ಸಿದ್ಧನಭಾವಿ ಕೆರೆಯ ಅಂಗಳದಲ್ಲಿ ರಾಜಕೀಯ ಗುದ್ದಾಟ
ಬೆಳಗಾವಿ- ಹಿರೇಬಾಗೇವಾಡಿ ಗ್ರಾಮದ ಸಿದ್ದನಬಾವಿ ಕೆರೆಯ ಅಂಗಳ ರಾಜಕೀಯ ಗುದ್ದಾಟಕ್ಕೆ ಸಾಕ್ಷಿಯಾಯಿತು ಕೆರೆ ತುಂಬಿಸುವ ಯೋಜನೆಗೆ ಚಾಲನೆ ನೀಡಲು ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಆಗಮಿಸುತ್ತಿದ್ದಂತೆಯೇ ಕಾಂಗ್ರೆಸ್ ಬಿಜೆಪಿ ಕಾರ್ಯಕರ್ತರು ಘೋಷಣೆ ಕೂಗುವ ಮೂಲಕ ಕೆಲ ಕಾಲ ಆತಂಕದ ವಾತಾವರಣ ಸೃಷ್ಠಿಸಿದರು
ಕಾಂಗ್ರೆಸ್ ಕಾರ್ಯಕರ್ತ ರು ಲಕ್ಷ್ಮೀ ರಾಹುಲ್ ಎಂದು ಘೋಷಣೆ ಕೂಗಿದರೆ ಇನ್ನೊಂದು ಕಡೆ ಬಿಜೆಪಿ ಕಾರ್ಯಕರ್ತರು ಮೋದಿ ಸಂಜಯ್ ಎಂಬ ಘೋಷಣೆ ಕೂಗಿದರು ಚೀರಾಡ ಕೂಗಾಟ ಗದ್ದಲಗಳ ನಡುವೆಯೇ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಕೆರೆ ತುಂಬಿಸುವ ಯೋಜನೆಗೆ ಭೂಮಿ ಪೂಜೆ ನೆರವೇರಿಸಿದರು
ಸುಮಾರು ಅರ್ಧ ಘಂಟೆ ಕಾಲ ನಡೆದ ಕಾರ್ಯಕ್ರಮದಲ್ಲಿ ಗದ್ದಲ ಕೂಗಾಟ ಚೀರಾಟವೇ ಮೇಲಾಯಿತು ಸಂಸದ ಸುರೇಶ ಅಂಗಡಿ ಮಹಾಂತೇಶ ಕವಟಗಿಮಠ ಸೇರಿದಂತೆ ನೀರಾವರಿ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು
ಈ ಸಂಧರ್ಭದಲ್ಲಿ ಮಾತನಾಡಿದ ಸಂಸದ ಸುರೇಶ ಅಂಗಡಿ ರಾಜ್ಯ ಸರ್ಕಾರ ಹಿರೇಬಾಗೇವಾಡಿ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳ ಕೆರೆ ತುಂಬಿಸುವ ಯೋಜನೆಗೆ ಅನುದಾನ ನೀಡಿರುವ ಮುಖ್ಯಮಂತ್ರಿ ಸಿದ್ಧರಾಮಯ್ಯ ಮತ್ತು ನೀರಾವರಿ ಸಚಿವ ಎಂಬಿ ಪಾಟೀಲರಿಗೆ ಅಭಿನಂಧನೆ ಸಲ್ಲಿಸುತ್ತೇನೆ ಇದು ಸರ್ಕಾರಿ ಕಾರ್ಯಕ್ರಮ ಇಲ್ಲಿ ಗದ್ದಲ ಮಾಡುವದು ಸರಿಯಲ್ಲ ನಾಯಕರಲ್ಲಿ ಯಾವುದೇ ಗೊಂದಲ ಇಲ್ಲ ಕಾರ್ಯಕರ್ತರಲ್ಲಿ ಸ್ವಲ್ಪ ಗೊಂದಲ ಇದೆ ಆದರೆ ಅಭಿವೃದ್ದಿ ವಿಚಾರದಲ್ಲಿ ರಾಜಕೀಯ ಸಲ್ಲದು ಎಂದು ಸಂಸದ ಸುರೇಶ ಅಂಗಡಿ ಹೇಳಿದರು
ಗದ್ದಲ ಚೀರಾಟ ನಡೆಸಿದ ಎರಡೂ ಪಕ್ಷಗಳ ಕಾರ್ಯಕರ್ತರನ್ನು ರಮೇಶ ಜಾರಕಿಹೊಳಿ ಸಮಾಧಾನ ಪಡಿಸುವ ಮೂಲಕ ಎರಡೂ ಪಕ್ಷಗಳ ನಾಯಕರು ಗುದ್ದಲಿ ಪೂಜೆ ನೆರವೇರಿಸಿದರು
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ