸಂಜೆ 5 ಗಂಟೆಗೆ ಶ್ರೀಗಳವರ ಸಂಕಲ್ಪದ ಪ್ರಕಾರದಂತೆಯೇ ಸಕಲ ಸರ್ಕಾರಿ ಗೌರವಗಳೊಂದಿಗೆ ಅವರ ಅಂತ್ಯಕ್ರಿಯೆ ನಡೆಯಲಿದೆ. ಕೆಲವು ವರ್ಷಗಳ ಹಿಂದೆಯೇ ತಮ್ಮ ಅಂತ್ಯಕ್ರಿಯೆಯ ವಿಧಿವಿಧಾನಗಳ ಬಗ್ಗೆ ಇಚ್ಛೆಯನ್ನು ಸ್ಪಷ್ಟವಾಗಿ ತಿಳಿಸಿದ್ದ ಸಿದ್ದೇಶ್ವರ ಶ್ರೀಗಳು ತಮಗಾಗಿ ಯಾವುದೇ ಸ್ಮಾರಕ ನಿರ್ಮಿಸಬಾರದು ಎಂಬ ಸಂಕಲ್ಪ ಹೊಂದಿದ್ದರು ಎಂದು ಯೋಗಾಶ್ರಮದ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಶತಮಾನದ ಸಂತ, ದೇಶ ಕಂಡ ಎರಡನೇ ವಿವೇಕಾನಂದ ಎಂದೇ ಪೂಜಿಸಲ್ಪಡುವ ವಿಜಯಪುರದ ಜ್ಞಾನಯೋಗಾಶ್ರಮದ ಸಿದ್ದೇಶ್ವರ ಶ್ರೀಗಳು (82) ಇಹಲೋಕ ತ್ಯಜಿಸಿದ್ದಾರೆ.
ಅನಾರೋಗ್ಯಕ್ಕೀಡಾಗಿದ್ದ ಶ್ರೀಗಳು ಕೆಲವು ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದರು. ಇಂದು ಸಂಜೆ ಬಳಿಕ ಶ್ರೀಗಳ ಆರೋಗ್ಯ ಚಿಂತಾಜನಕವಾಗಿತ್ತು. ಶ್ರೀಗಳ ಅಂತಿಮ ದರ್ಶನ ಪಡೆಯುವುದಕ್ಕೆ ವಿಜಯಪುರದ ಜ್ಞಾನಯೋಗಾಶ್ರಮದತ್ತ ಭಕ್ತರು ಸಾಗರೋಪಾದಿಯಲ್ಲಿ ಆಗಮಿಸುತ್ತಿದ್ದಾರೆ.
ವಿಜಯಪುರ ಜಿಲ್ಲೆಯ ತಿಕೋಟಾ ತಾಲೂಕಿನ ಬಿಜ್ಜರಗಿ ಗ್ರಾಮದ ರೈತ ಕುಟುಂಬದಲ್ಲಿ 1941 ರ ಅಕ್ಟೋಬರ್ 24 ರಂದು ಜನಿಸಿದ್ದ ಶ್ರೀಗಳ ಪೂರ್ವಾಶ್ರಮದ ಹೆಸರು ಸಿದ್ದಗೊಂಡಪ್ಪಬಿಜ್ಜರಗಿ ಗ್ರಾಮದ ಶಾಲೆಯಲ್ಲಿಯೇ 4 ನೇ ತರಗತಿವರೆಗೆ ಓದಿದ ನಂತರ ಅವರು ವೇದಾಂತ ಕೇಸರಿ ಎಂದೇ ಪ್ರಖ್ಯಾತರಾಗಿದ್ದ ಜ್ಞಾನಯೋಗಾಶ್ರಮದ ಮಲ್ಲಿಕಾರ್ಜುನ ಸ್ವಾಮಿಗಳವರನ್ನು ಆಶ್ರಯಿಸಿದರು. ಶ್ರೀಗಳಿಗೆ ಕನ್ನಡದ ಜೊತೆ ಸಂಸ್ಕೃತ, ಇಂಗ್ಲೀಷ್, ಮರಾಠಿ, ಮತ್ತು ಹಿಂದಿ ಭಾಷೆಗಳಲ್ಲಿ ಅಪಾರ ಪಾಂಡಿತ್ಯವಿತ್ತು.
ಅತ್ಯಂತ ಸರಳ ಸಜ್ಜನಿಕೆಯ ಸಾಕಾರ ಮೂರ್ತಿಯಾಗಿದ್ದ ಸಿದ್ಧೇಶ್ವರ ಸ್ವಾಮಿಗಳವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ, ಸಿಎಂ ಬಸವರಾಜ ಬೊಮ್ಮಾಯಿ ಸೇರಿದಂತೆ ದೇಶ, ರಾಜ್ಯದ ಗಣ್ಯರು ಸಂತಾಪ ಸೂಚಿಸಿದ್ದಾರೆ. ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಶ್ರೀಗಳವರ ಆರೋಗ್ಯ ವಿಚಾರಿಸಲು ಆಗಮಿಸಿದ್ದಾಗ ಪ್ರಧಾನಿ ಮೋದಿ ದೂರವಾಣಿ ಕರೆ ಮೂಲಕ ಶ್ರೀಗಳವರ ಆರೋಗ್ಯ ವಿಚಾರಿಸಿದ್ದರು
ನಾಳೆ ಸಂಜೆ 5 ಗಂಟೆಗೆ ಶ್ರೀಗಳವರ ಸಂಕಲ್ಪದ ಪ್ರಕಾರದಂತೆಯೇ ಸಕಲ ಸರ್ಕಾರಿ ಗೌರವಗಳೊಂದಿಗೆ ಅವರ ಅಂತ್ಯಕ್ರಿಯೆ ನಡೆಯಲಿದೆ. ಕೆಲವು ವರ್ಷಗಳ ಹಿಂದೆಯೇ ತಮ್ಮ ಅಂತ್ಯಕ್ರಿಯೆಯ ವಿಧಿವಿಧಾನಗಳ ಬಗ್ಗೆ ಇಚ್ಛೆಯನ್ನು ಸ್ಪಷ್ಟವಾಗಿ ತಿಳಿಸಿದ್ದ ಶ್ರೀಗಳವರು ತಮಗಾಗಿ ಯಾವುದೇ ಸ್ಮಾರಕ ನಿರ್ಮಿಸಬಾರದು ಎಂಬ ಸಂಕಲ್ಪ ಹೊಂದಿದ್ದರು ಎಂದು ಯೋಗಾಶ್ರಮದ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.