ಸ್ಮಾರ್ಟ್ ಸಿಟಿ ಕಾಮಗಾರಿ,ಮೂರು ತಿಂಗಳಲ್ಲಿ ಮುಗಿಸಲು ವಾರ್ನಿಂಗ್…!!

ಸ್ಮಾರ್ಟ್ ಸಿಟಿ ಕಾಮಗಾರಿ: ಪ್ರಗತಿ ಪರಿಶೀಲನೆ
———————————————————-
ಮೂರು ತಿಂಗಳಲ್ಲಿ ಕಾಮಗಾರಿ ಪೂರ್ಣಗೊಳಿಸಲು ಉಸ್ತುವಾರಿ ಕಾರ್ಯದರ್ಶಿ ಎಲ್.ಕೆ.ಅತೀಕ್ ಗಡುವು

ಬೆಳಗಾವಿ,: ರಸ್ತೆ ನಿರ್ಮಾಣ ಸೇರಿದಂತೆ ಸ್ಮಾರ್ಟ್ ಸಿಟಿ ಯೋಜನೆಯಡಿ ನಗರದಲ್ಲಿ ಕೈಗೆತ್ತಿಕೊಳ್ಳಲಾಗಿರುವ ಎಲ್ಲ ಪ್ರಮುಖ ಕಾಮಗಾರಿಗಳನ್ನು ಮೂರು ತಿಂಗಳಲ್ಲಿ ಪೂರ್ಣಗೊಳಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ಎಲ್.ಕೆ‌.ಅತೀಕ್ ಅವರು ಸೂಚನೆ ನೀಡಿದ್ದಾರೆ.

ಸ್ಮಾರ್ಟ್ ಸಿಟಿ ಕಚೇರಿಯಲ್ಲಿ ಬುಧವಾರ (ಫೆ‌.24) ಸ್ಮಾರ್ಟ್ ಸಿಟಿ ಯೋಜನೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಕಾಮಗಾರಿಗಳು ನಿಧಾನಗತಿಯಲ್ಲಿ ನಡೆಯುತ್ತಿರುವ ಬಗ್ಗೆ ದೂರುಗಳು ಬರುತ್ತಿರುವೆ. ಆದ್ದರಿಂದ ಕಾಮಗಾರಿಗಳನ್ನು ಚುರುಕುಗೊಳಿಸಿ ಮೂರು ತಿಂಗಳಿನಲ್ಲಿ ಪೂರ್ಣಗೊಳಿಸಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದರು.

ಮಳೆಗಾಲಕ್ಕಿಂತ ಮುಂಚೆಯೇ ಕಾಮಗಾರಿಗಳನ್ನು ಪೂರ್ಣಗೊಳಿಸಿ ಸಾರ್ವಜನಿಕರ ಬಳಕೆಗೆ ಕಲ್ಪಿಸುವುದರಿಂದ ಅನುಕೂಲವಾಗುತ್ತದೆ. ಆದ್ದರಿಂದ ರಸ್ತೆ, ವಿದ್ಯುದ್ದೀಕರಣ ಕಾಮಗಾರಿಗಳನ್ನು ಆದ್ಯತೆ ಮೇರೆಗೆ ಪೂರ್ಣಗೊಳಿಸಬೇಕು ಎಂದು ತಿಳಿಸಿದರು.

ಘನತ್ಯಾಜ್ಯ ನಿರ್ವಹಣೆ-ವೈಜ್ಞಾನಿಕ ಪದ್ಧತಿ ಅಳವಡಿಕೆಗೆ ಸಲಹೆ:

ನಾಗಾಲೋಟದಲ್ಲಿ ಬೆಳೆಯುತ್ತಿರುವ ಬೆಳಗಾವಿ ನಗರದಲ್ಲಿ ಮುಂಬರುವ ದಿನಗಳಲ್ಲಿ ಘನತ್ಯಾಜ್ಯವನ್ನು ವೈಜ್ಞಾನಿಕ ವಿಧಾನದಲ್ಲಿ ಬಳಕೆ ಮಾಡಿಕೊಳ್ಳುವ ಕುರಿತು ಉಸ್ತುವಾರಿ ಕಾರ್ಯದರ್ಶಿ ಅತೀಕ್ ಅವರು ಚರ್ಚೆ ನಡೆಸಿದರು.

ಆರಂಭಿಕ ಹಂತದಲ್ಲಿಯೇ ಕೀಟಗಳ ಲಾರ್ವಾ ಬಳಕೆ ಮಾಡಿಕೊಳ್ಳುವ ತಂತ್ರಜ್ಞಾನವನ್ನು ಅಳವಡಿಸಿಕೊಳ್ಳುವ ಕುರಿತು ಚರ್ಚೆ ನಡೆಸಿದ ಅವರು, ಈ ತಂತ್ರಜ್ಞಾನ ಅಳವಡಿಸಿಕೊಂಡರೆ ಹೋಟೆಲ್ ತ್ಯಾಜ್ಯ, ತರಕಾರಿ ಮತ್ತು ಮಾಂಸದ ತ್ಯಾಜ್ಯವನ್ನು ಕೂಡ ಸಮರ್ಪಕವಾಗಿ ನಿರ್ಹವಿಸಬಹುದು ಎಂದು ತಿಳಿಸಿದರು.

ಬೆಳಗಾವಿ ಸ್ಮಾರ್ಟ್ ಸಿಟಿ ಯೋಜನೆಯ ವ್ಯವಸ್ಥಾಪಕ ನಿರ್ದೇಶಕ ಶಶಿಧರ್ ಕುರೇರ್ ಅವರು, ಸ್ಮಾರ್ಟ್ ಸಿಟಿ ಕಾಮಗಾರಿಗಳ ಕುರಿತು ಮಾಹಿತಿಯನ್ನು ನೀಡಿದರು.

ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ದರ್ಶನ್ ಎಚ್.ವಿ., ಅಪರ ಜಿಲ್ಲಾಧಿಕಾರಿ ಅಶೋಕ ದುಡಗುಂಟಿ, ಮಹಾನಗರ ಪಾಲಿಕೆ ಆಯುಕ್ತರಾದ ಜಗದೀಶ್ ಕೆ.ಎಚ್. ಸೇರಿದಂತೆ ಸ್ಮಾರ್ಟ್ ಸಿಟಿ ಹಾಗೂ ಪಾಲಿಕೆಯ ಅಭಿಯಂತರರು ಸಭೆಯಲ್ಲಿ ಉಪಸ್ಥಿತರಿದ್ದರು.
***

Check Also

ನಿಶ್ಚಿತವಾಗಿದ್ದ ಮದುವೆ ರದ್ದು ಯುವಕನ ಆತ್ಮಹತ್ಯೆ

ಬೆಳಗಾವಿ-ನಿಶ್ಚಿತಯಗೊಂಡ ಮದುವೆ ರದ್ದಾಗಿ, ಸಂಬಂಧಗಳೆಲ್ಲವೂ ಮುರಿದು ಹೋದಕಾರಣ ಯುವಕ ಆತ್ಮಹತ್ಯೆಗೆ ಶರಣಾದ ಘಟನೆ ಬೆಳಗಾವಿ ತಾಲೂಕಿನ ಕೆಕೆಕೊಪ್ಪ ಗ್ರಾಮದಲ್ಲಿ ನಡೆದಿದೆ. …

Leave a Reply

Your email address will not be published. Required fields are marked *